ಎಚ್‌ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ರಾಕ್‌ಲೈನ್‌ ಮನೆಮುಂದೆ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

ಜೆಡಿಎಸ್‌ ಕಾರ್ಯಕರ್ತರು, ಶನಿವಾರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಕುಮಾರಸ್ವಾಮಿಯವರ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಬಳಿಕ ಪ್ರತಿಕ್ರಿಯಿಸಿದ ರಾಕ್‌ಲೈನ್‌ ವೆಂಕಟೇಶ್‌, ನಾನು ಮಾಜಿ ಸಿಎಂ ಕುಮಾರಸ್ವಾಮಿಯವರ ವಿಚಾರದಲ್ಲಿ ರಾಜಕೀಯವಾಗಿ ಯಾವುದೇ ಮಾತನ್ನಾಡಿಲ್ಲ. ಅಂಬರೀಷ್‌ ಸ್ಮಾರಕದ ವಿಚಾರ ಮಾತನಾಡಿದ್ದರಿಂದ ಕಲಾವಿದರ ಸಂಘದ ಕಾರ್ಯದರ್ಶಿಯಾಗಿ ನಾನು ಪ್ರತಿಕ್ರಿಯಿಸಿದ್ದೇನೆ ಎಂದಿದ್ದಾರೆ.

ಎಚ್‌ಡಿಕೆ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿ ರಾಕ್‌ಲೈನ್‌ ಮನೆಮುಂದೆ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ
Linkup
ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಜೆಡಿಎಸ್‌ ಕಾರ್ಯಕರ್ತರು, ಶನಿವಾರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಕುಮಾರಸ್ವಾಮಿಯವರ ಬಳಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಬಳಿಕ ಪ್ರತಿಕ್ರಿಯಿಸಿದ ರಾಕ್‌ಲೈನ್‌ ವೆಂಕಟೇಶ್‌, ನಾನು ಮಾಜಿ ಸಿಎಂ ಕುಮಾರಸ್ವಾಮಿಯವರ ವಿಚಾರದಲ್ಲಿ ರಾಜಕೀಯವಾಗಿ ಯಾವುದೇ ಮಾತನ್ನಾಡಿಲ್ಲ. ಅಂಬರೀಷ್‌ ಸ್ಮಾರಕದ ವಿಚಾರ ಮಾತನಾಡಿದ್ದರಿಂದ ಕಲಾವಿದರ ಸಂಘದ ಕಾರ್ಯದರ್ಶಿಯಾಗಿ ನಾನು ಪ್ರತಿಕ್ರಿಯಿಸಿದ್ದೇನೆ ಎಂದು ಸಮರ್ಥಿಸಿಕೊಂಡರು. ಕ್ಷಮೆ ಕೇಳುವಂತ ಯಾವ ಮಾತೂ ಆಡಿಲ್ಲ ಎಂದು ಹೇಳಿದರು. ಶರವಣ ವಿಡಿಯೊ ದಾಳಿ: ಅಂಬರೀಶ್‌ ಪಾರ್ಥಿವ ಶರೀರ ಮಂಡ್ಯಕ್ಕೆ ಕೊಂಡೊಯ್ಯುವಲ್ಲಿ ಕುಮಾರಸ್ವಾಮಿ ಪಾತ್ರವೇನೂ ಇರಲಿಲ್ಲ ಎಂಬ ಆಪಾದನೆಗೆ ಪ್ರತಿಯಾಗಿ ಜೆಡಿಎಸ್‌ನ ಮಾಜಿ ಎಂಎಲ್ಸಿ ಟಿ.ಎ. ಶರವಣ ಅವರು ವಿಡಿಯೊ ಒಂದನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸುಮಲತಾ ಅವರು ಅಂಬರೀಷ್‌ ಅವರನ್ನು ಅರಸನಂತೆ ಕಳುಹಿಸಿಕೊಟ್ಟ ಕುಮಾರಣ್ಣ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿರುವುದನ್ನು ಶರವಣ ಉಲ್ಲೇಖಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿಯವರ ಬಗ್ಗೆ ಲಘುವಾಗಿ ಮಾತನಾಡಿರುವ ಸುಮಲತಾ, ರಾಕ್‌ಲೈನ್‌ ವೆಂಕಟೇಶ್‌, ನಟ ದೊಡ್ಡಣ್ಣ ಅವರು ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ವಿಚಾರವಾಗಿ ಮಾತನಾಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ ನಂತರವೂ ಮತ್ತೆ ಮತ್ತೆ ಈ ವಿಷಯದ ಬಗ್ಗೆ ಪ್ರಸ್ತಾಪಿಸುತ್ತಿರುವುದು ಏಕೆ. ಕಾವೇರಿ ಮಂಡ್ಯಕ್ಕೆ ಸೀಮಿತವಲ್ಲ. 10 ಜಿಲ್ಲೆಗೆ ಸೇರಿದೆ. ಅದನ್ನು ಅರ್ಥ ಮಾಡಿಕೊಂಡು ಈ ವಿಚಾರವನ್ನು ಮುಕ್ತಾಯಗೊಳಿಸಬೇಕು ಎಂದು ಹೇಳಿದರು.