ಚೆನ್ನೈನಲ್ಲಿ ಇನ್ನು ಎರಡು ದಿನ ಭಾರೀ ಮಳೆ..! ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌

ಭಾರೀ ಮಳೆಗೆ ಬೆಚ್ಚಿರುವ ಚೆನ್ನೈಗೆ ಮತ್ತೆ ವರುಣಾಘಾತ ಅಪ್ಪಳಿಸಲಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಗುರುವಾರ ರಾತ್ರಿವರೆಗೂ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಚೆನ್ನೈನಲ್ಲಿ ಇನ್ನು ಎರಡು ದಿನ ಭಾರೀ ಮಳೆ..! ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌
Linkup
ಚೆನ್ನೈ: ಭಾರೀ ಮಳೆಗೆ ಬೆಚ್ಚಿರುವ ಚೆನ್ನೈಗೆ ಮತ್ತೆ ವರುಣಾಘಾತ ಅಪ್ಪಳಿಸಲಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ನವೆಂಬರ್ 18ಕ್ಕೆ , ಕಾಂಚೀಪುರಂ, ತಿರುವಳ್ಳೂರು ಮತ್ತು ರಾಣಿಪೇಟ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ಬುಧವಾರ, ಗುರುವಾರ, ಶುಕ್ರವಾರ ಹಾಗೂ ಶನಿವಾರದಂದು ತಮಿಳುನಾಡಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದರಲ್ಲೂ ಗುರುವಾರ ರಾತ್ರಿಯವರೆಗೂ ಚೆನ್ನೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತೊಮ್ಮೆ ಪ್ರವಾಹದ ಭೀತಿಯನ್ನು ಮದ್ರಾಸ್‌ ಜನರು ಎದುರಿಸುತ್ತಿದ್ದಾರೆ. ಚೆನ್ನೈನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಸೆಲ್ಸಿಯಸ್ ಮತ್ತು 25 ಸೆಲ್ಸಿಯಸ್ ಆಗಿರಬಹುದು. ಈಗಾಗಲೇ ಚೆನ್ನೈ ಸೇರಿ ಸುತ್ತಲಿನ ಜಿಲ್ಲೆಗಳಲ್ಲಿ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಚೆನ್ನೈ, ತಿರುವಳ್ಳೂರ್ ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರಾಣಿಪೇಟ್, ಚೆಂಗಲ್ಪಟ್ಟು, ಸೇಲಂ, ಅರಿಯಲೂರು, ಪೆರಂಬಲೂರು, ಡೆಲ್ಟಾ ಹಾಗೂ ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು, ಗುರುವಾರ ತಿರುವಳ್ಳೂರು, ಚೆನ್ನೈ, ರಾಣಿಪೇಟ್ ಮತ್ತು ಕಾಂಚೀಪುರಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಿಂದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚೆಂಗಲ್ಪಟ್ಟು ಮತ್ತು ತಿರುವಣ್ಣಾಮಲೈ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೇಲಂ, ಧರ್ಮಪುರಿ, ಕೃಷ್ಣಗಿರಿ, ಈರೋಡ್, ಕಲ್ಲಕುರಿಚಿ, ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ವರ್ಷಧಾರೆ ಸುರಿಯುವ ಸಾಧ್ಯತೆಯಿದೆ. ಕಾರೈಕಲ್ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಶುಕ್ರವಾರ ಅರಿಯಲೂರ್, ಪೆರಂಬಲೂರ್, ತಿರುಚಿರಾಪಳ್ಳಿ, ಸೇಲಂ, ವಿಲ್ಲುಪುರಂ, ಕಡಲೂರು, ಕಲ್ಲಕುರಿಚಿ, ಡೆಲ್ಟಾ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಶನಿವಾರ ತಿರುವಣ್ಣಾಮಲೈ, ವೆಲ್ಲೂರು, ರಾಣಿಪೇಟ್, ಧರ್ಮಪುರಿ, ಕೃಷ್ಣಗಿರಿ, ಸೇಲಂ ಮತ್ತು ಕಲ್ಲಕುರಿಚಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕರ್ನಾಟಕದಲ್ಲೂ ಅಬ್ಬರಇನ್ನು, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಅಬ್ಬರ ಮುಂದುವರಿಯಲಿದೆ. ಬುಧವಾರದಿಂದ ಶನಿವಾರದವರೆಗೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತದ ಪ್ರಭಾವದಿಂದ ತಮಿಳುನಾಡು, ಕೇರಳ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕ, ಆಂಧ್ರಪ್ರದೇಶ ಮತ್ತು ದಕ್ಷಿಣ ಗೋವಾ ಸೇರಿ ದಕ್ಷಿಣ ಭಾರತದಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಲಘುವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.