ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ, ಪ್ರಧಾನಿ ಮೋದಿ ಮೆಚ್ಚುಗೆ

ಚೀನಾದ ಹ್ಯಾಂಗ್​​ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್​ ಗೇಮ್ಸ್​ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್​ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. ಹ್ಯಾಂಗ್​ಝೌ: ಚೀನಾದ ಹ್ಯಾಂಗ್​​ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಪ್ಯಾರಾ ಗೇಮ್ಸ್​ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್​ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್​ನಲ್ಲಿ ಭಾರತ 72 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದು ಈವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಪ್ಯಾರಾ ಅಥ್ಲೀಟ್​ಗಳು ಮುರಿದಿದ್ದಾರೆ. ಇದನ್ನೂ ಓದಿ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ73 ಪದಕ: ಕ್ರೀಡಾಪಟುಗಳ ಬದ್ಧತೆ, ದೃಢತೆ ಕೊಂಡಾಡಿದ ಪ್ರಧಾನಿ ಮೋದಿ ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಪ್ರಧಾನಿ ಮೋದಿ ಮೆಚ್ಚುಗೆ ಈ ನಡುವೆ ಈ ಮಹತ್ತರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್​ಗಳಿಗೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾ ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ 100 ಪದಕಗಳ ಗರಿ! ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರತದ ಯುವಕರಿಗೆ ಅಸಾಧ್ಯವಾದದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಈ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿದಾಯಕ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. 100 MEDALS at the Asian Para Games! A moment of unparalleled joy. This success is a result of the sheer talent, hard work, and determination of our athletes. This remarkable milestone fills our hearts with immense pride. I extend my deepest appreciation and gratitude to our… pic.twitter.com/UYQD0F9veM — Narendra Modi (@narendramodi) October 28, 2023

ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ, ಪ್ರಧಾನಿ ಮೋದಿ ಮೆಚ್ಚುಗೆ
Linkup
ಚೀನಾದ ಹ್ಯಾಂಗ್​​ಝೌನಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್​ ಗೇಮ್ಸ್​ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್​ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. ಹ್ಯಾಂಗ್​ಝೌ: ಚೀನಾದ ಹ್ಯಾಂಗ್​​ಝೌನಲ್ಲಿ ನಡೆಯುತ್ತಿರುವ ಏಷ್ಯನ್​ ಪ್ಯಾರಾ ಗೇಮ್ಸ್​ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್​ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್​ನಲ್ಲಿ ಭಾರತ 72 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಇದು ಈವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಪ್ಯಾರಾ ಅಥ್ಲೀಟ್​ಗಳು ಮುರಿದಿದ್ದಾರೆ. ಇದನ್ನೂ ಓದಿ: ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ73 ಪದಕ: ಕ್ರೀಡಾಪಟುಗಳ ಬದ್ಧತೆ, ದೃಢತೆ ಕೊಂಡಾಡಿದ ಪ್ರಧಾನಿ ಮೋದಿ ಕ್ರೀಡಾಕೂಟದಲ್ಲಿ ಭಾರತ 25 ಚಿನ್ನ, 30 ಬೆಳ್ಳಿ ಮತ್ತು 45 ಕಂಚಿನ ಪದಕ ಗೆಲ್ಲುವ ಮೂಲಕ 100 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಪ್ರಧಾನಿ ಮೋದಿ ಮೆಚ್ಚುಗೆ ಈ ನಡುವೆ ಈ ಮಹತ್ತರ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್​ಗಳಿಗೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ಯಾರಾ ಏಷ್ಯನ್ ಗೇಮ್ಸ್​ನಲ್ಲಿ ಭಾರತಕ್ಕೆ 100 ಪದಕಗಳ ಗರಿ! ಇದು ಅಪೂರ್ವ ಆನಂದದ ಕ್ಷಣವಾಗಿದೆ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢ ನಿರ್ಧಾರದ ಫಲವಾಗಿದೆ. ಈ ಗಮನಾರ್ಹ ಸಾಧನೆ ಮಾಡಿದ ಕ್ರೀಡಾಪಟುಗಳು, ತರಬೇತುದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರತದ ಯುವಕರಿಗೆ ಅಸಾಧ್ಯವಾದದು ಯಾವುದೂ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಈ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿದಾಯಕ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಏಷ್ಯನ್ ಪ್ಯಾರಾ ಗೇಮ್ಸ್ 2023: 100 ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತ, ಪ್ರಧಾನಿ ಮೋದಿ ಮೆಚ್ಚುಗೆ