ಕೃಷಿ ಕಾಯ್ದೆಗಳು ರದ್ದಾದರೂ ಪ್ರತಿಭಟನೆ ನಿಲ್ಲಿಸಲ್ಲ, ಎಂಎಸ್‌ಪಿ ಚರ್ಚೆಯಾಗಲಿ: ರಾಕೇಶ್‌ ಟಿಕಾಯತ್

ಕನಿಷ್ಠ ಬೆಂಬಲ ಬೆಲೆ ಕುರಿತು ಸಂಸತ್‌ನಲ್ಲಿ ಚರ್ಚೆಯಾಗುವವರೆಗೆ ಪ್ರತಿಭಟನಾ ಸ್ಥಳದಿಂದ ಹಿಂತಿರುಗುವುದಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೃಷಿ ಕಾಯ್ದೆಗಳು ರದ್ದಾದರೂ ಪ್ರತಿಭಟನೆ ನಿಲ್ಲಿಸಲ್ಲ, ಎಂಎಸ್‌ಪಿ ಚರ್ಚೆಯಾಗಲಿ: ರಾಕೇಶ್‌ ಟಿಕಾಯತ್
Linkup
ಹೊಸದಿಲ್ಲಿ: ಸಂಸತ್‌ ಅಧಿವೇಶನದ ಮೊದಲ ದಿನವೇ ' ವಿಧೇಯಕ- 2021' ಉಭಯ ಸದನಗಳಲ್ಲಿ ಅನುಮೋದನೆ ಪಡೆದಿದೆ. ಆದರೆ, ನಮ್ಮ ಬೇಡಿಕೆಗಳು ಇನ್ನೂ ಪೂರ್ಣವಾಗಿಲ್ಲ. ಕುರಿತು ಸಂಸತ್‌ನಲ್ಲಿ ಚರ್ಚೆಯಾಗುವವರೆಗೆ ಪ್ರತಿಭಟನಾ ಸ್ಥಳದಿಂದ ಹಿಂತಿರುಗುವುದಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಉತ್ತರ ಪ್ರದೇಶದ ಕೌಶಂಬಿಯಲ್ಲಿ ಸೋಮವಾರ ರಾಕೇಶ್ ಟಿಕಾಯತ್ ಸುದ್ದಿಗಾರರೊಂದಿಗೆ ಮಾತನಾಡಿದರು. ಕೃಷಿ ಕಾಯ್ದೆಗಳ ರದ್ದು, ಪ್ರತಿಭಟನೆ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲ 750 ರೈತರಿಗೆ ಸಮರ್ಪಣೆ. ಇದರೊಂದಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ಇತರೆ ಸಮಸ್ಯೆಗಳು ಇನ್ನೂ ಬಾಕಿ ಉಳಿದಿವೆ. ಹೀಗಾಗಿ ಸದ್ಯಕ್ಕೆ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಸರಕಾರವು ದೇಶದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯಬಾರದು ಎಂದು ಬಯಸುತ್ತದೆ. ಆದರೆ, ಇತರ ವಿಷಯಗಳು ಸೇರಿದಂತೆ ಎಂಎಸ್‌ಪಿ ಕುರಿತು ಯಾವುದೇ ಚರ್ಚೆ ನಡೆಯದ ಹೊರತಾಗಿ ನಾವು ಪ್ರತಿಭಟನಾ ಸ್ಥಳದಿಂದ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ. ರೈತರು ಮನೆಗೆ ವಾಪಸ್ಸಾಗುವಂತೆ ಕೃಷಿ ಸಚಿವರ ಮನವಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಿ ಮನೆಗೆ ವಾಪಸ್ ಆಗುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮನವಿ ಮಾಡಿಕೊಂಡಿದ್ದರು. ಇದೇ ವೇಳೆ ರೈತರು ಹೊಲ-ಗದ್ದೆಗಳಲ್ಲಿ ಬೆಳೆ ನಂತರದ ಹುಲ್ಲು ಸುಡುವುದು ಅಪರಾಧವಲ್ಲ ಎಂದು ಪರಿಗಣಿಸುವಂತೆ ಸಲ್ಲಿಸಿದ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡಿದೆ ಎಂದು ಘೋಷಿಸಿದ್ದರು. ಕನಿಷ್ಠ ಬೆಂಬಲ ಬೆಲೆ ಬೇಡಿಕೆ ಈಡೇರಿಕೆ "ಕೇಂದ್ರ ಸರ್ಕಾರ ರಚಿಸುತ್ತಿರುವ ಈ ಸಮಿತಿಯ ಸಂವಿಧಾನದೊಂದಿಗೆ ಕನಿಷ್ಛ ಬೆಂಬಲ ಬೆಲೆ() ಮೇಲಿನ ರೈತರ ಬೇಡಿಕೆಯನ್ನು ಈಡೇರಿಸುತ್ತದೆ. ಹೀಗಿರುವಾಗ ರೈತರು ಆಂದೋಲನವನ್ನು ಮುಂದುವರಿಸುವುದರಲ್ಲಿ ಅರ್ಥವಿಲ್ಲ. ರೈತರು ತಮ್ಮ ಆಂದೋಲನವನ್ನು ಕೊನೆಗೊಳಿಸಿ ಮನೆಗೆ ಹೋಗಬೇಕೆಂದು ನಾನು ಒತ್ತಾಯಿಸುತ್ತೇನೆ," ಎಂದು ತೋಮರ್ ಹೇಳಿದ್ದರು. ಕೇಂದ್ರ ಸರ್ಕಾರದ ಘೋಷಣೆಗೆ ಪ್ರತಿಕ್ರಿಯಿಸಿದ ರೈತರ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್, "ನಾವು ರಚಿಸಲಾದ ಸಮಿತಿಯ ವಿವರಗಳನ್ನು ಓದಿಲ್ಲ. ವಿವರಗಳ ಬಗ್ಗೆ ನಮಗೆ ತಿಳಿಸಿದ ನಂತರವೇ ನಾವು ಪ್ರತಿಕ್ರಿಯಿಸುತ್ತೇವೆ ಮತ್ತು ಕ್ರಮ ಕೈಗೊಳ್ಳುತ್ತೇವೆ," ಎಂದು ತಿಳಿಸಿದ್ದರು. 'ಕನಿಷ್ಠ ಬೆಂಬಲ ಬೆಲೆ' ಖಾತ್ರಿ ಪರಿಶೀಲನೆಗೆ ಸಮಿತಿ ಮೂರು ಕೃಷಿ ಕಾಯಿದೆಗಳನ್ನು ರದ್ದುಪಡಿಸಿದ ಬಳಿಕವೂ ಉಳಿಯುವ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಬಿಕ್ಕಟ್ಟಿನ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಕೃಷಿ ಕಾಯಿದೆಗಳ ರದ್ದು ಘೋಷಣೆ ಮಾಡಿದ ಬೆನ್ನ ಹಿಂದೆಯೇ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ನೀಡುವಂತೆ ರೈತ ಮುಖಂಡರು ಆಗ್ರಹ ಮಂಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ರಧಾನಿ ನರೇಂದ್ರ ಮೋದಿ, ''ರೈತರ ಒಳಿತಿನ ಸರ್ವ ಕ್ರಮಗಳನ್ನು ಕೈಗೊಳ್ಳಲಾಗುವುದು. ಎಂಎಸ್‌ಪಿ ಪರಿಶೀಲನೆಗೆ ಸಮಿತಿ ರಚಿಸಲಾಗುವುದು,'' ಎಂದು ಭರವಸೆ ನೀಡಿದಿದ್ದರು. ಇದನ್ನು ದೃಢೀಕರಿಸಿದ ಸಚಿವ ತೋಮರ್‌, ''ರೈತರ ಹಿತಕ್ಕೆ ಕಿಂಚಿತ್ತು ಧಕ್ಕೆ ಒದಗಿದರೂ ಅದನ್ನು ಸರಕಾರ ಸಹಿಸುವುದಿಲ್ಲ. ಅನ್ನದಾತನ ಹಿತರಕ್ಷಣೆಯೇ ಸರಕಾರದ ಪ್ರಧಾನ ಆಶಯ. ಕಾಯಿದೆ ರದ್ದಿನ ಬಳಿಕದ ಕ್ರಮಗಳ ಕುರಿತು ಪರಿಶೀಲಿಸಲು ರಚನೆಯಾಗುವ ತಜ್ಞರ ಸಮಿತಿಯಲ್ಲಿ ರೈತ ಪ್ರತಿನಿಧಿಗಳಿಗೂ ಅವಕಾಶ ನೀಡಲಾಗುವುದು,'' ಎಂದು ತಿಳಿಸಿದ್ದಾರೆ.