ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದ ನಟ ಅಲ್ಲು ಅರ್ಜುನ್

ನಟ ಅಲ್ಲು ಅರ್ಜುನ್ ಇದೀಗ ಕೊರೊನಾ ವೈರಸ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾದ ನಟ ಅಲ್ಲು ಅರ್ಜುನ್
Linkup
ಟಾಲಿವುಡ್‌ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ಗೆ ಸೋಂಕು ತಗುಲಿತ್ತು. ಕಳೆದ ತಿಂಗಳಾಂತ್ಯದಲ್ಲಿ ಅಲ್ಲು ಅರ್ಜುನ್‌ಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಮನೆಯಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆದ ನಟ ಇದೀಗ ಕೊರೊನಾ ವೈರಸ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. 15 ದಿನಗಳ ಕಾಲ ಕ್ವಾರಂಟೈನ್ ಆಗಿದ್ದ ನಟ ಅಲ್ಲು ಅರ್ಜುನ್‌ ಅವರ ಪರೀಕ್ಷಾ ವರದಿಯಲ್ಲಿ ಇದೀಗ 'ನೆಗೆಟಿವ್' ಕನ್ಫರ್ಮ್ ಆಗಿದೆ. ಈ ಬಗ್ಗೆ ಸ್ವತಃ ಅಲ್ಲು ಅರ್ಜುನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ಸೋಷಿಯಲ್ ಮೀಡಿಯಾ ಪೋಸ್ಟ್''ಹಲೋ ಎಲ್ಲರಿಗೂ... 15 ದಿನಗಳ ಕಾಲ ಕ್ವಾರಂಟೈನ್ ಆಗಿದ್ದ ಬಳಿಕ ನನ್ನ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಕಂಡುಬಂದಿದೆ. ನನಗಾಗಿ ಪ್ರಾರ್ಥನೆ ಮಾಡಿದ ನನ್ನ ಎಲ್ಲಾ ಹಿತೈಷಿ ಹಾಗೂ ಅಭಿಮಾನಿಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ಈ ಲಾಕ್‌ಡೌನ್‌ನಿಂದ ಸೋಂಕಿನ ಪ್ರಮಾಣ ಕಡಿಮೆ ಆಗುತ್ತೆ ಎಂದು ನಾನು ಭಾವಿಸಿದ್ದೇನೆ. ಎಲ್ಲರೂ ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ನಿಮ್ಮ ಪ್ರೀತಿಗೆ ಧನ್ಯವಾದಗಳು'' ಎಂದು ನಟ ಅಲ್ಲು ಅರ್ಜುನ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲು ಅರ್ಜುನ್‌ಗಾಗಿ ದೇವಸ್ಥಾನದಲ್ಲಿ ಪೂಜೆ ಮಾಡಿದ್ದ ಅಭಿಮಾನಿಗಳು ಅಲ್ಲು ಅರ್ಜುನ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ್ದರು. ಅಭಿಮಾನಿಗಳು ಪೂಜೆ ಮಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಅಲ್ಲು ಅರ್ಜುನ್ ಫಿಟ್ ಅಂಡ್ ಫೈನ್ ಆಗಿದ್ದಾರೆ. ಸದ್ಯ ಅಲ್ಲು ಅರ್ಜುನ್ 'ಪುಷ್ಪ' ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಲಾಕ್‌ಡೌನ್ ಕಾರಣದಿಂದ 'ಪುಷ್ಪ' ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಲಾಗಿದೆ. ಕೋವಿಡ್ ಕಾರಣದಿಂದ 'ಪುಷ್ಪ' ಚಿತ್ರ ರಿಲೀಸ್ ಡೇಟ್ ಕೂಡ ಮುಂದಕ್ಕೆ ಹೋಗಿದೆ.