ನ್ಯಾಯಾಂಗ ನಿಂದನೆ ಪ್ರಕರಣ: ನಟ ಚೇತನ್‌ಗೆ ಷರತ್ತುಬದ್ಧ ಜಾಮೀನು ಮಂಜೂರು

ಸಾಮಾಜಿಕ ಹೋರಾಟಗಾರ, ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಕುಮಾರ್ ಅವರಿಗೆ ಜಾಮೀನು ಲಭಿಸಿದೆ. ನಟ ಚೇತನ್ ಕುಮಾರ್ ಅವರಿಗೆ 32ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.

ನ್ಯಾಯಾಂಗ ನಿಂದನೆ ಪ್ರಕರಣ: ನಟ ಚೇತನ್‌ಗೆ ಷರತ್ತುಬದ್ಧ ಜಾಮೀನು ಮಂಜೂರು
Linkup
ಸಾಮಾಜಿಕ ಹೋರಾಟಗಾರ, ‘ಆ ದಿನಗಳು’ ಖ್ಯಾತಿಯ ನಟ ಅವರಿಗೆ ಲಭಿಸಿದೆ. ನಟ ಚೇತನ್ ಕುಮಾರ್ ಅವರಿಗೆ 32ನೇ ಎಸಿಎಂಎಂ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ. ಷರತ್ತುಬದ್ಧ ಜಾಮೀನು ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿಯೊಂದಿಗೆ ನ್ಯಾಯಾಲಯ ನಟ ಚೇತನ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ನಟ ಚೇತನ್ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ನಟ ಚೇತನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿತ್ತು. 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಬೆನ್ನಲ್ಲೇ, ನಟ ಚೇತನ್ ಕುಮಾರ್ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದರು. ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನಟ ಚೇತನ್‌ಗೆ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ನಿಂದನೆ ಆರೋಪ ಈ ಹಿಂದೆ ನಡೆದ ಅತ್ಯಾಚಾರ ಪ್ರಕರಣ ಹಾಗೂ ಈಗಿನ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಾಮೂರ್ತಿಗಳ ಕುರಿತು ನಟ ಚೇತನ್ ಫೆಬ್ರವರಿ 16 ರಂದು ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದರು. ಹೀಗಾಗಿ, ಚೇತನ್ ಕುಮಾರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಯಿತು. ನ್ಯಾಯಮೂರ್ತಿಗಳಿಗೆ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಶೇಷಾದ್ರಿಪುರಂ ಪೊಲೀಸರು ಫೆಬ್ರವರಿ 22 ರಂದು ಚೇತನ್ ಕುಮಾರ್ ಅವರನ್ನು ವಶಕ್ಕೆ ಪಡೆದಿದ್ದರು. ಐಪಿಸಿ ಸೆಕ್ಷನ್ 505 (2), 504 ಅಡಿಯಲ್ಲಿ ಚೇತನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಯಿತು. ಇದೀಗ ಚೇತನ್‌ಗೆ ಜಾಮೀನು ಸಿಕ್ಕಿದೆ. ವಿವಾದಾತ್ಮಕ ಟ್ವೀಟ್‌ನಲ್ಲಿ ಏನಿದೆ? ಅತ್ಯಾಚಾರ ಪ್ರಕರಣವೊಂದರ ಕುರಿತಾಗಿ ಸುಮಾರು ಎರಡು ವರ್ಷಗಳ ಹಿಂದೆ ನಟ ಚೇತನ್ ಕುಮಾರ್ ಒಂದು ಟ್ವೀಟ್ ಮಾಡಿದ್ದರು. ಆ ಟ್ವೀಟ್‌ನಲ್ಲಿ ಅತ್ಯಾಚಾರ ಪ್ರಕರಣದ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳು ನೀಡಿದ್ದಾರೆ ಎನ್ನಲಾದ ಹೇಳಿಕೆಯ ಕುರಿತಾಗಿ ಚೇತನ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಅದೇ ಟ್ವೀಟ್‌ಅನ್ನು ಉಲ್ಲೇಖಿಸಿ ಫೆಬ್ರವರಿ 16 ರಂದು ಚೇತನ್ ಮತ್ತೊಂದು ಆಕ್ಷೇಪಾರ್ಹ ಟ್ವೀಟ್ ಮಾಡಿದ್ದರು. ಇದೇ ಟ್ವೀಟ್‌ ಇದೀಗ ವಿವಾದಕ್ಕೆ ಗ್ರಾಸವಾಗಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗುವುದಕ್ಕೆ ಕಾರಣವಾಗಿದೆ. ಚೇತನ್ ಪರವಾಗಿ ದನಿಯೆತ್ತಿದ್ದ ನಟಿ ರಮ್ಯಾ ಬಂಧನಕ್ಕೊಳಗಾಗಿದ್ದ ನಟ ಚೇತನ್ ಪರವಾಗಿ ನಟಿ ರಮ್ಯಾ ದನಿಯೆತ್ತಿದ್ದರು. ‘’ನಟ ಚೇತನ್ ಮಾಡಿರುವ ಟ್ವೀಟ್‌ನಲ್ಲಿ ತಪ್ಪೇನಿದೆ’’ ಎಂದು ಪ್ರಶ್ನಿಸುವ ಮೂಲಕ ಚೇತನ್ ಕುಮಾರ್‌ಗೆ ನಟಿ ರಮ್ಯಾ ಬೆಂಬಲ ಸೂಚಿಸಿದ್ದರು. ಟ್ವೀಟ್ ಮಾಡಿದ್ದ ನಟಿ ರಮ್ಯಾ ಫೆಬ್ರವರಿ 16 ರಂದು ಚೇತನ್ ಕುಮಾರ್ ಮಾಡಿದ್ದ ಟ್ವೀಟ್‌ಅನ್ನು ಮರುಟ್ವೀಟ್ ಮಾಡಿದ್ದ ರಮ್ಯಾ, ‘’ಚೇತನ್ ಅವರನ್ನು ಪೊಲೀಸರು ಬಂಧಿಸುವಂತಹ ತಪ್ಪು ಈ ಟ್ವೀಟ್‌ನಲ್ಲಿ ಏನಿದೆ?’’ ಎಂದು ಪ್ರಶ್ನಿಸಿದ್ದರು.