ಕುಸ್ತಿಪಟುಗಳ ವಿವಾದ: ಕುಸ್ತಿ ಫೆಡರೇಶನ್‌ನ ಮೇಲ್ವಿಚಾರಣಾ ಸಮಿತಿಗೆ ಬಬಿತಾ ಫೋಗಟ್ ಸೇರ್ಪಡೆ!

ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರನ್ನು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮತ್ತು ಫೆಡರೇಶನ್ ನಡೆಸಲು ಕ್ರೀಡಾ ಸಚಿವಾಲಯ ರಚಿಸಿರುವ ಮೇಲ್ವಿಚಾರಣಾ ಸಮಿತಿಯಲ್ಲಿ ಸೇರಿಸಲಾಗಿದೆ. ನವದೆಹಲಿ: ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರನ್ನು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ಮತ್ತು ಫೆಡರೇಶನ್ ನಡೆಸಲು ಕ್ರೀಡಾ ಸಚಿವಾಲಯ ರಚಿಸಿರುವ ಮೇಲ್ವಿಚಾರಣಾ ಸಮಿತಿಯಲ್ಲಿ ಸೇರಿಸಲಾಗಿದೆ.
ಕ್ರೀಡಾ ಸಚಿವಾಲಯವು ರಚಿಸಿರುವ ಸಮಿತಿಯು WFI ಮತ್ತು ಅದರ ಅಧ್ಯಕ್ಷರ ವಿರುದ್ಧ ಲೈಂಗಿಕ ದುರ್ವರ್ತನೆ, ಕಿರುಕುಳ, ಬೆದರಿಕೆ, ಹಣಕಾಸು ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪಗಳನ್ನು ತನಿಖೆ ನಡೆಸುತ್ತಿದೆ. ಖ್ಯಾತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ರವಿ ದಹಿಯಾ ಈ ಆರೋಪಗಳನ್ನು ಮಾಡಿದ್ದಾರೆ. ಬಬಿತಾ ಈ ಸಮಿತಿಯ ಆರನೇ ಸದಸ್ಯೆ. ಸಮಿತಿಯಲ್ಲಿ ಲೆಜೆಂಡರಿ ಬಾಕ್ಸರ್ ಎಂಸಿ ಮೇರಿ ಕೋಮ್, ಮಾಜಿ ಕುಸ್ತಿಪಟು ಯೋಗೇಶ್ವರ್ ದತ್, ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರ್ಗುಂಡೆ, ಮಾಜಿ ಎಸ್‌ಎಐ ಅಧಿಕಾರಿ ರಾಧಿಕಾ ಶ್ರೀಮಾನ್ ಮತ್ತು ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಸ್ಕೀಮ್‌ನ ಮಾಜಿ ಸಿಇಒ ರಾಜೇಶ್ ರಾಜಗೋಪಾಲನ್ ಇದ್ದಾರೆ.
'ಭಾರತದ ಕುಸ್ತಿ ಫೆಡರೇಶನ್‌ನ ದೈನಂದಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲು ಕ್ರೀಡಾ ಸಚಿವಾಲಯವು ರಚಿಸಿರುವ ಸಮಿತಿಯಲ್ಲಿ ಮಾಜಿ ಕುಸ್ತಿಪಟು ಬಬಿತಾ ಫೋಗಟ್ ಅವರನ್ನು ಸೇರಿಸಲಾಗಿದೆ' ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ
ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತರಾದ ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಸೇರಿದಂತೆ ಹಲವಾರು ಗೌರವಾನ್ವಿತ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಫೆಡರೇಶನ್‌ನ ಕಾರ್ಯಚಟುವಟಿಕೆಯಲ್ಲಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಂತರ ಕ್ರೀಡಾ ಸಚಿವಾಲಯವು ಫೆಡರೇಶನ್‌ನ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸಿತು, ಇದು ಆರೋಪಗಳ ತನಿಖೆಯ ಜವಾಬ್ದಾರಿಯನ್ನು ಸಹ ವಹಿಸಿತು.
ಈ ಸಮಿತಿ ರಚನೆಗೂ ಮುನ್ನ ಸರ್ಕಾರದಿಂದ ಸಮಾಲೋಚನೆ ನಡೆಸದಿರುವ ಬಗ್ಗೆ ಕುಸ್ತಿಪಟುಗಳು ಅಸಮಾಧಾನ ವ್ಯಕ್ತಪಡಿಸಿದ್ದರು, ಆದರೆ ಸರ್ಕಾರವು ಪ್ರಸ್ತುತ ಇದಕ್ಕೆ ಸ್ಪಂದಿಸಿಲ್ಲ.