ನಿರ್ಮಲಾ ಸೀತಾರಾಮನ್ ಭೇಟಿಯಾದ ಬೊಮ್ಮಾಯಿ, 11,800 ಕೋಟಿ ರೂ. ಜಿಎಸ್‌ಟಿ ಪರಿಹಾರ ಬಿಡುಗಡೆಗೆ ಮನವಿ
ನಿರ್ಮಲಾ ಸೀತಾರಾಮನ್ ಭೇಟಿಯಾದ ಬೊಮ್ಮಾಯಿ, 11,800 ಕೋಟಿ ರೂ. ಜಿಎಸ್‌ಟಿ ಪರಿಹಾರ ಬಿಡುಗಡೆಗೆ ಮನವಿ
ಜಿಎಸ್‌ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿಯೂ ಆಗಿರುವ ಬಸವರಾಜ ಬೊಮ್ಮಾಯಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ವೇಳೆ ಜಿಎಸ್‌ಟಿ ಪರಿಹಾರ ಬಾಕಿ 11,800 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯ ಗೃಹ ಸಚಿವ ಶುಕ್ರವಾರ ಭೇಟಿಯಾದರು.
ಬಸವರಾಜ ಬೊಮ್ಮಾಯಿ ಮಂಡಳಿಯ ಕರ್ನಾಟಕ ಪ್ರತಿನಿಧಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಣಕಾಸು ಸಚಿವರ ಜತೆ ಹಲವು ವಿಚಾರಗಳ ಬಗ್ಗೆ ಅವರು ಭೇಟಿ ವೇಳೆ ಮಾತುಕತೆ ನಡೆಸಿದರು.
ಭೇಟಿ ವೇಳೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವಂತೆ ಅವರಲ್ಲಿ ಬಸವರಾಜ್ ಬೊಮ್ಮಾಯಿ ಬೇಡಿಕೆ ಇಟ್ಟರು ಎಂದು ಗೊತ್ತಾಗಿದೆ. ಇದರ ಜತೆಗೆ ರಾಜ್ಯದ ಪಾಲಿನ ಬಾಕಿ 11,800 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆಯೂ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಕೇಂದ್ರ ಸರಕಾರದ ಪ್ರಾಯೋಜಿತ ಯೋಜನೆಗಳಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದರು. ಇದಕ್ಕೆ ಪ್ರತಿಯಾಗಿ ಕೇಂದ್ರ ಹಣಕಾಸು ಸಚಿವರಿಗೆ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದರು.