ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಸಿಂಗ್ 

ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಲಖನೌ: ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಸಂಬಂಧ ಭಾನುವಾರ ವಿಡಿಯೋ ಸಂದೇಶ ನೀಡಿರುವ ಸಿಂಗ್,  ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುತ್ತೇನೆ. ವಿಷಯ ದೆಹಲಿ ಪೊಲೀಸರ ಬಳಿ ಇದೆ ಆದ್ದರಿಂದ ಈ ವಿಷಯದ ಬಗ್ಗೆ ಹೆಚ್ಚು ವಿವರವಾಗಿ ಮಾತನಾಡಲು ಸಾಧ್ಯವಿಲ್ಲ. ತನ್ನ ವಿರುದ್ಧ ಯಾವುದಾದದರೂ ವಿಡಿಯೋ ಸಾಕ್ಷ್ಯ ಇದ್ದಲ್ಲಿ ಬಿಡುಗಡೆ ಮಾಡಲಿ ಎಂದು ಕುಸ್ತಿಪಟುಗಳಿಗೆ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ.  ಇದನ್ನೂ ಓದಿ: ದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆ ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಹೊರತುಪಡಿಸಿದರೆ ನಾನು ತಪ್ಪು ಮಾಡಿದ್ದೀನಿ ಅಂತಾ ಬೇರೆ ಯಾರನ್ನಾದರೂ ಕೇಳಿ, ಕುಸ್ತಿಪಟುಗಳು ಹಾಗೂ ದೇಶಕ್ಕಾಗಿ 11 ವರ್ಷ ನನ್ನ ಜೀವನವನ್ನು ತ್ಯಾಗ ಮಾಡಿದ್ದೇನೆ ಎಂದು ಭೂಷಣ್ ತಿಳಿಸಿದ್ದಾರೆ.  ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿ ವರದಿ ಬಿಡುಗಡೆ ಮಾಡಲು ಸರ್ಕಾರದಿಂದ ವಿಳಂಬವಾಗಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾನಿರತ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ತೆಗೆದುಹಾಕಬೇಕೆಂದು ಬಯಸುತ್ತಿದ್ದಾರೆ. 

ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಸಿಂಗ್ 
Linkup
ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಲಖನೌ: ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಸಂಬಂಧ ಭಾನುವಾರ ವಿಡಿಯೋ ಸಂದೇಶ ನೀಡಿರುವ ಸಿಂಗ್,  ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೂ ನೇಣು ಹಾಕಿಕೊಳ್ಳುತ್ತೇನೆ. ವಿಷಯ ದೆಹಲಿ ಪೊಲೀಸರ ಬಳಿ ಇದೆ ಆದ್ದರಿಂದ ಈ ವಿಷಯದ ಬಗ್ಗೆ ಹೆಚ್ಚು ವಿವರವಾಗಿ ಮಾತನಾಡಲು ಸಾಧ್ಯವಿಲ್ಲ. ತನ್ನ ವಿರುದ್ಧ ಯಾವುದಾದದರೂ ವಿಡಿಯೋ ಸಾಕ್ಷ್ಯ ಇದ್ದಲ್ಲಿ ಬಿಡುಗಡೆ ಮಾಡಲಿ ಎಂದು ಕುಸ್ತಿಪಟುಗಳಿಗೆ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ.  ಇದನ್ನೂ ಓದಿ: ದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆ ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಹೊರತುಪಡಿಸಿದರೆ ನಾನು ತಪ್ಪು ಮಾಡಿದ್ದೀನಿ ಅಂತಾ ಬೇರೆ ಯಾರನ್ನಾದರೂ ಕೇಳಿ, ಕುಸ್ತಿಪಟುಗಳು ಹಾಗೂ ದೇಶಕ್ಕಾಗಿ 11 ವರ್ಷ ನನ್ನ ಜೀವನವನ್ನು ತ್ಯಾಗ ಮಾಡಿದ್ದೇನೆ ಎಂದು ಭೂಷಣ್ ತಿಳಿಸಿದ್ದಾರೆ.  ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿ ವರದಿ ಬಿಡುಗಡೆ ಮಾಡಲು ಸರ್ಕಾರದಿಂದ ವಿಳಂಬವಾಗಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾನಿರತ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಮುಖ್ಯಸ್ಥರನ್ನು ತೆಗೆದುಹಾಕಬೇಕೆಂದು ಬಯಸುತ್ತಿದ್ದಾರೆ.  ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್ ಭೂಷಣ್ ಸಿಂಗ್