ನಿಖಿಲ್‌ನನ್ನು ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ಕುಮಾರಸ್ವಾಮಿ ರಾಜಕೀಯ ಮಾಡ್ತಿದ್ದಾರೆ; ಸಿದ್ದರಾಮಯ್ಯ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯನ್ನು ಸುಮಲತಾ ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಭಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ? ಎಂದು ಪ್ರಶ್ನಿಸಿದರು.

ನಿಖಿಲ್‌ನನ್ನು ಸೋಲಿಸಿದ್ದಕ್ಕೆ ಸುಮಲತಾ ವಿರುದ್ಧ ಕುಮಾರಸ್ವಾಮಿ ರಾಜಕೀಯ ಮಾಡ್ತಿದ್ದಾರೆ; ಸಿದ್ದರಾಮಯ್ಯ
Linkup
ಹುಬ್ಬಳ್ಳಿ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯನ್ನು ಸೋಲಿಸಿದ್ದಕ್ಕೆ ಮಾಜಿ ಮುಖ್ಯಮಂತ್ರಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಸಂಸದೆ ಸುಮಲತಾ ಅವರು ಕೆಆರ್‌ಎಸ್‌ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸರ್ಕಾರವಾಗಲಿ, ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು. ಕೆಆರ್ಎಸ್ ಡ್ಯಾಂನ 20 ಕೀಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ. ಜೆಡಿಎಸ್‌ ನಾಯಕರ ಗಣಿ ಕಂಪನಿಗಳಿವೆ ಎಂದು ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷವೂ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಭಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ? ಎಂದು ಪ್ರಶ್ನಿಸಿದರು. ಇದೇ ವೇಳೆ ಜಾತಿ ಸಮೀಕ್ಷೆಯ ಬಗ್ಗೆಯೂ ಮಾತನಾಡಿದ ಅವರು, ಜಾತಿ ಸಮೀಕ್ಷೆ ನಡೆದು ಎರಡೂವರೆ ವರ್ಷಗಳಾಗಿವೆ. ಅದರ ವರದಿ ಸಲ್ಲಿಕೆಯಾಗಿದ್ದು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ. ಹೀಗಾಗಿ ಆ ಬಗ್ಗೆ ಸದನದಲ್ಲಿ ಚರ್ಚೆ ಮಾಡ್ತಿಲ್ಲ ಎಂದು ಕಿಡಿಕಾರಿದರು.