ಕಾಂಗ್ರೆಸ್ ನಾಯಕರ ಜತೆ ಪ್ರಶಾಂತ್ ಕಿಶೋರ್ ಸಭೆ: ಮತ್ತೆ ಚುನಾವಣಾ ತಂತ್ರಜ್ಞನ ಮೊರೆ ಹೋದ 'ಕೈ'

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಕಿತ್ತಾಟ ಮುಂದುವರಿದಿರುವ ನಡುವೆ, ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ರಾಹುಲ್ ಗಾಂಧಿ ಮತ್ತು ಇತರೆ ಕೆಲವು ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರ ಜತೆ ಪ್ರಶಾಂತ್ ಕಿಶೋರ್ ಸಭೆ: ಮತ್ತೆ ಚುನಾವಣಾ ತಂತ್ರಜ್ಞನ ಮೊರೆ ಹೋದ 'ಕೈ'
Linkup
ಹೊಸದಿಲ್ಲಿ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಗಳಲ್ಲಿ ತಂತ್ರ ರೂಪಿಸಿ ಬಿಜೆಪಿ ವಿರುದ್ಧ ಯಶಸ್ಸು ಕಾಣುವಲ್ಲಿ ಪ್ರಾದೇಶಿಕ ಪಕ್ಷಗಳಿಗೆ ನೆರವಾಗಿದ್ದ ಚುನಾವಣಾ ತಂತ್ರಜ್ಞ , ನಾಯಕ ಅವರನ್ನು ದಿಲ್ಲಿಯಲ್ಲಿನ ಅವರ ನಿವಾಸದಲ್ಲಿ ಮಂಗಳವಾರ ಭೇಟಿಯಾಗಿದ್ದಾರೆ. ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರಾದ ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹಾಜರಿದ್ದರು. ಈ ಸಭೆಯಲ್ಲಿ ಯಾವ ವಿಷಯದ ಬಗ್ಗೆ ಚರ್ಚಿಸಲಾಯಿತು ಎನ್ನುವುದು ಸ್ಪಷ್ಟವಾಗಿಲ್ಲ. ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಉಂಟಾಗಿರುವ ಗೊಂದಲ ಮತ್ತು ಒಳಜಗಳದ ನಡುವೆ ಸಭೆ ನಡೆದಿದೆ. ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮೊದಲು ತಲೆದೋರಿರುವ ಬಿಕ್ಕಟ್ಟನ್ನು ಬಗೆಹರಿಸುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. ಕಳೆದ ವಾರ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪ್ರಶಾಂತ್ ಕಿಶೋರ್ ಜತೆ ಮಾತುಕತೆ ನಡೆಸಿದ್ದರು. ಈ ಸಭೆಯ ಸಲುವಾಗಿ ಪ್ರಿಯಾಂಕಾ ಗಾಂಧಿ ತಮ್ಮ ಉತ್ತರ ಪ್ರದೇಶ ಭೇಟಿಯನ್ನು ರದ್ದುಗೊಳಿಸಿದ್ದರು. 2017ರಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಅವರನ್ನು ಕರೆತರುವಲ್ಲಿ ಪ್ರಶಾಂತ್ ಕಿಶೋರ್ ಪ್ರಮುಖ ಪಾತ್ರವಹಿಸಿದ್ದರು. ಆಗ ವಿಧಾನಸಭೆ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರೇ ತಂತ್ರ ರೂಪಿಸಿದ್ದರು. ಪಂಜಾಬ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿಯೇ ಅಮರಿಂದರ್ ಸಿಂಗ್ ಮತ್ತು ಸಿಧು ನಡುವೆ ಕಿತ್ತಾಟ ಶುರುವಾಗಿದೆ. ಅತ್ತ, ಚುನಾವಣೆಗೂ ಮುನ್ನ ನವಜೋತ್ ಸಿಂಗ್ ಸಿಧು ಎಎಪಿ ಸೇರಿಕೊಳ್ಳಲಿದ್ದಾರೆ ಎಂಬ ವದಂತಿ ಹರಡಿದೆ.