ಏಷ್ಯನ್ ಗೇಮ್ಸ್ 2023: ತಜಿಂದರ್ ಪಾಲ್ ಸಿಂಗ್ ತೂರ್, ಅವಿನಾಶ್ ಸೇಬಲ್ ಚಿನ್ನ ಸಾಧನೆ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ  ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ. ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ  ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ. ತನ್ನ ಮೊದಲ ಎರಡು ಪ್ರಯತ್ನಗಳಲ್ಲಿ ಫೌಲ್ ಮಾಡಿದ ಹೊರತಾಗಿಯೂ ಭಾನುವಾರ ನಡೆದ ಪುರುಷರ ಷಾಟ್ ಪಟ್ ಫೈನಲ್ ನಲ್ಲಿ ತಜಿಂದರ್ ಪಾಲ್ ಸಿಂಗ್ ಅತ್ಯುತ್ತಮ ಪ್ರದರ್ಶನ ನೀಡಿದರು. 20.36 ಮೀಟರ್ ದೂರ ಎಸೆಯುವ ಮೂಲಕ ತಜೇಂದರ್ ಪಾಲ್ ಚಿನ್ನದ ಪದಕ ತಮ್ಮದಾಗಿಸಿಕೊಂಡರು.  ಬ್ಯಾಕ್-ಟು-ಬ್ಯಾಕ್ ಚಿನ್ನದ ಪದಕಗಳೊಂದಿಗೆ ಗಮನಾರ್ಹ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023: ಟ್ರ್ಯಾಪ್​ ಶೂಟಿಂಗ್​ ಪುರುಷರ ವಿಭಾಗದಲ್ಲಿ ಭಾರತದ ತಂಡಕ್ಕೆ ಚಿನ್ನದ ಪದಕ! ಮತ್ತೊಂದೆಡೆ  ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಭಾರತದ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದರು. ಅವಿನಾಶ್ 8.19 54 ಸೆಕೆಂಡ್ ನಲ್ಲಿ ನಿಗದಿತ ಗುರಿ ತಲುಪುವ ಮೂಲಕ ಭಾರತಕ್ಕೆ 12ನೇ ಚಿನ್ನದ ಪದಕ ತಂದುಕೊಟ್ಟರು. ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತಕ್ಕೆ ಇದು ಮೊದಲ ಚಿನ್ನದ ಪದಕವಾಗಿದೆ. ಈ ಮೂಲಕ ಭಾರತ 13 ಚಿನ್ನದ ಪದಕ ಪಡೆದುಕೊಂಡಿದ್ದು, ಪದಕಗಳ ಗಳಿಕೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಏಷ್ಯನ್ ಗೇಮ್ಸ್ 2023: ತಜಿಂದರ್ ಪಾಲ್ ಸಿಂಗ್ ತೂರ್, ಅವಿನಾಶ್ ಸೇಬಲ್ ಚಿನ್ನ ಸಾಧನೆ
Linkup
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ  ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ. ಹ್ಯಾಂಗ್‌ಝೌ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ  ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಷಾಟ್ ಪಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್ ಹಾಗೂ ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದಿದ್ದಾರೆ. ತನ್ನ ಮೊದಲ ಎರಡು ಪ್ರಯತ್ನಗಳಲ್ಲಿ ಫೌಲ್ ಮಾಡಿದ ಹೊರತಾಗಿಯೂ ಭಾನುವಾರ ನಡೆದ ಪುರುಷರ ಷಾಟ್ ಪಟ್ ಫೈನಲ್ ನಲ್ಲಿ ತಜಿಂದರ್ ಪಾಲ್ ಸಿಂಗ್ ಅತ್ಯುತ್ತಮ ಪ್ರದರ್ಶನ ನೀಡಿದರು. 20.36 ಮೀಟರ್ ದೂರ ಎಸೆಯುವ ಮೂಲಕ ತಜೇಂದರ್ ಪಾಲ್ ಚಿನ್ನದ ಪದಕ ತಮ್ಮದಾಗಿಸಿಕೊಂಡರು.  ಬ್ಯಾಕ್-ಟು-ಬ್ಯಾಕ್ ಚಿನ್ನದ ಪದಕಗಳೊಂದಿಗೆ ಗಮನಾರ್ಹ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023: ಟ್ರ್ಯಾಪ್​ ಶೂಟಿಂಗ್​ ಪುರುಷರ ವಿಭಾಗದಲ್ಲಿ ಭಾರತದ ತಂಡಕ್ಕೆ ಚಿನ್ನದ ಪದಕ! ಮತ್ತೊಂದೆಡೆ  ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯಲ್ಲಿ ಭಾರತದ ಅವಿನಾಶ್ ಸೇಬಲ್ ಚಿನ್ನದ ಪದಕ ಗೆದ್ದರು. ಅವಿನಾಶ್ 8.19 54 ಸೆಕೆಂಡ್ ನಲ್ಲಿ ನಿಗದಿತ ಗುರಿ ತಲುಪುವ ಮೂಲಕ ಭಾರತಕ್ಕೆ 12ನೇ ಚಿನ್ನದ ಪದಕ ತಂದುಕೊಟ್ಟರು. ಪುರುಷರ 3,000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಭಾರತಕ್ಕೆ ಇದು ಮೊದಲ ಚಿನ್ನದ ಪದಕವಾಗಿದೆ. ಈ ಮೂಲಕ ಭಾರತ 13 ಚಿನ್ನದ ಪದಕ ಪಡೆದುಕೊಂಡಿದ್ದು, ಪದಕಗಳ ಗಳಿಕೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್ 2023: ತಜಿಂದರ್ ಪಾಲ್ ಸಿಂಗ್ ತೂರ್, ಅವಿನಾಶ್ ಸೇಬಲ್ ಚಿನ್ನ ಸಾಧನೆ