ಚಂದ್ರಯಾನ-3: ಚಂದ್ರನ ಮೇಲೆ ಇಳಿಯುವ ಮುನ್ನ ಫೋಟೋ ಕ್ಲಿಕ್ಕಿಸಿದ ವಿಕ್ರಮ್ ಲ್ಯಾಂಡರ್, ಚಂದ್ರನ ಮತ್ತೊಂದು ಮುಖ ಇಲ್ಲಿದೆ ನೋಡಿ...

ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇದಕ್ಕೂ ಮೊದಲೇ ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿದೆ. ನವದೆಹಲಿ: ಬಹುನಿರೀಕ್ಷಿತ ಚಂದ್ರಯಾನ-3ರ ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಯುವುದನ್ನು ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಇದಕ್ಕೂ ಮೊದಲೇ ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿದೆ.
ವಿಕ್ರಮ್ ಲ್ಯಾಂಡರ್ ಕ್ಲಿಕ್ಕಿಸಿದ ಈ ಫೋಟೋಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.
Chandrayaan-3 Mission:
Here are the images of
Lunar far side area
captured by the
Lander Hazard Detection and Avoidance Camera (LHDAC).
This camera that assists in locating a safe landing area -- without boulders or deep trenches -- during the descent is developed by ISRO… pic.twitter.com/rwWhrNFhHB
— ISRO (@isro) August 21, 2023
ಫೋಟೋದಲ್ಲಿ ಭೂಮಿಗೆ ಕಾಣಿಸದ ಚಂದ್ರನ ಮತ್ತೊಂದು ಮುಖ ಕಾಣಿಸಿದೆ. ಚಂದ್ರನ ಮಗ್ಗಲಿನಲ್ಲಿ ಸಾಕಷ್ಟು ಕುಳಿಗಳು ಇರುವುದು ಫೋಟೋದಲ್ಲಿ ಕಂಡು ಬಂದಿದೆ.
ಇದನ್ನೂ ಓದಿ: ಅಂತಿಮ ಚಂದ್ರನ ಚಲನೆಯನ್ನು ಪೂರ್ಣಗೊಳಿಸಿದ ಚಂದ್ರಯಾನ-3, ಚಂದ್ರನ ಮೇಲ್ಮೈ ಸ್ಪರ್ಶ ಮುಂದಿನ ನಿಲ್ದಾಣ
"ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್ ಅವಾಯಿಡೆನ್ಸ್ ಕ್ಯಾಮೆರಾ (ಎಲ್‌ಎಚ್‌ಡಿಎಸಿ) ಮೂಲಕ ಈ ಚಿತ್ರಗಳನ್ನು ಸೆರೆಹಿಡಿಯಲಾಗಿದೆ.
ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್ ಅವಾಯಿಡೆನ್ಸ್ ಕ್ಯಾಮೆರಾ (ಎಲ್‌ಎಚ್‌ಡಿಎಸಿ) ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ನೆರವಾಗಲಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಸ್ಥಳದಲ್ಲಿ ಇಳಿಯಲು ಇದು ನೆರವಾಗಲಿದೆ. ಇದನ್ನು ಎಸ್‌ಎಸಿ/ಇಸ್ರೊ ಅಭಿವೃದ್ಧಿಪಡಿಸಿದೆ" ಎಂದು ಸಾಮಾಜಿಕ ಮಾಧ್ಯಮ ಟ್ವಿಟರ್ ನಲ್ಲಿ ಇಸ್ರೋ ಹೇಳಿಕೊಂಡಿದೆ.
ಈ ಚಿತ್ರಗಳನ್ನು ಶನಿವಾರ ಸೆರೆಹಿಡಿಲಾಗಿದ್ದು, ಇದರಲ್ಲಿ ಹೈನ್, ಬಾಸ್ ಎಲ್, ಮಾರ್ ಹಬ್ಲೊಲ್ಡಿಟಿನಿಯಮ್ ಮತ್ತು ಬೆಲ್‌ಕೊವಿಚ್ ಎಂಬ ಕುಳಿಗಳನ್ನು ಗುರುತಿಸಲಾಗಿದೆ. ಭೂಮಿಗೆ ಕಾಣಿಸದ ಚಂದ್ರನ ಭಾಗವು ಗೋಳಾರ್ಧವಾಗಿದೆ. ಚಂದ್ರನ ಕಕ್ಷೆಯಲ್ಲಿ ಸಿಂಕ್ರೊನಸ್ ಆಗಿ ತಿರುಗುವಿಕೆಯಿಂದಾಗಿ ಈ ಭಾಗ ಭೂಮಿಗೆ ಕಾಣಿಸುವುದೇ ಇಲ್ಲ. ಇದೀಗ ಇಸ್ರೋದ ಕ್ಯಾಮೆರಾವು ಆ ಭಾಗದ ಚಿತ್ರಗಳನ್ನು ತೆಗೆದಿದೆ.
ಇದೇ ಬುಧವಾರ ಚಂದ್ರಯಾನ 3 ಲ್ಯಾಂಡರ್ ಚಂದ್ರನ ದಕ್ಷಿನ ಧ್ರುವದ ಭಾಗದಲ್ಲಿ ಇಳಿಯಲಿದೆ. ಇದು ಯಶಸ್ವಿಯಾದರೆ ಚಂದ್ರನ ಮೇಲೆ ಲ್ಯಾಂಡರ್ ಇಳಿಸಿದ ಜಗತ್ತಿನ ನಾಲ್ಕನೇ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಈ ಕೀರ್ತಿಗೆ ಪಾತ್ರವಾಗಿವೆ.
ಬುಧವಾರ ಸಂಜೆ 6 ಗಂಟೆ 4 ನಿಮಿಷಕ್ಕೆ ಇಸ್ರೋ ಚಂದ್ರಯಾನ-3 ನೌಕೆಯ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯಲು ಸಜ್ಜಾಗಿದೆ. ಭಾರತದ ಈ ಸಾಧನೆಯತ್ತ ಇಡೀ ವಿಶ್ವವೇ ಕಾತುರದಿಂದ ಎದಿರು ನೋಡುತ್ತಿದ್ದು, ಭಾರತೀಯರು ಈ ಸಾಧನೆ ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಈ ಹಿಂದಿನ ಚಂದ್ರಯಾನ ಯೋಜನೆಯಲ್ಲಿ ಕೊನೆಕ್ಷಣದಲ್ಲಿ ಲ್ಯಾಂಡರ್ ಇಳಿಯುವ ಸಮಯದಲ್ಲಿ ವಿಫಲವಾಗಿತ್ತು. ಈ ಬಾರಿ ಭಾರತದ ಚಂದ್ರಯಾನ 3 ಯಶಸ್ವಿಯಾಗಲೆಂದು ಜನರು ಕಾಯುತ್ತಿದ್ದಾರೆ.