ದಿಲ್ಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಲಘು ಸ್ಫೋಟ: ಭಾರಿ ಆತಂಕ

ದಿಲ್ಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಲಘು ಪ್ರಮಾಣದ ಸ್ಫೋಟ ಸಂಭವಿಸಿದೆ. ಆರಂಭದಲ್ಲಿ ಲ್ಯಾಪ್‌ಟಾಪ್ ಸ್ಫೋಟ ಉಂಟಾಗಿದೆ ಎಂದು ಹೇಳಲಾಗಿತ್ತು. ಆದರೆ ಲಘು ಪ್ರಮಾಣದ ಸುಧಾರಿತ ಸ್ಫೋಟಕ ಸಾಧನ ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿಲ್ಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಲಘು ಸ್ಫೋಟ: ಭಾರಿ ಆತಂಕ
Linkup
ಹೊಸದಿಲ್ಲಿ: ರಾಜಧಾನಿ ದಿಲ್ಲಿಯ ರೋಹಿಣಿ ಕೋರ್ಟ್‌ನಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಕೋರ್ಟ್ ಆವರಣದಲ್ಲಿ ಗುರುವಾರ ಬೆಳಿಗ್ಗೆ ನಿಗೂಢ ರೀತಿ ಲಘು ಸಂಭವಿಸಿದ್ದು, ಅಲ್ಲಿ ನೆರೆದಿದ್ದ ಜನರು, ವಕೀಲರು, ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಒಂದರಿಂದ ಈ ಸ್ಫೋಟ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ. ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಲ್ಯಾಪ್‌ಟಾಪ್‌ನಲ್ಲಿ ಸ್ಫೋಟದ ಸದ್ದು ಕೇಳಿಸಿರಬಹುದು ಎಂದು ಊಹಿಸಲಾಗಿದೆ. ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಲಘು ತೀವ್ರತೆಯ ಬಾಂಬ್ ಸ್ಫೋಟ ಘಟನೆಗೆ ಕಾರಣ ಎಂದೂ ಹೇಳಲಾಗುತ್ತಿದೆ. ಸುಧಾರಿತ ಸ್ಫೋಟಕ ಸಾಧನವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸ್ಫೋಟದ ಸದ್ದು ಕೇಳಿಸುತ್ತಿದ್ದಂತೆ ಆವರಣದಲ್ಲಿದ್ದ ಎಲ್ಲ ವಕೀಲರೂ ಕೋರ್ಟ್ ಕೊಠಡಿಯಿಂದ ಹೊರಗೆ ಓಡಿದರು. ಸ್ಫೋಟ ಕೇಳಿಬಂದ ಕೊಠಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ಕನಿಷ್ಠ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಬೆಳಿಗ್ಗೆ 10.40ರ ವೇಳೆಗೆ ಸ್ಫೋಟದ ಕುರಿತು ತಮಗೆ ಮಾಹಿತಿ ಬಂದಿತ್ತು ಎಂದು ಸಿಬ್ಬಂದಿ ತಿಳಿಸಿದ್ದಾರೆ. ಸ್ಫೋಟದ ಕಾರಣ ನ್ಯಾಯಾಲಯದ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ. ಪೊಲೀಸರು ತನಿಖೆ ಪೂರ್ಣಗೊಳಿಸಿ ಅಂತಿಮ ನಿರ್ಧಾರಕ್ಕೆ ಬರುವವರೆಗೂ ಕಲಾಪ ನಡೆಯುವುದಿಲ್ಲ ಎನ್ನಲಾಗಿದೆ. ' ಸಂಕೀರ್ಣದ ಆವರಣದಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಲ್ಯಾಪ್‌ಟಾಪ್ ಬ್ಯಾಗ್ ಒಂದರಲ್ಲಿ ಲಘು ತೀವ್ರತೆಯ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ನಿರ್ಬಂಧ ವಿಧಿಸಲಾಗಿದೆ. ವಿಧಿ ವಿಜ್ಞಾನ ಮತ್ತು ಎನ್‌ಎಸ್‌ಜಿ ತಂಡಗಳು ಪರಿಶೀಲನೆ ನಡೆಸುತ್ತಿವೆ' ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್‌ನಲ್ಲಿ ದಿಲ್ಲಿಯ ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಜಿತೇಂದ್ರ ಗೋಗಿ ಮತ್ತು ಇತರೆ ಮೂವರನ್ನು ರೋಹಿಣಿ ಕೋರ್ಟ್ ಆವರಣದಲ್ಲಿಯೇ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಜಿತೇಂದ್ರನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಕರೆತರುವಾಗ ಈ ಘಟನೆ ನಡೆದಿತ್ತು. ವಕೀಲರ ದಿರಿಸಿನಲ್ಲಿ ಬಂದಿದ್ದ ಎದುರಾಳಿ ಗ್ಯಾಂಗ್ ಸದಸ್ಯರು, ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪೊಲೀಸರು ಪ್ರತಿದಾಳಿ ನಡೆಸಿ, ಇಬ್ಬರು ದಾಳಿಕೋರರನ್ನು ಕೊಂದು ಹಾಕಿದ್ದರು.