ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್: ಚಿನ್ನದ ಪದಕಕ್ಕಾಗಿ ಭಾರತ-ಅಫ್ಘಾನಿಸ್ತಾನ ನಡುವೆ ಹಣಾಹಣಿ!

ಶನಿವಾರ ನಡೆಯಲಿರುವ ಏಷ್ಯನ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡವು ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಶನಿವಾರ ನಡೆಯಲಿರುವ ಏಷ್ಯನ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡವು ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.  ಭಾರತ ಮತ್ತು ಅಫ್ಘಾನಿಸ್ತಾನ ಫೈನಲ್ ಪಂದ್ಯವು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಹ್ಯಾಂಗ್‌ಝೌನಲ್ಲಿರುವ ಜೆಜಿಯಾಂಗ್ ತಂತ್ರಜ್ಞಾನ ವಿಶ್ವವಿದ್ಯಾಲಯದ ಪಿಂಗ್‌ಫೆಂಗ್ ಕ್ರಿಕೆಟ್ ಮೈದಾನದಲ್ಲಿ ಅಕ್ಟೋಬರ್ 7 ರಂದು ನಡೆಯಲಿದೆ. ಭಾರತ vs ಅಫ್ಘಾನಿಸ್ತಾನ ಏಷ್ಯನ್ ಗೇಮ್ಸ್ 2023 ಪುರುಷರ ಕ್ರಿಕೆಟ್ ಫೈನಲ್ ಅನ್ನು ಭಾರತದಲ್ಲಿ ಲೈವ್ ಸ್ಟ್ರೀಮ್ ಮತ್ತು ಪ್ರಸಾರ ಮಾಡಲಾಗುತ್ತದೆ. IND vs AFG ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 11:30ಕ್ಕೆ ಆರಂಭವಾಗಲಿದೆ. ಈ ಚಿನ್ನದ ಪದಕದ ಪಂದ್ಯ ಟಿ20 ಮಾದರಿಯಲ್ಲಿ ನಡೆಯಲಿದೆ. ಏಷ್ಯನ್ ಗೇಮ್ಸ್ 2023 ರ ಪುರುಷರ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಫೈನಲ್‌ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ರುತುರಾಜ್ ಗಾಯಕ್ವಾಡ್ ನೇತೃತ್ವದ ಟೀಂ ಇಂಡಿಯಾ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು 23 ರನ್‌ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಇದನ್ನೂ ಓದಿ: ವಿಶ್ವ ಕಪ್​ನಲ್ಲಿ ಟೀಂ ಇಂಡಿಯಾಗೆ ಆಘಾತ: ಆರಂಭಿಕ ಬ್ಯಾಟರ್​ ಶುಬ್ ಮನ್ ಗಿಲ್ ಗೆ ಡೆಂಗ್ಯೂ ನೇಪಾಳ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭಾರತದ ಪರ ಶತಕ ಬಾರಿಸಿದರೆ, ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ತಿಲಕ್ ವರ್ಮಾ 26 ಎಸೆತಗಳಲ್ಲಿ ಅಜೇಯ 55 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅದೇ ಪಂದ್ಯದಲ್ಲಿ ಸ್ಪಿನ್ನರ್ ಸಾಯಿ ಕಿಶೋರ್ 4 ಓವರ್ ಗಳಲ್ಲಿ ಕೇವಲ 12 ರನ್ ನೀಡಿ ಮೂರು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಅಫ್ಘಾನಿಸ್ತಾನ ತಂಡವು ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು 8 ರನ್‌ಗಳಿಂದ ಸೋಲಿಸಿತ್ತು. ನಂತರ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.  ಇದಕ್ಕೂ ಮೊದಲು, ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಈವೆಂಟ್‌ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ಗೆದ್ದಿತ್ತು. ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಭಾರತ ಉತ್ತಮ ಶ್ರೇಯಾಂಕ ಹೊಂದಿದ್ದು, ಕ್ವಾರ್ಟರ್ ಫೈನಲ್‌ನಿಂದ ನೇರವಾಗಿ ತನ್ನ ಅಭಿಯಾನವನ್ನು ಪ್ರಾರಂಭಿಸಿತು.

ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್: ಚಿನ್ನದ ಪದಕಕ್ಕಾಗಿ ಭಾರತ-ಅಫ್ಘಾನಿಸ್ತಾನ ನಡುವೆ ಹಣಾಹಣಿ!
Linkup
ಶನಿವಾರ ನಡೆಯಲಿರುವ ಏಷ್ಯನ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡವು ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ. ಶನಿವಾರ ನಡೆಯಲಿರುವ ಏಷ್ಯನ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡವು ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದೆ.  ಭಾರತ ಮತ್ತು ಅಫ್ಘಾನಿಸ್ತಾನ ಫೈನಲ್ ಪಂದ್ಯವು ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ಹ್ಯಾಂಗ್‌ಝೌನಲ್ಲಿರುವ ಜೆಜಿಯಾಂಗ್ ತಂತ್ರಜ್ಞಾನ ವಿಶ್ವವಿದ್ಯಾಲಯದ ಪಿಂಗ್‌ಫೆಂಗ್ ಕ್ರಿಕೆಟ್ ಮೈದಾನದಲ್ಲಿ ಅಕ್ಟೋಬರ್ 7 ರಂದು ನಡೆಯಲಿದೆ. ಭಾರತ vs ಅಫ್ಘಾನಿಸ್ತಾನ ಏಷ್ಯನ್ ಗೇಮ್ಸ್ 2023 ಪುರುಷರ ಕ್ರಿಕೆಟ್ ಫೈನಲ್ ಅನ್ನು ಭಾರತದಲ್ಲಿ ಲೈವ್ ಸ್ಟ್ರೀಮ್ ಮತ್ತು ಪ್ರಸಾರ ಮಾಡಲಾಗುತ್ತದೆ. IND vs AFG ಪಂದ್ಯವು ಭಾರತೀಯ ಕಾಲಮಾನ ಬೆಳಗ್ಗೆ 11:30ಕ್ಕೆ ಆರಂಭವಾಗಲಿದೆ. ಈ ಚಿನ್ನದ ಪದಕದ ಪಂದ್ಯ ಟಿ20 ಮಾದರಿಯಲ್ಲಿ ನಡೆಯಲಿದೆ. ಏಷ್ಯನ್ ಗೇಮ್ಸ್ 2023 ರ ಪುರುಷರ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಬಾಂಗ್ಲಾದೇಶವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಫೈನಲ್‌ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ರುತುರಾಜ್ ಗಾಯಕ್ವಾಡ್ ನೇತೃತ್ವದ ಟೀಂ ಇಂಡಿಯಾ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳವನ್ನು 23 ರನ್‌ಗಳಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿತ್ತು. ಇದನ್ನೂ ಓದಿ: ವಿಶ್ವ ಕಪ್​ನಲ್ಲಿ ಟೀಂ ಇಂಡಿಯಾಗೆ ಆಘಾತ: ಆರಂಭಿಕ ಬ್ಯಾಟರ್​ ಶುಬ್ ಮನ್ ಗಿಲ್ ಗೆ ಡೆಂಗ್ಯೂ ನೇಪಾಳ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭಾರತದ ಪರ ಶತಕ ಬಾರಿಸಿದರೆ, ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ತಿಲಕ್ ವರ್ಮಾ 26 ಎಸೆತಗಳಲ್ಲಿ ಅಜೇಯ 55 ರನ್ ಗಳಿಸಿ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅದೇ ಪಂದ್ಯದಲ್ಲಿ ಸ್ಪಿನ್ನರ್ ಸಾಯಿ ಕಿಶೋರ್ 4 ಓವರ್ ಗಳಲ್ಲಿ ಕೇವಲ 12 ರನ್ ನೀಡಿ ಮೂರು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಅಫ್ಘಾನಿಸ್ತಾನ ತಂಡವು ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು 8 ರನ್‌ಗಳಿಂದ ಸೋಲಿಸಿತ್ತು. ನಂತರ ಸೆಮಿಫೈನಲ್‌ನಲ್ಲಿ ಪಾಕಿಸ್ತಾನವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ.  ಇದಕ್ಕೂ ಮೊದಲು, ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಏಷ್ಯನ್ ಗೇಮ್ಸ್ 2023 ಮಹಿಳಾ ಕ್ರಿಕೆಟ್ ಈವೆಂಟ್‌ನಲ್ಲಿ ಶ್ರೀಲಂಕಾವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ಗೆದ್ದಿತ್ತು. ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಭಾರತ ಉತ್ತಮ ಶ್ರೇಯಾಂಕ ಹೊಂದಿದ್ದು, ಕ್ವಾರ್ಟರ್ ಫೈನಲ್‌ನಿಂದ ನೇರವಾಗಿ ತನ್ನ ಅಭಿಯಾನವನ್ನು ಪ್ರಾರಂಭಿಸಿತು. ಏಷ್ಯನ್ ಗೇಮ್ಸ್ ಕ್ರಿಕೆಟ್ ಫೈನಲ್: ಚಿನ್ನದ ಪದಕಕ್ಕಾಗಿ ಭಾರತ-ಅಫ್ಘಾನಿಸ್ತಾನ ನಡುವೆ ಹಣಾಹಣಿ!