ಉಜ್ವಲ ಯೋಜನೆ 2ನೇ ಹಂತಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ!

ಉಜ್ವಲ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಾಲನೆ ನೀಡಿದರು. ಉತ್ತರ ಪ್ರದೇಶದ ಮಹೋಬದಲ್ಲಿ ಫಲಾನುಭವಿಗಳಿಗೆ ಉಚಿತ ಎಲ್‌ಪಿಜಿ ಸಂಪರ್ಕ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ಉಜ್ವಲ ಯೋಜನೆ 2ನೇ ಹಂತಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ!
Linkup
ಲಖನೌ: ಪ್ರಧಾನ ಮಂತ್ರಿ (ಪಿಎಂಯುವೈ)ಯ 2ನೇ ಹಂತಕ್ಕೆ ಪ್ರಧಾನಿ ಅವರು ಮಂಗಳವಾರ ಚಾಲನೆ ನೀಡಿದರು. ಉತ್ತರ ಪ್ರದೇಶದ ಮಹೋಬದಲ್ಲಿ ಫಲಾನುಭವಿಗಳಿಗೆ ಸಂಪರ್ಕ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ 10 ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ವಿತರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಪರವಾಗಿ ಮಹಿಳೆಯರಿಗೆ ದಾಖಲೆಗಳನ್ನು ನೀಡಿದರು. ಉಜ್ವಲ ಯೋಜನೆಯನ್ನು 2016 ರಲ್ಲಿ ಆರಂಭಿಸಲಾಯಿತು. ಆರಂಭಿಕವಾಗಿ ಬಿಪಿಎಲ್ ಕುಟುಂಬದ ಐದು ಕೋಟಿ ಮಹಿಳಾ ಸದಸ್ಯರಿಗೆ ಎಲ್‌ಪಿಜಿ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿತ್ತು. ತರುವಾಯ ಈ ಯೋಜನೆಯನ್ನು 2018 ರ ಏಪ್ರಿಲ್‌ನಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಹಾಗೂ ಅರಣ್ಯವಾಸಿಗಳಂತಹ ಇನ್ನೂ ಏಳು ವರ್ಗಗಳ ಮಹಿಳಾ ಫಲಾನುಭವಿಗಳಿಗೆ ವಿಸ್ತರಿಸಲಾಯಿತು. ಅಲ್ಲದೆ, ಗುರಿಯನ್ನು ಐದು ಕೋಟಿ ಬದಲು ಎಂಟು ಕೋಟಿ LPG ಸಂಪರ್ಕಗಳಿಗೆ ಪರಿಷ್ಕರಿಸಲಾಗಿಯಿತು ಮತ್ತು ನಿಗದಿತ ಸಮಯಕ್ಕಿಂತ ಏಳು ತಿಂಗಳು ಮುಂಚಿತವಾಗಿಯೇ ಆಗಸ್ಟ್ 2019 ರಲ್ಲಿ ಆ ಗುರಿ ಸಾಧಿಸಲಾಗಿದೆ. ಹಳ್ಳಿಗಳಲ್ಲಿ ಇನ್ನೂ ಮಹಿಳೆಯರು ಉರುವಲನ್ನೇ ಉಪಯೋಗಿಸಿ ಅಡುಗೆ ಮಾಡುತ್ತಿದ್ದಾರೆ. ಆ ಕಷ್ಟವನ್ನು ತಪ್ಪಿಸಿ, ಗ್ರಾಮೀಣ ಪ್ರದೇಶಗಳಿಗೂ ಎಲ್ಪಿಜಿ ಗ್ಯಾಸ್ ಕನೆಕ್ಷನ್ ಕೊಡುವ ಉದ್ದೇಶದೊಂದಿಗೆ, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಈ ಉಜ್ವಲ ಯೋಜನೆಯನ್ನು ಪರಿಚಯಿಸಿತು.