ಗುಂಡ್ಲುಪೇಟೆಯ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗೆ ನೆರವಾದ ಕಿಚ್ಚ ಸುದೀಪ್

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಪೃಥ್ವಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಅಗತ್ಯ ನೆರವು ನೀಡಲು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಿರ್ಧರಿಸಿದೆ.

ಗುಂಡ್ಲುಪೇಟೆಯ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗೆ ನೆರವಾದ ಕಿಚ್ಚ ಸುದೀಪ್
Linkup
ಕೋವಿಡ್-19 ಹಾಗೂ ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅನೇಕರಿಗೆ ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಸಹಾಯ ಮಾಡಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಅನೇಕರಿಗೆ ತಮ್ಮ ಚಾರಿಟೇಬಲ್ ಸೊಸೈಟಿ ಮೂಲಕ ಕಿಚ್ಚ ಸುದೀಪ್ ಆಹಾರ ಒದಗಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಿಗೆ, ಮಂಗಳಮುಖಿಯರಿಗೆ ಆಹಾರ ಹಾಗೂ ದಿನಸಿ ಕಿಟ್‌ಗಳನ್ನೂ ನೀಡಿದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಶಿಕ್ಷಕರಿಗೂ ಗೌರವಧನ ನೀಡಲು ಸುದೀಪ್ ಮುಂದಾಗಿದ್ದಾರೆ. ಈ ಮಧ್ಯೆ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗೂ ಕಿಚ್ಚ ಸುದೀಪ್ ನೆರವಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿರುವ ಪೃಥ್ವಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಅಗತ್ಯ ನೆರವು ನೀಡಲು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ನಿರ್ಧರಿಸಿದೆ. ಅಲ್ಲಿರುವ ಮಕ್ಕಳಿಗೆ ದಿನಸಿ ಕಿಟ್‌ಗಳನ್ನು ಈಗಾಗಲೇ ಕಿಚ್ಚ ಸುದೀಪ್ ತಂಡ ವಿತರಿಸಿದೆ. ವಸತಿ ಶಾಲೆಗೆ ಭೇಟಿ ಕೊಟ್ಟು, ಅಲ್ಲಿನ ಪರಿಸ್ಥಿತಿಯನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಯ ಸದಸ್ಯರು ಕಣ್ಣಾರೆ ಕಂಡಿದ್ದಾರೆ. ವಸತಿ ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿ ಮಾಡಲು ನೆರವು ನೀಡುವುದಾಗಿ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಭರವಸೆ ನೀಡಿದೆ. ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಯ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.