ಕೆಂಗೇರಿಗೆ ಆಗಸ್ಟ್‌ ಕೊನೇ ವಾರದಲ್ಲಿ ಮೆಟ್ರೋ ಸಂಚಾರ ಸಾಧ್ಯತೆ

'ನಮ್ಮ ಮೆಟ್ರೋ' 2ನೇ ಹಂತದಲ್ಲಿ ಮೈಸೂರು ರಸ್ತೆಯ ವಿಸ್ತರಿತ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು ಆ. 11, 12ರಂದು ಪರಿಶೀಲನೆ ನಡೆಸಲಿದ್ದು, ಆಗಸ್ಟ್‌ ಕೊನೆಯ ಅಥವಾ ಸೆಪ್ಟೆಂಬರ್‌ ಮೊದಲ ವಾರದಲ್ಲಿ ರೈಲು ಸಂಚಾರ ಆರಂಭವಾಗುವ ನಿರೀಕ್ಷೆಯಿದೆ.

ಕೆಂಗೇರಿಗೆ ಆಗಸ್ಟ್‌ ಕೊನೇ ವಾರದಲ್ಲಿ ಮೆಟ್ರೋ ಸಂಚಾರ ಸಾಧ್ಯತೆ
Linkup
ಬೆಂಗಳೂರು: '' ಎರಡನೇ ಹಂತದಲ್ಲಿ ಮೈಸೂರು ರಸ್ತೆಯ ವಿಸ್ತರಿತ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್‌) ಆಗಸ್ಟ್‌ 11 ಮತ್ತು 12ರಂದು ಪರಿಶೀಲನೆ ನಡೆಸಲಿದ್ದು, ಆಗಸ್ಟ್‌ ಕೊನೆಯ ಅಥವಾ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗುವ ನಿರೀಕ್ಷೆಯಿದೆ. ಮೈಸೂರು ರಸ್ತೆ ನಿಲ್ದಾಣದಿಂದ ನಿಲ್ದಾಣದವರೆಗಿನ 7.53 ಕಿ.ಮೀ. ಉದ್ದದ ಮಾರ್ಗದಲ್ಲಿ ಈಗಾಗಲೇ ಭೌತಿಕ ಕಾಮಗಾರಿ ಪೂರ್ಣಗೊಂಡಿದೆ. ಸಿಗ್ನಲಿಂಗ್‌, ದೂರಸಂವಹನ ಸಂಬಂಧಿತ ವ್ಯವಸ್ಥೆ ಅಳವಡಿಕೆಯೂ ಬಹುತೇಕ ಪೂರ್ಣಗೊಂಡಿದೆ. ಪರಿಶೀಲನೆ ಸಂದರ್ಭದಲ್ಲಿಆಯುಕ್ತರು ಯಾವುದಾದರೂ ಸಲಹೆ ನೀಡಿದರೆ, ನಿಗಮವು ಪಾಲಿಸಲಿದೆ. ನಂತರ ಹಸಿರು ನಿಶಾನೆ ದೊರೆಯುವ ಸಾಧ್ಯತೆಯಿದೆ ಎಂದು ಮೆಟ್ರೋ ರೈಲು ನಿಗಮವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮಾರ್ಗವು ಸಾರ್ವಜನಿಕ ಸೇವೆಗೆ ಮುಕ್ತವಾದರೆ ನಿತ್ಯ 75 ಸಾವಿರ ಜನ ಪ್ರಯಾಣಿಸುವ ಸಾಧ್ಯತೆಯಿದೆ. ಈ ವಿಸ್ತರಿತ ಮಾರ್ಗದಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್‌ ನಿಲ್ದಾಣ ಹಾಗೂ ಕೆಂಗೇರಿ ಮೆಟ್ರೊ ನಿಲ್ದಾಣ ಬರಲಿವೆ.