ಡಾ.ರಾಜ್ ಪುಣ್ಯಸ್ಮರಣೆ: ವರನಟನನ್ನು ಸ್ಮರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಅಣ್ಣಾವ್ರು ಇಹಲೋಕ ತ್ಯಜಿಸಿ ಇಂದಿಗೆ 15 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಡಾ.ರಾಜ್‌ಕುಮಾರ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದ್ದಾರೆ.

ಡಾ.ರಾಜ್ ಪುಣ್ಯಸ್ಮರಣೆ: ವರನಟನನ್ನು ಸ್ಮರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Linkup
ಇಂದು ಕನ್ನಡ ಚಿತ್ರರಂಗದ ವರನಟ, ನಟ ಸಾರ್ವಭೌಮ, ಅವರ 15ನೇ ವರ್ಷದ . ಅಣ್ಣಾವ್ರು ಇಹಲೋಕ ತ್ಯಜಿಸಿ ಇಂದಿಗೆ 15 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ಡಾ.ರಾಜ್‌ಕುಮಾರ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಸ್ಮರಿಸಿದ್ದಾರೆ. ''ಅಪ್ರತಿಮ ಕಲಾವಿದ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಅವರ ಪುಣ್ಯತಿಥಿಯಂದು ಅವರಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ 'ಅಣ್ಣಾವ್ರು', ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪುಣ್ಯಸ್ಮರಣೆ ಅಂಗವಾಗಿ ಇಂದು ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರುಗಳ ಪುಣ್ಯಭೂಮಿಗೆ ಪುಷ್ಪ ನಮನ ಸಲ್ಲಿಸಲಾಗಿದೆ. ಕುಟುಂಬಸ್ಥರು ಕಂಠೀರವ ಸ್ಟುಡಿಯೋಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಡಾ.ರಾಜ್‌ಕುಮಾರ್ ಪುಣ್ಯಸ್ಮರಣೆ ಅಂಗವಾಗಿ ಅಭಿಮಾನಿಗಳು ಅನ್ನದಾನ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಬಡರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಕೊರೊನಾತಂಕದಿಂದ ಡಾ.ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮ ಸರಳವಾಗಿ ಜರುಗಲಿದೆ.