ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ: ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಲಿದ್ದು, ಆರ್ಥಿಕ ಮುಗ್ಗಟ್ಟಿನಿಂದ ಒಂದು ವರ್ಷದೊಳಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದರು. ಕಲಬುರಗಿ: ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಲಿದ್ದು, ಆರ್ಥಿಕ ಮುಗ್ಗಟ್ಟಿನಿಂದ ಒಂದು ವರ್ಷದೊಳಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದರು. ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಘೋಷಿಸಿರುವ ಶಕ್ತಿ ಮತ್ತು ಗೃಹ ಜ್ಯೋತಿ ಯೋಜನೆಗಳ ಅನುಷ್ಠಾನದಲ್ಲಿ ತೀವ್ರ ಸಮಸ್ಯೆ ಎದುರಿಸುತ್ತಿದೆ. ಕೆಲವು ತಿಂಗಳುಗಳಲ್ಲಿ, ಎಲ್ಲಾ ಎಸ್ಕಾಂಗಳು ಮತ್ತು ಕೆಎಸ್ಆರ್ಟಿಸಿಗಳ ನಿರ್ವಹಣೆಗೆ ಸರ್ಕಾರವು ಸಾಕಷ್ಟು ಅನುದಾನವನ್ನು ನೀಡಲು ವಿಫಲವಾದಲ್ಲಿ ಅವುಗಳನ್ನು ಬಂದ್ ಮಾಡಲಾಗುತ್ತದೆ. ನಂತರ ಒಂದು ವರ್ಷದಲ್ಲಿ ಸರ್ಕಾರ ಪತನಗೊಳ್ಳುತ್ತದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಈ ಭರವಸೆಗಳನ್ನು ನೀಡುವುದಕ್ಕೂ ಮುನ್ನ ಸಾಕಷ್ಟು ಚಿಂತನೆ ನಡೆಸಬೇಕಿತ್ತು, ಮುಗ್ಧ ಜನರು ಕಾಂಗ್ರೆಸ್ ಘೋಷಿಸಿದ ಭರವಸೆಗಳನ್ನು ನಂಬಿ ಈಗ ಸುಳ್ಳು ಭರವಸೆ ನೀಡಿದ ಪಕ್ಷಕ್ಕೆ ಮತ ಹಾಕಿ ಪಶ್ಚಾತ್ತಾಪ ಪಡುತ್ತಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಮೇಲೆ ಕಣ್ಣು: ಮನೆ-ಮನೆಗೆ ತೆರಳಿ ಕಾಂಗ್ರೆಸ್ ವೈಫಲ್ಯ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮುಂದು! ಬಡವರಿಗೆ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ. 10 ಕೆಜಿ ಅಕ್ಕಿ ಘೋಷಿಸುವ ವೇಳೆ ಕೇಂದ್ರದಿಂದ ಅಕ್ಕಿ ಖರೀದಿ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿತ್ತೇ? ಅಧಿಕಾರಕ್ಕೆ ಬಂದ ಮೇಲೆ ಕೇಂದ್ರ ಸರ್ಕಾರವನ್ನೇಕೆ ಕೇಳುತ್ತಿದೆ. ಅಧಿಕಾರಕ್ಕೆ ಬರುವ ಸಲುವಾಗಿ ಬಿಪಿಎಲ್ ವರ್ಗಕ್ಕೆ ಸೇರಿದ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದಾರೆ, ಈಗ 10 ಕೆಜಿ ಅಕ್ಕಿ ನೀಡಲಿ ಎಂದು ತಿಳಿಸಿದರು. ಇದೇ ವೇಳೆ ಕಾರ್ಯಕರ್ತರ ಆತ್ಮಸ್ಥೈರ್ಯ ಹೆಚ್ಚಿಸುವ ಮಾತುಗಳನ್ನಾಡಿದ ಕಟೀಲ್ ಅವರು,  ಇತ್ತೀಚೆಗಿನ ವಿಧಾನಸಭಾ ಚುನಾವಣೆಯ ಸೋಲಿನಿಂದ ಹತಾಶರಾಗಬೇಡಿ. "ಕಾಂಗ್ರೆಸ್ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಬಿಜೆಪಿ ಗಳಿಸಿದ ಶೇಕಡಾವಾರು ಮತಗಳು ಕಡಿಮೆ ಏನಿಲ್ಲ. ರಾಜಕೀಯದಲ್ಲಿ ಸೋಲು-ಗೆಲುವು ಸಾಮಾನ್ಯ. ಆಗಿನ ಎಸ್‌ಎಂ ಕೃಷ್ಣ ಸರ್ಕಾರ ಮತ್ತು ಸಿದ್ದರಾಮಯ್ಯ ಸರ್ಕಾರವು ಚುನಾವಣೆಯಲ್ಲಿ ಸೋಲು ಕಂಡಿತ್ತು. ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆಗಳು ಮತ್ತು ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಿ. ಅವರಿಗೆ ಮನವರಿಕೆ ಮಾಡಿ ಎಂದು ಕರೆ ನೀಡಿದರು. ಇದನ್ನೂ ಓದಿ: ವಿಧಾನಸಭೆ ಚುನಾವಣೆ: ಬಿಜೆಪಿ ಸೋಲಿಗೆ ಪ್ರಹ್ಲಾದ್ ಜೋಶಿ 'ಹರಕೆಯ ಕುರಿ'; 'ಸಂತೋಷ್' ರಕ್ಷಣೆಗಾಗಿ ಜೋಶಿ ತಲೆ ದಂಡ? ಮುಂಬರುವ ಜಿಪಂ, ತಾ.ಪಂ, ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದೆ ಎಂದರು. ಬೀದರ್ ಸಂಸದರೂ ಆಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿ, ವಿಧಾನಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಸುಳ್ಳು ಭರವಸೆಗಳು ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸಿವೆ. ಗ್ಯಾರಂಟಿ ಯೋಜನೆಗಳು ಸರಿಯಾಗಿ ಜಾರಿಯಾಗದೆ ರಾಜ್ಯದೆಲ್ಲೆಡೆ ಗೊಂದಲ ಸೃಷ್ಟಿಯಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ 30 ದಿನಗಳಲ್ಲಿಯೇ ಜನತೆ ಪಶ್ಚಾತ್ತಾಪ ಪಡಲಾರಂಭಿಸಿದ್ದಾರೆಂದು ಹೇಳಿದರು.

ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ: ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್
Linkup
ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಲಿದ್ದು, ಆರ್ಥಿಕ ಮುಗ್ಗಟ್ಟಿನಿಂದ ಒಂದು ವರ್ಷದೊಳಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದರು. ಕಲಬುರಗಿ: ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಚಾರದ ವೇಳೆ ನೀಡಿದ ಭರವಸೆಗಳು ರಾಜ್ಯ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಲಿದ್ದು, ಆರ್ಥಿಕ ಮುಗ್ಗಟ್ಟಿನಿಂದ ಒಂದು ವರ್ಷದೊಳಗೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದರು. ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಘೋಷಿಸಿರುವ ಶಕ್ತಿ ಮತ್ತು ಗೃಹ ಜ್ಯೋತಿ ಯೋಜನೆಗಳ ಅನುಷ್ಠಾನದಲ್ಲಿ ತೀವ್ರ ಸಮಸ್ಯೆ ಎದುರಿಸುತ್ತಿದೆ. ಕೆಲವು ತಿಂಗಳುಗಳಲ್ಲಿ, ಎಲ್ಲಾ ಎಸ್ಕಾಂಗಳು ಮತ್ತು ಕೆಎಸ್ಆರ್ಟಿಸಿಗಳ ನಿರ್ವಹಣೆಗೆ ಸರ್ಕಾರವು ಸಾಕಷ್ಟು ಅನುದಾನವನ್ನು ನೀಡಲು ವಿಫಲವಾದಲ್ಲಿ ಅವುಗಳನ್ನು ಬಂದ್ ಮಾಡಲಾಗುತ್ತದೆ. ನಂತರ ಒಂದು ವರ್ಷದಲ್ಲಿ ಸರ್ಕಾರ ಪತನಗೊಳ್ಳುತ್ತದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಈ ಭರವಸೆಗಳನ್ನು ನೀಡುವುದಕ್ಕೂ ಮುನ್ನ ಸಾಕಷ್ಟು ಚಿಂತನೆ ನಡೆಸಬೇಕಿತ್ತು, ಮುಗ್ಧ ಜನರು ಕಾಂಗ್ರೆಸ್ ಘೋಷಿಸಿದ ಭರವಸೆಗಳನ್ನು ನಂಬಿ ಈಗ ಸುಳ್ಳು ಭರವಸೆ ನೀಡಿದ ಪಕ್ಷಕ್ಕೆ ಮತ ಹಾಕಿ ಪಶ್ಚಾತ್ತಾಪ ಪಡುತ್ತಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಮೇಲೆ ಕಣ್ಣು: ಮನೆ-ಮನೆಗೆ ತೆರಳಿ ಕಾಂಗ್ರೆಸ್ ವೈಫಲ್ಯ ಕುರಿತು ಜಾಗೃತಿ ಮೂಡಿಸಲು ಬಿಜೆಪಿ ಮುಂದು! ಬಡವರಿಗೆ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ. 10 ಕೆಜಿ ಅಕ್ಕಿ ಘೋಷಿಸುವ ವೇಳೆ ಕೇಂದ್ರದಿಂದ ಅಕ್ಕಿ ಖರೀದಿ ಮಾಡುತ್ತೇವೆಂದು ಕಾಂಗ್ರೆಸ್ ಹೇಳಿತ್ತೇ? ಅಧಿಕಾರಕ್ಕೆ ಬಂದ ಮೇಲೆ ಕೇಂದ್ರ ಸರ್ಕಾರವನ್ನೇಕೆ ಕೇಳುತ್ತಿದೆ. ಅಧಿಕಾರಕ್ಕೆ ಬರುವ ಸಲುವಾಗಿ ಬಿಪಿಎಲ್ ವರ್ಗಕ್ಕೆ ಸೇರಿದ ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದಾರೆ, ಈಗ 10 ಕೆಜಿ ಅಕ್ಕಿ ನೀಡಲಿ ಎಂದು ತಿಳಿಸಿದರು. ಇದೇ ವೇಳೆ ಕಾರ್ಯಕರ್ತರ ಆತ್ಮಸ್ಥೈರ್ಯ ಹೆಚ್ಚಿಸುವ ಮಾತುಗಳನ್ನಾಡಿದ ಕಟೀಲ್ ಅವರು,  ಇತ್ತೀಚೆಗಿನ ವಿಧಾನಸಭಾ ಚುನಾವಣೆಯ ಸೋಲಿನಿಂದ ಹತಾಶರಾಗಬೇಡಿ. "ಕಾಂಗ್ರೆಸ್ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಬಿಜೆಪಿ ಗಳಿಸಿದ ಶೇಕಡಾವಾರು ಮತಗಳು ಕಡಿಮೆ ಏನಿಲ್ಲ. ರಾಜಕೀಯದಲ್ಲಿ ಸೋಲು-ಗೆಲುವು ಸಾಮಾನ್ಯ. ಆಗಿನ ಎಸ್‌ಎಂ ಕೃಷ್ಣ ಸರ್ಕಾರ ಮತ್ತು ಸಿದ್ದರಾಮಯ್ಯ ಸರ್ಕಾರವು ಚುನಾವಣೆಯಲ್ಲಿ ಸೋಲು ಕಂಡಿತ್ತು. ಕಾಂಗ್ರೆಸ್ ಸರ್ಕಾರದ ಸುಳ್ಳು ಭರವಸೆಗಳು ಮತ್ತು ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸಿ. ಅವರಿಗೆ ಮನವರಿಕೆ ಮಾಡಿ ಎಂದು ಕರೆ ನೀಡಿದರು. ಇದನ್ನೂ ಓದಿ: ವಿಧಾನಸಭೆ ಚುನಾವಣೆ: ಬಿಜೆಪಿ ಸೋಲಿಗೆ ಪ್ರಹ್ಲಾದ್ ಜೋಶಿ 'ಹರಕೆಯ ಕುರಿ'; 'ಸಂತೋಷ್' ರಕ್ಷಣೆಗಾಗಿ ಜೋಶಿ ತಲೆ ದಂಡ? ಮುಂಬರುವ ಜಿಪಂ, ತಾ.ಪಂ, ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸುವ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರ ಮೇಲಿದೆ ಎಂದರು. ಬೀದರ್ ಸಂಸದರೂ ಆಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿ, ವಿಧಾನಸಭಾ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಸುಳ್ಳು ಭರವಸೆಗಳು ಕಾಂಗ್ರೆಸ್‌ಗೆ ವರವಾಗಿ ಪರಿಣಮಿಸಿವೆ. ಗ್ಯಾರಂಟಿ ಯೋಜನೆಗಳು ಸರಿಯಾಗಿ ಜಾರಿಯಾಗದೆ ರಾಜ್ಯದೆಲ್ಲೆಡೆ ಗೊಂದಲ ಸೃಷ್ಟಿಯಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ 30 ದಿನಗಳಲ್ಲಿಯೇ ಜನತೆ ಪಶ್ಚಾತ್ತಾಪ ಪಡಲಾರಂಭಿಸಿದ್ದಾರೆಂದು ಹೇಳಿದರು. ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ: ಭವಿಷ್ಯ ನುಡಿದ ನಳಿನ್ ಕುಮಾರ್ ಕಟೀಲ್