ನಿಶ್ಚಿತಾರ್ಥ ಮಾಡಿಕೊಂಡ 'ರಾಷ್ಟ್ರ ಪ್ರಶಸ್ತಿ' ಪುರಸ್ಕೃತ ನಿರ್ದೇಶಕ ಮಂಸೋರೆ; ಮದುವೆ ಯಾವಾಗ?

ಕನ್ನಡದಲ್ಲಿ ಹರಿವು, ನಾತಿಚರಾಮಿ ಮತ್ತು ಆಕ್ಟ್-1978 ಚಿತ್ರಗಳನ್ನು ನಿರ್ದೇಶಿಸಿ ಗಮನಸೆಳೆದಿರುವ 'ರಾಷ್ಟ್ರ ಪ್ರಶಸ್ತಿ ಪುರಸ್ಕೃತ' ನಿರ್ದೇಶಕ ಮಂಸೋರೆ ಅವರು ಭಾನುವಾರ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಕುರಿತು ಇಲ್ಲಿದೆ ಮಾಹಿತಿ.

ನಿಶ್ಚಿತಾರ್ಥ ಮಾಡಿಕೊಂಡ 'ರಾಷ್ಟ್ರ ಪ್ರಶಸ್ತಿ' ಪುರಸ್ಕೃತ ನಿರ್ದೇಶಕ ಮಂಸೋರೆ; ಮದುವೆ ಯಾವಾಗ?
Linkup
ಹರಿವು, ನಾತಿಚರಾಮಿ ಮತ್ತು ಆಕ್ಟ್-1978 ಚಿತ್ರಗಳ ಖ್ಯಾತಿಯ 'ರಾಷ್ಟ್ರಪ್ರಶಸ್ತಿ ಪುರಸ್ಕೃತ' ನಿರ್ದೇಶಕ ಅವರು ಅಖಿಲಾ ಅವರೊಂದಿಗೆ ಇಂದು (ಜುಲೈ 4) ಬೆಂಗಳೂರಿನಲ್ಲಿ ಮಾಡಿಕೊಂಡಿದ್ದು, ಉಂಗುರ ಬದಲಾಯಿಸಿಕೊಂಡಿದ್ದಾರೆ. ಪ್ತಸ್ತುತ ಕೋವಿಡ್ ಕಾರಣದಿಂದಾಗಿ ಈ ಸಮಾರಂಭಕ್ಕೆ ಹೆಚ್ಚು ಜನರನ್ನು ಆಹ್ವಾನಿಸದೇ, ಕೇವಲ ಕುಟುಂಬದವರು ಹಾಗೂ ಕೆಲವು ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದೆ. ವಿಶೇಷವೆಂದರೆ, ಮಂಸೋರೆ ಮತ್ತು ಅಖಿಲಾ ಅವರ ವಿವಾಹವು ಆಗಸ್ಟ್ 15ರಂದು ನಡೆಯಲಿದೆ. 2014ರಲ್ಲಿ ಮಂಸೋರೆ ಅವರು ಮೊದಲು ನಿರ್ದೇಶಿಸಿದ 'ಹರಿವು' ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರ ಪ್ರಶಸ್ತಿ ಬಂದಿತ್ತು. 'ಹರಿವು' ಚಿತ್ರದಲ್ಲಿ ಸಂಚಾರಿ ವಿಜಯ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ಮಂಸೋರೆ ನಿರ್ದೇಶನದ ಎರಡನೇ ಸಿನಿಮಾ 'ನಾತಿಚರಾಮಿ' 2018ರಲ್ಲಿ ಬಿಡುಗಡೆಯಾಗಿತ್ತು. ಶ್ರುತಿ ಹರಿಹರನ್ ಮತ್ತು ಸಂಚಾರಿ ವಿಜಯ್ ನಟಿಸಿದ್ದ ಆ ಚಿತ್ರಕ್ಕೆ ಉತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರ ಪ್ರಶಸ್ತಿ, ಮಂಸೋರೆ ಅವರಿಗೆ ಉತ್ತಮ ಸಾಹಿತ್ಯಕ್ಕೆ ರಾಷ್ಟ್ರ ಪ್ರಶಸ್ತಿ ಮತ್ತು ಇತರೆ ಮೂರು ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಗೌರವ ಸಿಕ್ಕಿತ್ತು. ಅದೇ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯು ಲಭಿಸಿತ್ತು. ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ನೇತೃತ್ವದ 'ಬದಲಾದ ಭಾರತ' ಎಂಬ ಯೋಜನೆಯಡಿಯಲ್ಲಿ ಆಯ್ಕೆಯಾದ ಸಿನಿಮಾಗಳ ಪಟ್ಟಿಯಲ್ಲಿ 'ನಾತಿಚರಾಮಿ' ಚಿತ್ರವೂ ಒಂದಾಗಿತ್ತು. ಮಂಸೋರೆ ನಿರ್ದೇಶನದ ಮೂರನೇ ಚಲನಚಿತ್ರ 'ಆಕ್ಟ್-1978' ಕಳೆದ ವರ್ಷ ದೀರ್ಘಕಾಲದ ಲಾಕ್‌ಡೌನ್ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮೊದಲ ದಕ್ಷಿಣ ಭಾರತದ ಚಲನಚಿತ್ರ ಎಂದೇ ಖ್ಯಾತಿಯಾಗಿತ್ತು. ಕೊರೊನಾ ಲಾಕ್‌ಡೌನ್ ನಂತರ ಸಿನಿಮಾಗಳನ್ನು ಬಿಡುಗಡೆ ಮಾಡಲು ಚಿತ್ರರಂಗ ಹಿಂದೇಟು ಹಾಕುತ್ತಿದ್ದ ವೇಳೆಯಲ್ಲಿ ಬಿಡುಗಡೆಯಾದ 'ಆಕ್ಟ್-1978' ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಸದ್ಯಕ್ಕೆ ಮಂಸೋರೆ ಅವರು 'ರಾಣಿ ಅಬ್ಬಕ್ಕ'ನ ಕುರಿತಾದ ಚಿತ್ರ ಮಾಡುವ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು, ಅದರ ಚಿತ್ರೀಕರಣಕ್ಕೆ ಹೋಗುವ ಮುನ್ನ ಮತ್ತೊಂದು ಚಿತ್ರ ಮಾಡುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಮದುವೆಯ ಬಳಿಕ ಮುಂದಿನ ಚಿತ್ರದ ಘೋಷಣೆ ಮಾಡುವುದಕ್ಕೆ ಸಿದ್ಧತೆಗಳನ್ನು ನಡೆಸಿದ್ದಾರೆ.