ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್‌ಗೆ ಜೀವಾವಧಿ ಶಿಕ್ಷೆ!
ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್‌ಗೆ ಜೀವಾವಧಿ ಶಿಕ್ಷೆ!
ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾಗಿರುವ ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ಗುರ್ಮೀತ್ ರಾಮ್ ರಹೀಮ್ ಸಿಂಗ್ ಹಾಗೂ ಇತರ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ.
ಚಂಡೀಗಢ: ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾಗಿರುವ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದು, ಗುರ್ಮೀತ್ ರಾಮ್ ರಹೀಮ್ ಸಿಂಗ್ ಹಾಗೂ ಇತರ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ.
ಇಷ್ಟೇ ಅಲ್ಲದೇ ಗರ್ಮೀತ್ ರಾಮ್ ರಹೀಮ್ ಸಿಂಗ್‌ಗೆ 31 ಲಕ್ಷ ರೂ. ದಂಡ ಮತ್ತು ಇತರ ನಾಲ್ವರಿಗೆ ತಲಾ 50 ಸಾವಿರ ರೂ. ದಂಡ ವಿಧಿಸಿ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಡೇರಾ ಸಚ್ಚಾ ಸೌಧಾ ಮ್ಯಾನೇಜರ್ ಆಗಿದ್ದ ರಂಜಿತ್ ಸಿಂಗ್ ಅವರ ಕೊಲೆ ಪ್ರಕರಣದಲ್ಲಿ ಹಾಗೂ ಇತರ ನಾಲ್ವರ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಪಂಚಕುಲ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಈ ಹಿಂದೆ ಅತ್ಯಾಚಾರ ಮತ್ತು ಪತ್ರಕರ್ತನ ಕೊಲೆ ಪ್ರಕರಣದಲ್ಲೂ ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಶಿಕ್ಷೆ ಪ್ರಕಟಿಸಲಾಗಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.