ದೇಶದ ಪ್ರಮುಖ ನಗರಗಳಲ್ಲಿ ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ವಿವರವಾದ ಮಾಹಿತಿ

Gold Price in Bangalore: ದೇಶದ ಚಿನ್ನದ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆದಿದೆ. ಆಯಾಯ ರಾಜ್ಯಗಳಲ್ಲಿ ಅಲ್ಲಿನ ಬೇಡಿಕೆಗೆ ತಕ್ಕಂತೆ ಹಳದಿಲೋಹದ ಬೆಲೆಯಲ್ಲಿ ವ್ಯತ್ಯಾಸವಿದೆ. ದೇಶದ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ.

ದೇಶದ ಪ್ರಮುಖ ನಗರಗಳಲ್ಲಿ ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ವಿವರವಾದ ಮಾಹಿತಿ
Linkup
ಬೆಂಗಳೂರು: ಕಳೆದ ಕೆಲ ವಾರಗಳಿಂದ ಹಂತಹಂತವಾಗಿ ಏರಿಕೆ ಕಾಣುತ್ತಲೇ ಬಂದಿದ್ದ ಚಿನ್ನದ ದರ, ಆಭರಣಪ್ರಿಯರಿಗೆ ನಿರಂತರವಾಗಿ ನಿರಾಸೆ ಮೂಡಿಸಿತ್ತು. ಈ ವಾರಂತ್ಯದಲ್ಲಿ ಆಭರಣ ಪ್ರಿಯರು ಬೆಲೆ ಇಳಿಕೆಯ ನಿರೀಕ್ಷೆಯಲ್ಲಿದ್ದಾರೆ. ಆದರೆ ಇಂದು ಭಾನುವಾರ ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್‌) ಬಂಗಾರದ ಬೆಲೆ ₹4,700 ದಾಖಲಾಗಿದೆ. ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು (ಭಾನುವಾರ) ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ ₹45,600 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ ₹49,750 ರೂಪಾಯಿ ದಾಖಲಾಗಿದೆ. ಬೆಳ್ಳಿ ದರ: ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆಜಿಗೆ ₹71,200 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹71,200 ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿ ₹75,700 ರೂ ನಿಗದಿಯಾಗಿದೆ. ಪ್ರಮುಖ ನಗರಗಳಲ್ಲಿ ಇಂದು 10 ಗ್ರಾಂ ಹೀಗಿದೆ:ಬೆಂಗಳೂರು: ₹45,600 (22 ಕ್ಯಾರಟ್‌) ₹49,750 (24 ಕ್ಯಾರಟ್‌) ಚೆನ್ನೈ: ₹45,910 (22 ಕ್ಯಾರಟ್‌) ₹50,060 (24 ಕ್ಯಾರಟ್‌) ದಿಲ್ಲಿ: ₹46,930 (22 ಕ್ಯಾರಟ್‌), ₹50,830 (24 ಕ್ಯಾರಟ್‌) ಹೈದರಾಬಾದ್‌: ₹45,600 (22 ಕ್ಯಾರಟ್‌) ₹49,750 (24 ಕ್ಯಾರಟ್‌) ಕೋಲ್ಕತಾ: ₹48,030 (22 ಕ್ಯಾರಟ್‌), ₹50,800 (24 ಕ್ಯಾರಟ್‌) ಮಂಗಳೂರು: ₹45,600 (22 ಕ್ಯಾರಟ್‌) ₹49,750 (24 ಕ್ಯಾರಟ್‌) ಮುಂಬಯಿ: ₹46,000(22 ಕ್ಯಾರಟ್‌), ₹47,000 (24 ಕ್ಯಾರಟ್‌) ಮೈಸೂರು: ₹45,600 (22 ಕ್ಯಾರಟ್‌) ₹49,750 (24 ಕ್ಯಾರಟ್‌) ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಇಂದು ಬೆಳಗ್ಗಿನ ವೇಳೆಗೆ ಹಳದಿ ಲೋಹದ ಬೆಲೆಯಲ್ಲಿ ತಟಸ್ಥತೆ ಕಂಡು ಬಂದಿದ್ದರೆ, ಬೆಳ್ಳಿ ಬೆಲೆಯಲ್ಲೂ ಕೆಲವೆಡೆ ಏರಿಕೆಯಾಗಿ ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.