ತಂದೆಯ ಪಿಸ್ತೂಲ್‌ನಿಂದ ಶೂಟ್‌ ಮಾಡಿಕೊಂಡು ಬೆಂಗಳೂರಿನ ಬಾಲಕ ಆತ್ಮಹತ್ಯೆ: ಮಾನಸಿಕ ಒತ್ತಡ ಕಾರಣ?

ಬಾಲಕನೊಬ್ಬ ತನ್ನ ತಂದೆಯ ಪಿಸ್ತೂಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ನಿವೃತ್ತ ಹವಾಲ್ದಾರ್ ಪುತ್ರ ಆರ್ಮಿ ಸ್ಕೂಲ್‌ನ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಮೃತ ಬಾಲಕ.

ತಂದೆಯ ಪಿಸ್ತೂಲ್‌ನಿಂದ ಶೂಟ್‌ ಮಾಡಿಕೊಂಡು ಬೆಂಗಳೂರಿನ ಬಾಲಕ ಆತ್ಮಹತ್ಯೆ: ಮಾನಸಿಕ ಒತ್ತಡ ಕಾರಣ?
Linkup
ಬೆಂಗಳೂರು: ಬಾಲಕನೊಬ್ಬ ತನ್ನ ತಂದೆಯ ಪಿಸ್ತೂಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂಡಿಯನ್ ಏರ್ ಫೋರ್ಸ್ ಬಸ್ ನಿಲ್ದಾಣದ ಬಳಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ನಿವೃತ್ತ ಹವಾಲ್ದಾರ್ ಪುತ್ರ ಆರ್ಮಿ ಸ್ಕೂಲ್‌ನ ವಿದ್ಯಾರ್ಥಿ 17 ವರ್ಷದ ರಾಹುಲ್ ಭಂಡಾರಿ ಮೃತ . ಬೆಳಗಿನ ಜಾವ 5:45ರ ಸುಮಾರಿಗೆ ಘಟನೆ ನಡೆದಿರುವ ಸಾಧ್ಯತೆ ಇದೆ. ತಲೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಲೆಯ ಎಡಭಾಗಕ್ಕೆ ಗುಂಡು ಬಿದ್ದಿದ್ದು, ಬುಲೆಟ್ ಕೂಡ ಮೃತ ಬಾಲಕನ 6 ಅಡಿ ಅಂತರದಲ್ಲಿ ಬಿದ್ದಿದೆ. ತಂದೆಯ ಪಿಸ್ತೂಲ್‌ನಿಂದ ಮಗ ಸಾವು! ರಾಹುಲ್ ಭಂಡಾರಿ ತಂದೆ ನಿವೃತ್ತ ಹವಾಲ್ದಾರ್‌ ಆಗಿದ್ದು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.90ರಷ್ಟು ಅಂಕ ಗಳಿಸಿ ಉತ್ತಮ ವಿದ್ಯಾರ್ಥಿ ಎಂಬ ಹೆಗ್ಗಳಿಗೆ ಪಾತ್ರನಾಗಿದ್ದ. ಉತ್ತಮ ನಡೆತೆಯ ವಿದ್ಯಾರ್ಥಿಯಾಗಿದ್ದ. ತಂದೆಯ 3.2 ಎಂಎಂ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇವತ್ತಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇತ್ತು. ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ, ರಾತ್ರಿ ಹೊತ್ತು ವಾಕಿಂಗ್ ಮಾಡುತ್ತಿದ್ದ. ಬೆಳಗ್ಗೆ 4 ಗಂಟೆಗೆ ಮನೆಯಿಂದ ವಾಕಿಂಗ್ ಬಂದಿದ್ದ. ಪ್ರತಿನಿತ್ಯ ವಾಕಿಂಗ್ ಮಾಡುತ್ತಿರಲಿಲ್ಲ. ಪರೀಕ್ಷೆಗೆ ಓದುತ್ತಿದ್ದ ಸಮಯದಲ್ಲಿ ವಿಶ್ರಾಂತಿಗಾಗಿ ವಾಕಿಂಗ್‍ಗೆ ಬರುತ್ತಿದ್ದ. ಬೆಳಗ್ಗೆ 6 ಗಂಟೆಯಿಂದ ಕರೆ ಮಾಡಿದರೂ ಸ್ವೀಕರಿಸಿಲ್ಲ. ಈ ವೇಳೆ ಅನುಮಾನ ಬಂದು ಪೊಲೀಸರಿಗೆ ದೂರು ನೀಡಿದೆವು. ಆ ಬಳಿಕ ಮಗ ಸತ್ತಿರುವು ಸುದ್ದಿ ತಿಳಿದುಬಂದಿದೆ ಎಂದು ತಾಯಿ ಅಳುತ್ತಲೇ ಹೇಳಿದ್ದಾರೆ. ಮಾನಸಿಕ ಒತ್ತಡದಿಂದ ಆತ್ಮಹತ್ಯೆ? ಪರೀಕ್ಷೆ ಹಿನ್ನೆಲೆ ಓದುತ್ತ ತಯಾರಿ ನಡೆಸುತ್ತಿದ್ದ. ರಾತ್ರಿ ಊಟ ಮುಗಿಸಿ ಮನೆಯಲ್ಲೇ ಮಲಗಿದ್ದ ರಾಹುಲ್, ತಂದೆ, ತಾಯಿ ಮಲಗಿರುವಾಗ ನಾಲ್ಕು ಗಂಟೆಗೆ ಮನೆಯಿಂದ ಎದ್ದು ಹೊರಬಂದಿದ್ದಾನೆ. ಮಾನಸಿಕ ಒತ್ತಡದಲ್ಲಿದ್ದ ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರತಿದಿನ ಬೆಳಗಿನ ಜಾವ ಮೂರು ಗಂಟೆಗೆ ಎದ್ದು ಓದಿಕೊಳ್ಳುತ್ತಿದ್ದ. ಮಾನಸಿಕ ಒತ್ತಡ ಹೆಚ್ಚಾದಾಗ ಎದ್ದು ವಾಕ್ ಬರುತ್ತಿದ್ದ. ಅದೇ ರೀತಿ ಇಂದು ಬೆಳಗಿನ ಜಾವ ಕೂಡ ಮನೆಯಿಂದ ಎದ್ದು ಹೊರಬಂದಿದ್ದಾನೆ. ನಾಲ್ಕು ಗಂಟೆಗೆ ಮನೆಯಿಂದ ತೆರಳಿದ್ದು, ವಾಕ್ ಮಾಡುತ್ತಾ ಬಂದಿದ್ದಾನೆ. ಪರೀಕ್ಷೆ ಹಿನ್ನೆಲೆ ಒತ್ತಡ ಅನುಭವಿಸುತಿರುವ ಸಾಧ್ಯತೆ ಇದೆ. ಇನ್ನು ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಧಿ ವಿಜ್ಞಾನ ಅಧಿಕಾರಿಗಳು ಮತ್ತು ಡಾಗ್ ಸ್ಕ್ವಾಡ್ ಸ್ಥಳಕ್ಕೆ ಕರೆಸುವ ಸಿದ್ಧತೆ ನಡೆದಿದೆ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಸಹ ಆಗಮಿಸಿದ್ದಾರೆ. ಬಳಿಕ ಮಾತನಾಡಿದ ಅನುಚೇತ್‌, ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು ಎಂದು ತಿಳಿಸಿದ್ದಾರೆ. ಆದರೆ ನಾವು ಈ ಕುರಿತು ಪ್ರಾಥಮಿಕ ತನಿಖೆ ನಂತರವೇ ಮಾಡದೇ ಏನನ್ನು ಹೇಳಲಾಗುತ್ತಿಲ್ಲ. ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದಾಗ ಒಂದು ಸಿಂಗಲ್ ಬುಲೆಟ್ ತಲೆಯ ಬಲಭಾಗದಿಂದ ನುಗಿ ಎಡಭಾಗದಿಂದ ಬಿದ್ದಿದೆ ಎಂದು ತಿಳಿಸಿದ್ದಾರೆ.