ಚಂದ್ರಬಾಬು ರೋಡ್‌ಶೋ ವೇಳೆ ಕಾಲ್ತುಳಿತ: ಚರಂಡಿಗೆ ಬಿದ್ದು 8 ಮಂದಿ ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಯೋಜಿಸಿದ ರೋಡ್ ಶೋ ಕಾರ್ಯಕ್ರಮದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿಸಿದೆ. ಕಾಲ್ತುಳಿತವಾಗಿ ಚರಂಡಿಗೆ ಬಿದ್ದು 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಅವಘಡದಲ್ಲಿ ಇನ್ನೂ ಹಲವು ಮಂದಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಧ್ರಪ್ರದೇಶದ ನೆಲ್ಲೂರು ವ್ಯಾಪ್ತಿಯ ಕಂದುಕೂರಿನಲ್ಲಿ ದುರಂತ ಸಂಭವಿಸಿದೆ. ಚಂದ್ರಬಾಬು ನಾಯ್ಡು ಬೆಂಗಾವಲು ಪಡೆ ನೆಲ್ಲೂರು ಪ್ರದೇಶವನ್ನು ಹಾದು ಹೋಗುತ್ತಿದ್ದ ವೇಳೆ ನೂಕುನುಗ್ಗಲು ಹೆಚ್ಚಾಗಿ ಅವಘಡ ಸಂಭವಿಸಿದೆ. ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಕಾಲ್ತುಳಿತವಾಗಿ ಚರಂಡಿಗೆ ಬಿದ್ದಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.