ಇಸ್ರೇಲ್ ಅಧ್ಯಕ್ಷ ಹೆರ್ಜೋಗ್- ಪ್ರಧಾನಿ ಮೋದಿ ಭೇಟಿ: ಮಾತುಕತೆ, ರಾಜಕಾಂತ್ರಿಕತೆ ಮೂಲಕ ಪ್ಯಾಲೆಸ್ತೀನ್ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯ  

ಗಾಜಾ ಯುದ್ಧ ನಡುವೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.  ದುಬೈ: ಗಾಜಾ ಯುದ್ಧ ನಡುವೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.  ದುಬೈ ನಲ್ಲಿ ನಡೆದ ಸಿಒಪಿ28  ಶೃಂಗಸಭೆಯ ಸಂದರ್ಭದಲ್ಲಿ ಹೆರ್ಜೋಗ್ ಅವರನ್ನು ಭೇಟಿಯಾದ ಪ್ರಧಾನಿ ಮೋದಿ, ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯಲ್ಲಿನ ಜೀವಹಾನಿಯ ಬಗ್ಗೆ ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಿಂದ ಜಾಗತಿಕ ಇಂಗಾಲದ ಹೊರಸೂಸುವಿಕೆಗೆ ಶೇ.4ಕ್ಕಿಂತ ಕಡಿಮೆ ಕೊಡುಗೆ: ಗ್ರೀನ್  ಕ್ರೆಡಿಟ್ ಉಪಕ್ರಮ ಘೋಷಿಸಿದ ಪ್ರಧಾನಿ ಮೋದಿ ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಮಾರಣಾಂತಿಕ ದಾಳಿ ನಡೆಸುವ ಮೂಲಕ ಯುದ್ಧ ಆರಂಭವಾಗಿದ್ದು, ಈ ಪ್ರದೇಶದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಮೋದಿ ಮತ್ತು ಹೆರ್ಜೋಗ್ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಸಂಕಷ್ಟದಲ್ಲಿರುವ ಜನರಿಗೆ ನಿರಂತರ ಮಾನವೀಯ  ನೆರವು ಮತ್ತು ಸುರಕ್ಷತೆ ಅಗತ್ಯವನ್ನು ಪ್ರಧಾನ ಮಂತ್ರಿ ಪುನರುಚ್ಚರಿಸಿದರು ಎಂದು ಬಾಗ್ಚಿ ಹೇಳಿದ್ದಾರೆ.  ಶೃಂಗಸಭೆಯಲ್ಲಿ ವಿಶ್ವದಾದ್ಯಂತ  ಡಜನ್ ಗಟ್ಟಲೆ ನಾಯಕರನ್ನು ಭೇಟಿಯಾಗಿದ್ದು, ಹಮಾಸ್ ಹೇಗೆ ಕದನ ವಿರಾಮ ಒಪ್ಪಂದಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿದೆ ಮತ್ತು  ಅಂತಾರಾಷ್ಟ್ರೀಯ ಸಮುದಾಯದ ಕಾರ್ಯಸೂಚಿಯಲ್ಲಿ ಒತ್ತೆಯಾಳುಗಳ ಬಿಡುಗಡೆ ಬೇಡಿಕೆ ಮತ್ತೆ ಮತ್ತೆ ಪುನರಾವರ್ತನೆ  ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿರುವುದಾಗಿ ಹೆರ್ಜೋಗ್ ಹೇಳಿದ್ದಾರೆ. 

ಇಸ್ರೇಲ್ ಅಧ್ಯಕ್ಷ ಹೆರ್ಜೋಗ್- ಪ್ರಧಾನಿ ಮೋದಿ ಭೇಟಿ: ಮಾತುಕತೆ, ರಾಜಕಾಂತ್ರಿಕತೆ ಮೂಲಕ ಪ್ಯಾಲೆಸ್ತೀನ್ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯ
 
Linkup
ಗಾಜಾ ಯುದ್ಧ ನಡುವೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.  ದುಬೈ: ಗಾಜಾ ಯುದ್ಧ ನಡುವೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.  ದುಬೈ ನಲ್ಲಿ ನಡೆದ ಸಿಒಪಿ28  ಶೃಂಗಸಭೆಯ ಸಂದರ್ಭದಲ್ಲಿ ಹೆರ್ಜೋಗ್ ಅವರನ್ನು ಭೇಟಿಯಾದ ಪ್ರಧಾನಿ ಮೋದಿ, ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯಲ್ಲಿನ ಜೀವಹಾನಿಯ ಬಗ್ಗೆ ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಿಂದ ಜಾಗತಿಕ ಇಂಗಾಲದ ಹೊರಸೂಸುವಿಕೆಗೆ ಶೇ.4ಕ್ಕಿಂತ ಕಡಿಮೆ ಕೊಡುಗೆ: ಗ್ರೀನ್  ಕ್ರೆಡಿಟ್ ಉಪಕ್ರಮ ಘೋಷಿಸಿದ ಪ್ರಧಾನಿ ಮೋದಿ ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಮಾರಣಾಂತಿಕ ದಾಳಿ ನಡೆಸುವ ಮೂಲಕ ಯುದ್ಧ ಆರಂಭವಾಗಿದ್ದು, ಈ ಪ್ರದೇಶದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಮೋದಿ ಮತ್ತು ಹೆರ್ಜೋಗ್ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಸಂಕಷ್ಟದಲ್ಲಿರುವ ಜನರಿಗೆ ನಿರಂತರ ಮಾನವೀಯ  ನೆರವು ಮತ್ತು ಸುರಕ್ಷತೆ ಅಗತ್ಯವನ್ನು ಪ್ರಧಾನ ಮಂತ್ರಿ ಪುನರುಚ್ಚರಿಸಿದರು ಎಂದು ಬಾಗ್ಚಿ ಹೇಳಿದ್ದಾರೆ.  ಶೃಂಗಸಭೆಯಲ್ಲಿ ವಿಶ್ವದಾದ್ಯಂತ  ಡಜನ್ ಗಟ್ಟಲೆ ನಾಯಕರನ್ನು ಭೇಟಿಯಾಗಿದ್ದು, ಹಮಾಸ್ ಹೇಗೆ ಕದನ ವಿರಾಮ ಒಪ್ಪಂದಗಳನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತಿದೆ ಮತ್ತು  ಅಂತಾರಾಷ್ಟ್ರೀಯ ಸಮುದಾಯದ ಕಾರ್ಯಸೂಚಿಯಲ್ಲಿ ಒತ್ತೆಯಾಳುಗಳ ಬಿಡುಗಡೆ ಬೇಡಿಕೆ ಮತ್ತೆ ಮತ್ತೆ ಪುನರಾವರ್ತನೆ  ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿರುವುದಾಗಿ ಹೆರ್ಜೋಗ್ ಹೇಳಿದ್ದಾರೆ.  ಇಸ್ರೇಲ್ ಅಧ್ಯಕ್ಷ ಹೆರ್ಜೋಗ್- ಪ್ರಧಾನಿ ಮೋದಿ ಭೇಟಿ: ಮಾತುಕತೆ, ರಾಜಕಾಂತ್ರಿಕತೆ ಮೂಲಕ ಪ್ಯಾಲೆಸ್ತೀನ್ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯ