ಜಾತ್ಯತೀತತೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ: ಕಾಂಗ್ರೆಸ್‌ಗೆ ಕ್ಯಾ.ಸಿಂಗ್ ತಾಕೀತು!

ಕಾಂಗ್ರೆಸ್ ಪಕ್ಷ ತನ್ನ ಹುಸಿ ಜಾತ್ಯತೀತಯ ಪ್ರದರ್ಶನವನ್ನು ನಿಲ್ಲಿಸಬೇಕು ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಾಕೀತು ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಯಾವ ಆಧಾರದ ಮೇಲೆ ತನ್ನನ್ನು ತಾನು ಜಾತ್ಯತೀತ ಪಕ್ಷ ಎಂದು ಕರೆದುಕೊಳ್ಳುತ್ತದೆ ಎಂದು ಕ್ಯಾ.ಸಿಂಗ್ ಪ್ರಶ್ನಿಸಿದ್ದಾರೆ.

ಜಾತ್ಯತೀತತೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ: ಕಾಂಗ್ರೆಸ್‌ಗೆ ಕ್ಯಾ.ಸಿಂಗ್ ತಾಕೀತು!
Linkup
ಹೊಸದಿಲ್ಲಿ: ಪಕ್ಷ ತನ್ನ ಹುಸಿ ಜಾತ್ಯತೀತಯ ಪ್ರದರ್ಶನವನ್ನು ನಿಲ್ಲಿಸಬೇಕು ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಾಕೀತು ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಅಧಿಕಾರಕ್ಕಾಗಿ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ, ತನ್ನ ಹುಸಿ ಜಾತ್ಯತೀತತೆಯ ಪ್ರದರ್ಶನವನ್ನು ನಿಲ್ಲಿಸಬೇಕು. ಹಲವು ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವ ಕಾಂಗ್ರೆಸ್, ಯಾವ ಆಧಾರದಲ್ಲಿ ತಾನು ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಕ್ಯಾ.ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಪಂಜಾಬ್ ಕಾಂಗ್ರೆಸ್ ಘಟಕದ ಪ್ರಸ್ತುತ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಕೂಡ ಬಿಜೆಪಿಯಲ್ಲೇ ಇದ್ದವರು. ಆರ್‌ಎಸ್‌ಎಸ್‌ ಮತ್ತು ಬಿಜೆಪಿಯಿಂದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಯಾವ ಆಧಾರದಲ್ಲಿ ತನ್ನನ್ನು ತಾನು ಜಾತ್ಯತೀತ ಪಕ್ಷ ಎಂದು ಹೇಳಿಕೊಳ್ಳುತ್ತದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಕ್ಯಾ.ಸಿಂಗ್ ಕಿಡಿಕಾರಿದ್ದಾರೆ. ನವಜೋತ್ ಸಿಂಗ್ ಸಿಧು 14 ವರ್ಷ ಬಿಜೆಪಿಯಲ್ಲಿದ್ದವರು. ಮಹಾರಾಷ್ಟ್ರದ ನಾನಾ ಪಟೋಲೆ, ರೇವಂತ್ ರೆಡ್ಡಿ ಅವರು ಈ ಮೊದಲು ಆರ್‌ಎಸ್‌ಎಸ್‌ನಲ್ಲಿ ಸಕ್ರಿಯರಾಗಿದ್ದವರು. ಈ ನಾಯಕರನ್ನು ಕಾಂಗ್ರೆಸ್ ಏಕೆ ಪಕ್ಷಕ್ಕೆ ಬರಮಾಡಿಕೊಂಡಿತು ಎಂಬುದನ್ನು ಮೊದಲು ವಿವರಿಸಲಿ ಎಂದು ಕ್ಯಾ. ಸಿಂಗ್ ಪ್ರಶ್ನಿಸಿದ್ದಾರೆ. ನಾನು ನಾಲ್ಕುವರೆ ವರ್ಷಗಳ ಕಾಲ ಅಕಾಲಿ ದಳಕ್ಕೆ ಪರೋಕ್ಷವಾಗಿ ಸಹಾಯ ಮಾಡಿದ್ದೇನೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಆಪಾದಿಸಿದ್ದಾರೆ. ಆದರೆ ಅವರ ವಿರುದ್ಧ ನಿರಂತರ 10 ವರ್ಷಗಳ ಕಾಲ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದೇನೆ ಎಂಬುದನ್ನೇಕೆ ಮರೆತಿದ್ದೀರಿ ಎಂದು ಕ್ಯಾ. ಸಿಂಗ್ ಖಾರವಾಗಿ ಪ್ರಶ್ನಿಸಿದ್ದಾರೆ. ಕ್ಯಾ.ಸಿಂಗ್ ತಮ್ಮೊಳಗಿನ ಜಾತ್ಯತೀತ ವ್ಯಕ್ತಿಯನ್ನು ಕೊಂದಿದ್ದಾರೆ ಎಂಬ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಅವರ ಹೇಳಿಕೆಗೆ ಪ್ರತಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ. ಕ್ಯಾ.ಸಿಂಗ್ ಅವರ ವಿಸ್ತೃತ ಹೇಳಿಕೆಯನ್ನು ಅವರು ಪಂಜಾಬ್ ಮುಖ್ಯಮಂತ್ರಿಯಾಗಿದ್ದ ವೇಳೆ ಮಾಧ್ಯಮ ಸಲಹೆಗಾರರಾಗಿ ಕೆಲಸ ನಿರ್ವಹಿಸಿದ್ದ ರವೀನ್ ಟುಕರಾಲ್ ಸರಣಿ ಟ್ವೀಟ್ ಮೂಲಕ ಬಿಡುಗಡೆ ಮಾಡಿದ್ದಾರೆ. ಸದ್ಯ ಕಾಂಗ್ರೆಸ್‌ನೊಂದಿಗೆ ಸಂಪೂರ್ಣವಾಗಿ ಸಂಬಂಧ ಕಡಿದುಕೊಂಡಿರುವ ಕ್ಯಾ. ಸಿಂಗ್, ಪಂಜಾಬ್‌ನಲ್ಲಿ ಹೊಸ ರ ಆಜಕೀಯ ಪಕ್ಷವನ್ನು ಸ್ಥಾಪಿಸುವ ಘೋಷಣೆ ಮಾಡಿದ್ದಾರೆ. ಅಲ್ಲದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲೂ ಸಿದ್ಧ ಎಂದು ಕ್ಯಾ. ಸಿಂಗ್ ಬಹಿರಂಗವಾಗಿ ಸಾರಿದ್ದಾರೆ. ಈ ಹಿನ್ನೆಲೆಯಲ್ಲಿ ಹರೀಶ್ ರಾವತ್ ಅವರು ಕ್ಯಾ. ಸಿಂಗ್ ತಮ್ಮೊಳಗಿನ ಜಾತ್ಯತೀತ ವ್ಯಕ್ತಿಯನ್ನು ಕೊಂದಿದ್ದಾರೆ ಎಂದು ಹೇಳಿದ್ದರು.