ನಾವು ಒಗ್ಗಟ್ಟಾಗಿದ್ದೇವೆ, ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ! ಸಿದ್ಧರಾಮಯ್ಯ ಸ್ಪಷ್ಟನೆ

ಕಾಂಗ್ರೆಸ್‌ ಪಕ್ಷದಲ್ಲಿ ನಾವು ಒಗ್ಗಟ್ಟಾಗಿದ್ದೇವೆ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದರು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಹೇಳಿದ್ದಿಷ್ಟು.

ನಾವು ಒಗ್ಗಟ್ಟಾಗಿದ್ದೇವೆ, ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ! ಸಿದ್ಧರಾಮಯ್ಯ ಸ್ಪಷ್ಟನೆ
Linkup
ಹೊಸದಿಲ್ಲಿ: ನಾವು ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ದೆಹಲಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಕರ್ನಾಟಕದಲ್ಲಿ ಎಲ್ಲರೂ ಒಗ್ಗಟ್ಟಾಗಿ ಇದ್ದುಕೆಲಸ ಮಾಡ್ತಿದ್ದಾರೆ ಎಂಬ ಮಾಹಿತಿ ಇದೆ ಎಂದರು. ಕೆಪಿಸಿಸಿ ಅಧ್ಯಕ್ಷರು, ಸಿಎಲ್‌ಪಿ ನಾಯಕರು ಎಲ್ಲರೂ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ ಎಂದಿ ಹೇಳಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಬಿಜೆಪಿ ಭಿನ್ನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಆದರೆ ವಾಸ್ತವಿಕವಾಗಿ ಭಿನ್ನಾಭಿಪ್ರಾಯ ಇಲ್ಲ ಎಂದು ಸಮರ್ಥಿಸಿಕೊಂಡರು. ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಆಂತರಿಕ ಪ್ರಜಾಪ್ರಭುತ್ವ ಇದ್ದಾಗ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಸಹಜ. ನಮ್ಮದು ಸರ್ವಾಧಿಕಾರಿ ಪಕ್ಷವಲ್ಲ. ಪಕ್ಷ ಹಾಗೂ ರಾಜ್ಯದ ಜನರ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇವೆ ಎಂದರು. ರಾಜ್ಯ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು ಅಧಿಕಾರಕ್ಕೆ ಬರಬೇಕು. ಸಂವಿಧಾನಕ್ಕೆ ನಿಷ್ಠೆ ಇಟ್ಟುಕೊಂಡು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ತ್ಯುಚ್ಛವಾಗಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಇದನ್ನು ತಪ್ಪು ಎಂದಿದ್ದಾರೆ. ನಮ್ಮ ಹೋರಾಟ ಸರಿಯಾಗಿದೆ ಎಂದು ಹೇಳಿದ್ದಾರೆ ಎಂದರು. ರಾಷ್ಟ್ರ ಧ್ವಜಕ್ಕೆ ಯಾರೇ ಅವಮಾನ ಮಾಡಿದರೂ ಯಾವುದೇ ಕ್ರಮ ಆಗಿಲ್ಲ. . ಕಾನೂನು ಪ್ರಕಾರ 3 ವರ್ಷ ಜೈಲು ಹಾಗೂ ದಂಡಕ್ಕೆ ಅವಕಾಶ ಇದೆ ಎಂದು ಇದೇ ಸಂದರ್ಭದಲ್ಲಿ ಈಶ್ವರಪ್ಪ ವಿರುದ್ಧ ಕಿಡಿಕಾರಿದರು. ಇಷ್ಟಾದರೂ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರು ಈಶ್ವರಪ್ಪ ಅವರನ್ನು ಸಮರ್ಥನೆ ಮಾಡುತ್ತಾರೆ ಎಂದು ಕಿಡಿಕಾರಿದರು. ಶಿವಮೊಗ್ಗದಲ್ಲಿ ಹರ್ಷ ಕೊಲೆ ಸಂದರ್ಭದಲ್ಲಿ 144 ಸೆಕ್ಷನ್ ಇದ್ದರೂ ಅದನ್ನು ಉಲ್ಲಂಘನೆ ಮಾಡಿ ಮೆರವಣಿಗೆ ನಡೆಸಿದ್ದಾರೆ. ಅದರ ನೇತೃತ್ವವನ್ನು ಈಶ್ವರಪ್ಪ ಅವರು ವಹಿಸಿದ್ದರು. ಶಿವಮೊಗ್ಗದಲ್ಲಿ ಅವರದ್ದೇ ಸರ್ಕಾರ 144 ಹಾಕಿದ್ದು ಆದರೆ ಆ ಸರ್ಕಾರದ ಸಚಿವರೇ ಅದನ್ನು ಉಲ್ಲಂಘನೆ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ಈ ಕಾರಣದಿಂದ ಈಶ್ವರಪ್ಪ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟದ್ದೇವೆ ಎಂದರು.