ಜಮ್ಮು-ಕಾಶ್ಮೀರದಲ್ಲಿ ಆದಷ್ಟು ಬೇಗ ಚುನಾವಣೆ: ಕಣಿವೆ ರಾಜ್ಯದ ನಾಯಕರಿಗೆ ಪ್ರಧಾನಿ ಮೋದಿ ಭರವಸೆ

'ಕಣಿವೆ ರಾಜ್ಯಕ್ಕೆ ದಿಲ್ಲಿ ದೂರ' ಎಂಬ ಭಾವನೆಯನ್ನು ಹೋಗಲಾಡಿಸಲು ಶ್ರಮಿಸುವುದಾಗಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಪ್ರಧಾನಿ ಮೋದಿ ಭರವಸೆ ನೀಡಿದರು ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಆದಷ್ಟು ಬೇಗ ಚುನಾವಣೆ: ಕಣಿವೆ ರಾಜ್ಯದ ನಾಯಕರಿಗೆ ಪ್ರಧಾನಿ ಮೋದಿ ಭರವಸೆ
Linkup
: ಜಮ್ಮು ಕಾಶ್ಮೀರದಲ್ಲಿ ಶೀಘ್ರದಲ್ಲೇ ನಡೆಸಲು ಕೇಂದ್ರ ಸರ್ಕಾರ ಒಲವು ತೋರಿದೆ. ಜಮ್ಮು ಹಾಗೂ ಕಾಶ್ಮೀರದ ಸ್ಥಿತಿಗತಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಸಾರಥ್ಯದಲ್ಲಿ ನಡೆದ ಕಣಿವೆ ರಾಜ್ಯದ ಸರ್ವ ಪಕ್ಷ ಸಭೆಯಲ್ಲಿ ಈ ನಿಲುವು ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ರದ್ದತಿ ಬಳಿಕ ನಡೆದ ಮೊದಲ ಸರ್ವ ಪಕ್ಷ ಇದಾಗಿದ್ದು, ಭಾರೀ ಕುತೂಹಲ ಕೆರಳಿಸಿತ್ತು. ಈ ಸಭೆಯಲ್ಲಿ ಕಣಿವೆ ರಾಜ್ಯದ 14 ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು. ಬರೋಬ್ಬರಿ 3 ಗಂಟೆಗಳ ಕಾಲ ನಡೆದ ಈ ಮಾತುಕತೆಯಲ್ಲಿ ಜಮ್ಮು-ಕಾಶ್ಮೀರದ ಭವಿಷ್ಯದ ರಾಜಕೀಯ ಸ್ಥಿತಿಗತಿ ಸೇರಿದಂತೆ ಹಲವು ವಿದ್ಯಮಾನಗಳ ಕುರಿತಾಗಿ ಚರ್ಚೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ರಾಜಕೀಯ ಪಕ್ಷಗಳ ನಾಯಕರು ಆದಷ್ಟು ಬೇಗ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸುವಂತೆ ಹಾಗೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿರುವುದನ್ನು ರದ್ದುಗೊಳಿಸಿ ಮತ್ತೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿದರು. ಈ ಸಭೆಯಲ್ಲಿ ಗೃಹ ಸಚವಿ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಜಮ್ಮು - ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕೂಡಾ ಭಾಗಿಯಾಗಿದ್ದರು. ಸಭೆಯಲ್ಲಿ ಮಾತನಾಡಿದ , ಕಣಿವೆ ರಾಜ್ಯದಲ್ಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮರುಸ್ಥಾಪನೆಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಅಷ್ಟೇ ಅಲ್ಲ, ಕ್ಷೇತ್ರ ಪುನರ್‌ ವಿಂಗಡಣೆ ಕಾರ್ಯ ಪೂರ್ಣಗೊಂಡ ಬೆನ್ನಲ್ಲೇ ಚುನಾವಣೆ ನಡೆಸಲು ಎಲ್ಲಾ ರೀತಿಯ ತಯಾರಿ ನಡೆಸೋದಾಗಿ ಭರವಸೆ ನೀಡಿದರು. ಕಣಿವೆ ರಾಜ್ಯಕ್ಕೆ ದಿಲ್ಲಿ ದೂರ ಎಂಬ ಭಾವನೆಯನ್ನು ಹೋಗಲಾಡಿಸಲು ಶ್ರಮಿಸುವುದಾಗಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ಪ್ರಧಾನಿ ಮೋದಿ ಭರವಸೆ ನೀಡಿದರು ಎಂದು ತಿಳಿದುಬಂದಿದೆ. ಜಮ್ಮು ಕಾಶ್ಮೀರದಲ್ಲಿ ಆಗುವ ಪ್ರತಿಯೊಂದು ಸಾವೂ ಕೂಡಾ ಅತ್ಯಂತ ನೋವು ತರುತ್ತದೆ ಎಂದ ಪ್ರಧಾನಿ ಮೋದಿ, ಕಣಿವೆ ರಾಜ್ಯದ ಯುವ ಸಮುದಾಯದ ರಕ್ಷಣೆ ನಮ್ಮ ಹೊಣೆ ಎಂದು ಹೇಳಿದರು. ಈ ವೇಳೆ, ನ್ಯಾಷನಲ್ ಕಾನ್ಫರೆನ್ಸ್‌ ನಾಯಕ ಒಮರ್ ಅಬ್ದುಲ್ಲಾ ಅವರು, ಆರ್ಟಿಕಲ್ 370 ಅನ್ನು ರದ್ದು ಮಾಡಿದ ಬಳಿಕ, ಕೇಂದ್ರ ಹಾಗೂ ರಾಜ್ಯದ ನಡುವಣ ವಿಶ್ವಾಸ ಮುರಿದುಬಿದ್ದಿದೆ ಎಂದು ಹೇಳಿದರು ಎನ್ನಲಾಗಿದೆ. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಒಮರ್ ಅಬ್ದುಲ್ಲಾ, ಆಗಸ್ಟ್‌ 2019ರಲ್ಲಿ ಆರ್ಟಿಕಲ್ 370ರ ರದ್ದತಿ ಮಾಡಿದ್ದನ್ನು ನಮ್ಮ ಪಕ್ಷ ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವೇ ಇಲ್ಲ ಎಂದರು. ಈ ಕುರಿತಾಗಿ ನ್ಯಾಯಾಂಗ ಹೋರಾಟಕ್ಕೂ ಸಿದ್ದ ಎಂದರು. ಇದೇ ವೇಳೆ ಮಾತನಾಡಿದ ಫಾರೂಖ್ ಅಬ್ದುಲ್ಲಾ, ಕಾಶ್ಮೀರಕ್ಕೆ ಮತ್ತೆ ರಾಜ್ಯದ ಸ್ಥಾನಮಾನ ನೀಡಿದರೆ, ಅದು ಬಾಂಧವ್ಯ ವೃದ್ಧಿಯ ಮೊದಲ ಹೆಜ್ಜೆ ಆಗಲಿದೆ ಎಂದು ಅಭಿಪ್ರಾಯಪಟ್ಟರು. ಇದೇ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ, ಆರ್ಟಿಕಲ್ 370ರ ರದ್ದತಿಯನ್ನು ಅಕ್ರಮ ಎಂದು ಕರೆದರು. ಅಷ್ಟೇ ಅಲ್ಲ, ಜಮ್ಮು-ಕಾಶ್ಮೀರದ ಜನರು ಇದನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದರು. ಆಗಸ್ಟ್‌ 2019ರ ಬೆಳವಣಗೆ ಬಳಿಕ ಕಣಿವೆ ರಾಜ್ಯದ ಜನರು ಸಿಟ್ಟಾಗಿದ್ದಾರೆ. ನಾವು ಸಂವಿಧಾನಾತ್ಮಕವಾಗಿ, ಶಾಂತಿಯುತವಾಗಿ ವಿಶೇಷ ಸ್ಥಾನಮಾನ ಪಡೆಯಲು ಹೋರಾಡುತ್ತೇವೆ ಎಂದು ತಿಳಿಸಿದರು.