ಕಣಿವೆಯಲ್ಲಿ ಉಗ್ರರೊಂದಿಗಿನ ಎನ್‌ಕೌಂಟರ್‌ನಲ್ಲಿ ಸೇನೆಯ ಐವರು ಯೋಧರು ಹುತಾತ್ಮ!

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ, ಓರ್ವ ಸೇನಾಧಿಕಾರಿ ಮತ್ತು ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ.

ಕಣಿವೆಯಲ್ಲಿ ಉಗ್ರರೊಂದಿಗಿನ ಎನ್‌ಕೌಂಟರ್‌ನಲ್ಲಿ ಸೇನೆಯ ಐವರು ಯೋಧರು ಹುತಾತ್ಮ!
Linkup
ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ, ಓರ್ವ ಸೇನಾಧಿಕಾರಿ ಮತ್ತು ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ. ಮೂಲಗಳ ಪ್ರಕಾರ ಸುರಂಕೋಟೆ ಪ್ರದೇಶದಲ್ಲಿ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ನಾಲ್ಕರಿಂದ ಐದು ಜನ ಶಸ್ತ್ರಸಜ್ಜಿತ ಭಯೋತ್ಪಾದಕರು ಭದ್ರತಾ ಪಡೆಗಳತ್ತ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ದಾಳಿಯಲ್ಲಿ ಓರ್ವ ಜೂನಿಯರ್ ಕಮಿಷನ್ಡ್ ಅಧಿಕಾರಿ (ಜೆಸಿಒ) ಮತ್ತು ಇತರ ನಾಲ್ಕು ಸೈನಿಕರು ಹುತಾತ್ಮರಾಗಿದ್ದಾರೆ. ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಗಡಿ ನಿಯಂತ್ರಣ ರೇಖೆಯಿಂದ ಭಾರತದೊಳಕ್ಕೆ ನುಸುಳಿರುವ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು, ಚಮರ್ ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ. ಕಳೆದ ಕೆಲವು ದಿನಗಳಿಂದ ಕಣಿವೆಯ ಮುಗ್ಧ ನಾಗರಿಕರ ಮೇಲೆ ದಾಳಿ ಮಾಡುತ್ತಿರುವ ಉಗ್ರರು, ಹಲವರನ್ನು ಬಲಿ ಪಡೆದಿದ್ದಾರೆ. ಉಗ್ರರ ಈ ಕೃತ್ಯ ಕಣಿವೆ ಜನರನ್ನು ಕೆರಳಿಸಿದ್ದು, ಹೇಡಿಗಳ ವಿರುದ್ಧ ಸೂಕ್ತ ಕಾರ್ಯಾಚರಣೆಗೆ ಆಗ್ರಹಿಸಿ ಹಲವು ಪ್ರತಿಭಟನೆಗಳು ನಡೆದಿವೆ. ಅದರಂತೆ ಉಗ್ರರ ಬೇಟೆಯಲ್ಲಿ ನಿರತವಾಗಿರುವ ಮತ್ತು ಇತರ ಭದ್ರತಾ ಪಡೆಗಳು, ಇಂದು ಪೂಂಚ್‌ನಲ್ಲಿ ಕಾರ್ಯಾಚರಣೆ ಆರಂಭಿಸಿದ್ದವು. ಆದರೆ ದುರದೃಷ್ಟವಶಾತ್ ಈ ದಾಳಿಯಲ್ಲಿ ಐವರು ಭಾರತೀಯ ಯೋಧರು ಅಸುನೀಗಿರುವುದು ವಿಷಾದನೀಯ.