ಕೋವಿಡ್19: 'ಅಣ್ಣಯ್ಯ', 'ಬಿಂದಾಸ್', 'ರನ್ನ' ನಿರ್ಮಾಪಕ ಚಂದ್ರಶೇಖರ್ ನಿಧನ

ಕೋವಿಡ್-19 ಸೋಂಕಿಗೆ ಒಳಗಾಗಿದ್ದ ನಿರ್ಮಾಪಕ ಚಂದ್ರಶೇಖರ್ ನಿನ್ನೆ ರಾತ್ರಿ 11.50ರ ಸುಮಾರಿಗೆ ನಿಧನರಾಗಿದ್ದಾರೆ.

ಕೋವಿಡ್19: 'ಅಣ್ಣಯ್ಯ', 'ಬಿಂದಾಸ್', 'ರನ್ನ' ನಿರ್ಮಾಪಕ ಚಂದ್ರಶೇಖರ್ ನಿಧನ
Linkup
ಮಹಾಮಾರಿ ಕೊರೊನಾ ವೈರಸ್‌ಗೆ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಬಲಿಯಾಗಿದ್ದಾರೆ. ಸೋಂಕಿಗೆ ಒಳಗಾಗಿದ್ದ ನಿರ್ಮಾಪಕ ಚಂದ್ರಶೇಖರ್ ನಿನ್ನೆ (ಏಪ್ರಿಲ್ 28) ರಾತ್ರಿ 11.50ರ ಸುಮಾರಿಗೆ ನಿಧನರಾಗಿದ್ದಾರೆ. 23 ದಿನಗಳ ಹಿಂದೆ ನಿರ್ಮಾಪಕ ಚಂದ್ರಶೇಖರ್‌ರವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಮಣಿಪಾಲ್ ಸೆಂಟರ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಕೂಡ ಕಂಡುಬಂದಿತ್ತು. ಆದರೆ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಶೇಖರ್ ವಿಧಿವಶರಾಗಿದ್ದಾರೆ. ಹಿಟ್ ಸಿನಿಮಾಗಳನ್ನು ನೀಡಿದ್ದ ನಿರ್ಮಾಪಕ ಚಂದ್ರಶೇಖರ್ ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ 'ಅಣ್ಣಯ್ಯ', ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಟನೆಯ 'ಬಿಂದಾಸ್', ಕಿಚ್ಚ ಸುದೀಪ್ ಅಭಿನಯದ 'ರನ್ನ', ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಏನೋ ಒಂಥರಾ' ಮುಂತಾದ ಚಿತ್ರಗಳನ್ನ ಚಂದ್ರಶೇಖರ್ ನಿರ್ಮಾಣ ಮಾಡಿದ್ದರು. ಮಂಜು ಮಾಂಡವ್ಯ ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಜೊತೆಗೆ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಒಂದು ಸಿನಿಮಾ ಅನೌನ್ಸ್ ಮಾಡಿದ್ದರು. ಆದರೆ ಆ ಚಿತ್ರ ಸೆಟ್ಟೇರುವ ಮುನ್ನವೇ ಚಂದ್ರಶೇಖರ್ ಇಹಲೋಕ ತ್ಯಜಿಸಿದ್ದಾರೆ. ನಿರ್ಮಾಪಕ ಚಂದ್ರಶೇಖರ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.