ಕರ್ನಾಟಕದ ಬಿವಿ ನಾಗರತ್ನಾ ಸೇರಿ ಒಟ್ಟು 9 ಮಂದಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ!

ಕರ್ನಾಟಕ ಮೂಲದ ಬಿವಿ ನಾಗರತ್ನಾ ಸೇರಿ 9 ಮಂದಿ ಇಂದು ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಿದರು. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ಮಂದಿ ನೂತನ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್‌ ಆವರಣದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಅಲ್ಲದೇ ಮೂವರು ಮಹಿಳಾ ನ್ಯಾಯಮೂರ್ತಿಗಳು ಇದೀಗ ಒಂದೇ ಬಾರಿ ಪ್ರಮಾಣವಚನ ಸ್ವೀಕರಿಸಿರುವುದು ಕೂಡ ವಿಶೇಷ.

ಕರ್ನಾಟಕದ ಬಿವಿ ನಾಗರತ್ನಾ ಸೇರಿ ಒಟ್ಟು 9 ಮಂದಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ!
Linkup
ಹೊಸದಿಲ್ಲಿ: ಇತ್ತೀಚೆಗಷ್ಟೇ ದೇಶದ ಸರ್ವೋಚ್ಚ ನ್ಯಾಯಾಲಯಕ್ಕೆ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದ ಕರ್ನಾಟಕ ಮೂಲದ ಸೇರಿ 9 ಮಂದಿ ಇಂದು ಒಟ್ಟಿಗೆ ಪ್ರಮಾಣವಚನ ಸ್ವೀಕರಿಸಿದರು. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ಮಂದಿ ನೂತನ ನ್ಯಾಯಮೂರ್ತಿಗಳು ಆವರಣದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹೊಸದಾಗಿ ನೇಮಕಗೊಂಡ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು. ಈ ಮೂಲಕ ಇದೀಗ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೇರಿ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ನ್ಯಾಯಮೂರ್ತಿ ಬಿವಿ ನಾಗರತ್ನಾ, ನ್ಯಾಯಮೂರ್ತಿ ಎ.ಎಸ್. ಓಕಾ, ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಸಿ.ಟಿ. ರವೀಂದ್ರಕುಮಾರ್, ನ್ಯಾಯಮೂರ್ತಿ ಎಂ.ಎಂ. ಸುಂದರೇಶ್ ಮತ್ತು ನ್ಯಾಯಮೂರ್ತಿ ಬೇಲಾ ತ್ರಿವೇದಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರು ಮಂಗಳವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದವರು. ಮೂರು ಮಂದಿ ಮಹಿಳೆಯರು! ಇನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದವರ ಪೈಕಿ ಮೂರು ಮಂದಿ ಮಹಿಳೆಯರಾಗಿರುವುದು ಇದು ಕೂಡ ಈ ಬಾರಿಯ ವಿಶೇಷತೆ ಹಾಗೂ ಮೈಲುಗಲ್ಲಾಗಿದೆ. ನ್ಯಾಯಮೂರ್ತಿ ಬಿವಿ ನಾಗರತ್ನಾ, ನ್ಯಾಯಮೂರ್ತಿ ಹಿಮಾ ಕೊಹ್ಲಿ, ನ್ಯಾಯಮೂರ್ತಿ ಬೇಲಾ ತ್ರಿವೇದಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಮಹಿಳಾ ನ್ಯಾಯಮೂರ್ತಿಗಳಾಗಿದ್ದಾರೆ. ಇನ್ನು ಈ ಮೂಲಕ ಒಟ್ಟು ನಾಲ್ಕು ಮಂದಿ ಮಹಿಳಾ ಸದ್ಯ ಸುಪ್ರೀಂಕೊರ್ಟ್‌ನಲ್ಲಿ ನ್ಯಾಯಮೂರ್ತಿಗಳಾಗಿ ಕಾರ್ಯನಿವರ್ಹಿಸಿದಂತೆ ಆಗಲಿದೆ. ನ್ಯಾಯಮೂರ್ತಿ ಹಿಮಾ ಕೊಹ್ಲಿ ತೆಲಂಗಾಣದ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು. 2027ಕ್ಕೆ ನಾಗರತ್ನಾ ಮಹಿಳಾ ಸಿಜೆಐ! ಕರ್ನಾಟಕದವರಾದ ನ್ಯಾಯಮೂರ್ತಿ ಬಿವಿ ನಾಗರತ್ನ ಅವರು, ದೇಶದ ಮೊದಲ ಮಹಿಳಾ ಸಿಜೆಐ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. 2027ರಲ್ಲಿ ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಸುಪ್ರೀಂಕೋರ್ಟ್‌ನ ಇತಿಹಾಸದಲ್ಲಿಯೇ ಈವರೆಗೂ ಯಾವುದೇ ಮಹಿಳಾ ನ್ಯಾಯಮೂರ್ತಿ ಈ ಅತ್ಯುನ್ನತ ಹುದ್ದೆಗೆ ಏರಿರಲಿಲ್ಲ. ಈ ಚರಿತ್ರೆ ಕರ್ನಾಟಕದಿಂದ ಸೃಷ್ಟಿಯಾಗಲಿದೆ. ಸುಪ್ರೀಂಕೋರ್ಟ್‌ ಮೂಲಗಳ ಪ್ರಕಾರ ಆ ಹುದ್ದೆಗೆ ಬಿವಿ ನಾಗರತ್ನಾ ಏರಲಿದ್ದಾರೆ. ಈ ಮೂಲಕ ಹೊಸ ಚರಿತ್ರೆಗೆ ಅವರು ನಾಂದಿ ಹಾಡಲಿದ್ದಾರೆ. 1962ರಲ್ಲಿ ಜನಿಸಿದ ನ್ಯಾಯಮೂರ್ತಿ ನಾಗರತ್ನ ಅವರು 1987ರ ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ವಕೀಲರಾಗಿ ವೃತ್ತಿ ಬದುಕು ಆರಂಭಿಸಿದ್ದರು. 2008ರ ಫೆಬ್ರವರಿಯಲ್ಲಿ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾದರು. 2010ರ ಫೆಬ್ರವರಿಯಲ್ಲಿ ಅವರು ಕಾಯಂ ನ್ಯಾಯಮೂರ್ತಿಯಾದರು. ನಾಗರತ್ನ ಅವರ ತಂದೆ, ಇಎಸ್ ವೆಂಕಟರಾಮಯ್ಯ ಅವರು 1989ರಲ್ಲಿ ಸುಮಾರು ಆರು ತಿಂಗಳ ಅವಧಿಗೆ ಸುಪ್ರೀಂಕೋರ್ಟ್ ಸಿಜೆಐ ಆಗಿದ್ದರು. ಅಲ್ಲದೇ ಹಲವು ಜನಪರ ತೀರ್ಪುಗಳಿಂದಲೇ ನ್ಯಾಯಮೂರ್ತಿ ಬಿವಿ ನಾಗರತ್ನಾ ಜನಪ್ರಿಯಗಳಿಸಿದ್ದಾರೆ. ಇದೀಗ 2027ರಲ್ಲಿ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗುವ ಮೂಲಕ ಹೊಸ ಚರಿತ್ರೆ ಬರೆಯಲಿದ್ದಾರೆ.