ಕೆಜಿ ಹಳ್ಳಿ, ಡಿಜೆ ಹಳ್ಳಿ ಹಲಭೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್‌ಐಎ

ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಗೋವಿಂದಪುರ ನಿವಾಸಿ ಸೈಯದ್‌ ಅಬ್ಬಾಸ್‌ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಕೆಜಿ ಹಳ್ಳಿ, ಡಿಜೆ ಹಳ್ಳಿ ಹಲಭೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್‌ಐಎ
Linkup
ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬನನ್ನು ರಾಷ್ಟ್ರೀಯ ತನಿಖಾ ದಳದ () ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಗೋವಿಂದಪುರ ನಿವಾಸಿ ಸೈಯದ್‌ ಅಬ್ಬಾಸ್‌ (38) ಬಂಧಿತ. ಆಗಸ್ಟ್‌ 11ರಂದು ಕೆ.ಜಿ.ಹಳ್ಳಿಯಲ್ಲಿ ನಡೆದಿದ್ದ ಗಲಭೆಯಲ್ಲಿ ಭಾಗಿಯಾಗಿದ್ದ ಅಬ್ಬಾಸ್‌ ವಿರುದ್ಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ನಂತರ ಅಬ್ಬಾಸ್‌ ತಲೆಮರೆಸಿಕೊಂಡಿದ್ದ. ತನಿಖೆ ಕೈಗೆತ್ತಿಕೊಂಡಿದ್ದ ಎನ್‌ಐಎ, ಅಬ್ಬಾಸ್‌ನ ಬಗ್ಗೆ ಮಾಹಿತಿ ಕಲೆ ಹಾಕಿತ್ತು. ಅಬ್ಬಾಸ್‌ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ () ನಾಗವಾರ ಘಟಕದ ಅಧ್ಯಕ್ಷ. ಅಬ್ಬಾಸ್‌ ಗಲಭೆ ವೇಳೆ ಹಲವು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಪೊಲೀಸ್‌ ಠಾಣೆಗೆ ಬೆಂಕಿಯಿಟ್ಟು ಧ್ವಂಸಕ್ಕೆ ಕಾರಣವಾಗಿದ್ದ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಎನ್‌ಐಎ ಅಧಿಕಾರಿಗಳು, ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ವಿಚಾರಣೆ ನಡೆಸಲು ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ 2020ರ ಆಗಸ್ಟ್‌ 11ರಂದು ಕೆ.ಜಿ. ಹಳ್ಳಿ ಮತ್ತು ಡಿ.ಜೆ. ಹಳ್ಳಿ ಗಲಭೆ ನಡೆದಿತ್ತು. ಆಗಸ್ಟ್‌ 12 ರಂದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕೆಲವರನ್ನು ಬಂಧಿಸಲಾಗಿತ್ತು. ಆದರೆ, ಸೈಯದ್‌ ಅಬ್ಬಾಸ್‌ ಮಾತ್ರ ಅಂದಿನಿಂದ ತಲೆಮರೆಸಿಕೊಂಡಿದ್ದ. ಈ ಪ್ರಕರಣದ ಸಂಬಂಧ 138 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು.