ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಸುದೀಪ್

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶುಭಾಶಯ ತಿಳಿಸಿದ್ದಾರೆ

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶುಭ ಕೋರಿದ ಸುದೀಪ್
Linkup
ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಗಣ್ಯರ ದಂಡೇ ಆಗಮಿಸಿತ್ತು. ಸಿಎಂ ಪಟ್ಟಕ್ಕೇರಿದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ರಾಜಕಾರಣಿಗಳು ಮಾತ್ರವಲ್ಲ ಸಿನಿಮಾ ನಟ-ನಟಿಯರು ಕೂಡ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಹಾರೈಸುತ್ತಿದ್ದಾರೆ. ಕನ್ನಡ ನಟ, ಅಭಿನಯ ಚಕ್ರವರ್ತಿ ಕೂಡ ಹೊಸ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಟ್ವಿಟ್ಟರ್ ಮೂಲಕ ಬಸವರಾಜ್ ಬೊಮ್ಮಾಯಿ ಅವರಿಗೆ ಕಿಚ್ಚ ಸುದೀಪ್ ವಿಶ್ ಮಾಡಿದ್ದಾರೆ. ''ಅವರ ಸರಳತೆಯನ್ನು ನೋಡಿ ಬೆಳೆದವನು ನಾನು. ನನ್ನ ವೃತ್ತಿಜೀವನದ ಆರಂಭದಲ್ಲಿ ವೈಯಕ್ತಿಕವಾಗಿ ನನಗೆ ಅವರು ಬಹಳ ಬೆಂಬಲ ನೀಡಿದ್ದರು. ನಿಮಗೆ ಒಳ್ಳೆಯದಾಗಲಿ ಮಾಮ'' ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ. ಅಂದ್ಹಾಗೆ, ಕಿಚ್ಚ ಸುದೀಪ್ ಸದ್ಯ 'ಕೋಟಿಗೊಬ್ಬ 3' ಮತ್ತು 'ವಿಕ್ರಾಂತ್ ರೋಣ' ಚಿತ್ರಗಳಲ್ಲಿ ಕಿಚ್ಚ ಸುದೀಪ್ ಬಿಜಿಯಾಗಿದ್ದಾರೆ. 'ಕೋಟಿಗೊಬ್ಬ 3' ಚಿತ್ರದ ಬಿಡುಗಡೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. 'ವಿಕ್ರಾಂತ್ ರೋಣ' ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ.