'ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ' ಹುದ್ದೆ ಸೃಷ್ಟಿ: ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ: ಗೃಹ ಸಚಿವ ಬೊಮ್ಮಾಯಿ

'ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ 'ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ' ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಇವರಿಗೆ ಅತ್ಯಾಧುನಿಕ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ತರಬೇತಿ ನೀಡಲಾಗುವುದು' - ಗೃಹ ಸಚಿವ ಬೊಮ್ಮಾಯಿ

'ಕೃತ್ಯ ಸ್ಥಳ ಪರಿಶೀಲನಾ ಅಧಿಕಾರಿ' ಹುದ್ದೆ ಸೃಷ್ಟಿ: ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ: ಗೃಹ ಸಚಿವ ಬೊಮ್ಮಾಯಿ
Linkup
: ಕರ್ನಾಟಕ ಪೊಲೀಸ್ ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ ಆರಂಭವಾಗಲಿದೆ. ಇದುವರೆಗೆ ಅಪರಾಧ ತಡೆ ಮತ್ತು ನಿಯಂತ್ರಣದಲ್ಲಿ ಮಾಡಿದ್ದೇವೆ. ಇನ್ನು ಮುಂದೆ ಅಪರಾಧ ಶೋಧ ಕಾರ್ಯದಲ್ಲಿ ಯಶಸ್ವಿಯಾಗುತ್ತೇವೆ. ಇವು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಅವರ ಆತ್ಮವಿಶ್ವಾಸದ ನುಡಿಗಳು. ಮಂಗಳವಾರ ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಪೊಲೀಸ್ ಇಲಾಖೆಯ ಸಬಲೀಕರಣಕ್ಕೆ ಹೊಸ ಯೋಜನೆಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಈ ವಿಶ್ವಾಸದ ನುಡಿಗಳನ್ನು ಆಡಿದರು. ಪೊಲೀಸ್ ಇಲಾಖೆಗೆ ಇದು ತಿರುವು ನೀಡುವ ಸುದಿನ.‌ ಕಳೆದ ಎರಡು ವರ್ಷಗಳಿಂದ ಅಪರಾಧ ನಿಗ್ರಹ ಮಾಡಿದ್ದೇವೆ. ಆದರೆ ಇನ್ನು ಮುಂದೆ ಅಪರಾಧ ಶೋಧ ಕಾರ್ಯವನ್ನು ತ್ವರಿತವಾಗಿ ಮಾಡುವ ಮೂಲಕ ಯಶಸ್ವಿಯಾಗುತ್ತೇವೆ ಎಂದು ಬೊಮ್ಮಾಯಿ ಹೇಳಿದರು. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ 'ಕೃತ್ಯ ಸ್ಥಳ ' ಹುದ್ದೆಯನ್ನು ಸೃಷ್ಟಿ ಮಾಡಲಾಗಿದೆ. ಇವರಿಗೆ ಅತ್ಯಾಧುನಿಕ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ತರಬೇತಿ ನೀಡಲಾಗುವುದು. ಕೃತ್ಯ ನಡೆದ ಸ್ಥಳಕ್ಕೆ ಈ ಅಧಿಕಾರಿಗಳು ಭೇಟಿ ನೀಡಿ ಸಾಕ್ಷಾಧಾರಗಳನ್ನು ಸಂರಕ್ಷಣೆ ಮಾಡಲಿದ್ದಾರೆ. ವಿದೇಶದಲ್ಲಿ ಈ ರೀತಿಯ ವ್ಯವಸ್ಥೆ ಜಾರಿಯಲ್ಲಿದೆ. ಅದೇ ಮಾದರಿಯ ಹುದ್ದೆಗಳನ್ನು ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಸೃಷ್ಟಿಸಲಾಗಿದೆ. ಇದರೊಂದಿಗೆ ಕರ್ನಾಟಕದಲ್ಲಿ ಅಪರಾಧ ಶೋಧ ಕಾರ್ಯದಲ್ಲಿ ಹೊಸ ಯುಗ ಆರಂಭವಾಗಲಿದೆ. ಇದಕ್ಕಾಗಿ ಎಲ್ಲ ರೀತಿಯ ಸಹಕಾರ ನೀಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು. ಕೃತ್ಯ ನಡೆದ ಸ್ಥಳದಲ್ಲಿನ ಸಾಕ್ಷಿ ಸಂಗ್ರಹ ಬಹಳ ಮುಖ್ಯ. ಸಾಕ್ಷಿ ನಾಶವಾದರೆ ಅಪರಾಧ ಪತ್ತೆ ಕಠಿಣ. ಆರಂಭದಲ್ಲಿ ಅತ್ಯಂತ ಹೇಯ ಕೃತ್ಯ ಮತ್ತು ದೊಡ್ಡ ಕೃತ್ಯಗಳಿಗೆ ಈ ವಿಶೇಷ ಅಧಿಕಾರಿಗಳನ್ನು ತನಿಖೆಗೆ ಬಳಕೆ ಮಾಡಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತರೆ ಅಪರಾಧಗಳಿಗೆ ತರಬೇತಿ ನೀಡಿದ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಈ ವಿಶೇಷ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಪೊಲೀಸ್ ಮಕ್ಕಳಿಗಾಗಿ ವಿದ್ಯಾನಿಧಿ ಯೋಜನೆ-2 ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ಮಕ್ಕಳಿಗೆ ವಿವಿಧ ಶಿಕ್ಷಣ ಪಡೆಯಲು ಶಿಷ್ಯ ವೇತನ ನೀಡಲಾಗುವುದು. ಮುಖ್ಯಮಂತ್ರಿಗಳು ಈ ಯೋಜನೆಯನ್ನು ಜಾರಿ ಮಾಡುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು. ಪೊಲೀಸರ ಆರೋಗ್ಯ ರಕ್ಷಣೆ ಬಹಳ ಮುಖ್ಯ. ಹೀಗಾಗಿ ಆರೋಗ್ಯ ಭಾಗ್ಯ ಯೋಜನೆಗೆ ಈಗ ಹೊಸ ರೂಪ ನೀಡಲಾಗಿದೆ. ಆಸ್ಪತ್ರೆಗಳಿಗೆ ನೀಡಬೇಕಾದ ಹಿಂದಿನ ಬಾಕಿಯನ್ನು ತೀರಿಸಿ ಈ ಯೋಜನೆ ಬಜೆಟ್ಟನ್ನು ಡಬಲ್ ಮಾಡಲಾಗಿದೆ ಎಂದು ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಗೆ 50 ಹೊಸ ಬಸ್ ಮತ್ತು ಮೋಟರ್ ಸೈಕಲ್ ಗಳನ್ನು ಇದೇ ಸಂದರ್ಭದಲ್ಲಿ ಸಮರ್ಪಿಸಲಾಯಿತು. 'ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕೃತ್ಯ ಸ್ಥಳ ಪರಿಶೀಲನೆ ಅಧಿಕಾರಿಗಳ ಹುದ್ದೆ ಸೃಷ್ಟಿ ಮಾಡಲಾಗಿದೆ. ದೇಶದ ಎಲ್ಲ ಪೊಲೀಸ್ ಮಹಾನಿರ್ದೇಶಕರ ಸಭೆಯಲ್ಲಿ ಅಮಿತ್ ಶಾ ಈ ರೀತಿಯ ಅಧಿಕಾರಿಗಳ ನೇಮಕದ ಸಲಹೆ ನೀಡಿದ್ದರು. ಅವರ ಕನಸು ಮತ್ತು ಇಚ್ಛೆಯಂತೆ ಈ ಹುದ್ದೆಯನ್ನು ಸೃಷ್ಟಿಸಲಾಗಿದೆ' ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.