![](https://vijaykarnataka.com/photo/83715566/photo-83715566.jpg)
ಬೆಂಗಳೂರು: 2005ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆವರಣದಲ್ಲಿ ನಡೆದ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧಿತನಾಗಿದ್ದ ಎಂಬಾತನನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಾ. ಕಾಸನಪ್ಪ ನಾಯ್ಕ್, ಅರೋಪಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಮೊಹಮ್ಮದ್ ಹಬೀಬ್‌ನನ್ನು ದೋಷಮುಕ್ತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
2017ರಲ್ಲಿ ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ ಬಂಧಿತನಾಗಿದ್ದ ಮೊಹಮ್ಮದ್ ಹಬೀಬ್‌ನನ್ನು, ಎನ್‌ಐಎ ತೀವ್ರ ವಿಚಾರಣೆಗೆ ಗುರಿಪಡಿಸಿತ್ತು. ಆದರೆ ಆತನ ವಿರುದ್ಧ ಪ್ರಬಲ ಸಾಕ್ಷ್ಯಗಳನ್ನು ಕಲೆ ಹಾಕುವುದರಲ್ಲಿ ಯಶಸ್ಸು ಕಂಡಿರಲಿಲ್ಲ.
ಮೊಹಮ್ಮದ್ ಹಬೀಬ್ ವಿರುದ್ಧ ಇದೇ ಪ್ರ ಕರಣಕ್ಕೆ ಸಂಬಂಧಿಸಿದಂತೆ 2008ರಲ್ಲಿ ಲಕ್ನೋದಲ್ಲಿ ಬಂಧಿತನಾಗಿದ್ದ ಸಬಾಹುದ್ದೀನ್ ಅಹಮ್ಮದ್ ನೀಡಿದ್ದ ಹೇಳಿಕೆಯನ್ನು ಆಧಾರವಾಗಿಟ್ಟುಕೊಳ್ಳಲಾಗಿತ್ತು. ಆದರೆ ಐಐಎಸ್‌ಸಿ ದಾಳಿಯ ಬಗ್ಗೆ ಹಬೀಬ್‌ಗೆ ಮೊದಲೇ ತಿಳಿದಿತ್ತು ಎಂಬುದಕ್ಕೆ ಯಾವುದೇ ಸಾಕ್ಷ್ಯ ಒದಗಿಸಲಾಗಿಲ್ಲ.
ಈ ಕುರಿತು ಮಾತನಾಡಿರುವ ಮೊಹಮ್ಮದ್ ಹಬೀಬ್ ಪರ ವಕಿಲ ಮೊಹಮ್ಮದ್ ತಾಹಿರ್, ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಹಬೀಬ್ ವಿರುದ್ಧ ಮಾಡಲಾಗಿರುವ ಆರೋಪಗಳಿಗೆ ಸಾಕ್ಷ್ಯಗಳೇ ಇಲ್ಲ ಎಂದು ಹೇಳಿದ್ದಾರೆ.
ಪ್ರಕರಣದಲ್ಲಿ ಆರೋಪಿಯಾಗಿದ್ದ ಮೊಹಮ್ಮದ್ ಹಬೀಬ್ ಕಾಳೆದ ನಾಲ್ಕು ವರ್ಷಗಳಿಂದ ಜೈಲುವಾಸ ಅನುಭವಿಸುತ್ತಿದ್ದು, ಇದೀಗ ದೋಷಮುಕ್ತನಾಗಿದ್ದಾನೆ.
2005ರಲ್ಲಿ ಬೆಂಗಳೂರಿನ ಐಐಎಸ್‌ಸಿಯಲ್ಲಿ ನಡೆದ ಉಗ್ರ ದಾಳಿಯಲ್ಲಿ ಓರ್ವ ವ್ಯಕ್ತಿ ಹತನಾಗಿ, ಹಲವರು ಗಂಭಿರವಾಗಿ ಗಾಯಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುಉದ.