ಪಾಕಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಪೊಲೀಸ್ ಠಾಣೆ ಮೇಲೆ ದಾಳಿ, ಕನಿಷ್ಠ 10 ಮಂದಿ ಸಾವು

ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಏಕಾಏಕಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 10 ಮಂದಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಲಾಹೋರ್: ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಏಕಾಏಕಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 10 ಮಂದಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವಾಯವ್ಯ ಪಾಕಿಸ್ತಾನದಲ್ಲಿನ ಪೊಲೀಸ್ ಠಾಣೆಯೊಂದರ ಮೇಲೆ ಉಗ್ರರು ದಾಳಿ ನಡೆಸಿದ್ದು, ಕನಿಷ್ಠ 10 ಪೊಲೀಸ್ ಸಿಬ್ಬಂದಿ ಹತ್ಯೆಯಾಗಿದ್ದಾರೆ. ಸ್ಥಳೀಯ ಕಾಲಮಾನ ಮುಂಜಾನೆ 3 ಗಂಟೆಗೆ ಉಗ್ರರು ಪೊಲೀಸ್ ಠಾಣೆಯ ಮೇಲೆ ಸ್ನೈಪರ್ ದಾಳಿ ಮಾಡಿದ್ದಾರೆ. ಬಳಿಕ ಠಾಣೆಯನ್ನು ಪ್ರವೇಶಿಸಿ ಹ್ಯಾಂಡ್ ಗ್ರೆನೇಡ್‌ಗಳನ್ನು ಎಸೆದಿದ್ದಾರೆ. ಈ ವೇಳೆ ಸಂಭವಿಸಿದ ಸ್ಫೋಟದಿಂದ ಕನಿಷ್ಠ 10 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರಾಂತ್ಯದ ದ್ರಾಬಾನ್ ಪ್ರದೇಶದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಪಾಕ್ ಪರ ಗೂಢಚಾರಿಕೆ: ಮಾಸ್ಕೋದಲ್ಲಿದ್ದ ಭಾರತೀಯ ವಿದೇಶಾಂಗ ಇಲಾಖೆ ನೌಕರ ಬಂಧನ
30ಕ್ಕೂ ಹೆಚ್ಚು ಉಗ್ರರು ಮೂರೂ ದಿಕ್ಕುಗಳಿಂದ ದಾಳಿ ನಡೆಸಿದ್ದು, ಎರಡೂವರೆ ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಯಿತು. ದಾಳಿಯ ಹಿಂದೆ ಯಾರ ಕೈವಾಡವಿದೆ ಮತ್ತು ಇದು ಚುನಾವಣೆಗೆ ಸಂಬಂಧಿಸಿದ ದಾಳಿಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಪೊಲೀಸ್ ಠಾಣೆಯ ಕಟ್ಟಡಕ್ಕೆ ಪ್ರವೇಶಿಸಿದ ನಂತರ, ಭಯೋತ್ಪಾದಕರು ಹ್ಯಾಂಡ್ ಗ್ರೆನೇಡ್‌ಗಳನ್ನು ಬಳಸಿದರು, ಇದು ಪೊಲೀಸರಿಗೆ ಹೆಚ್ಚಿನ ಸಾವುನೋವುಗಳನ್ನು ಉಂಟುಮಾಡಿತು ಎಂದು ದ್ರಾಬನ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ಮಲಿಕ್ ಅನೀಸ್ ಉಲ್ ಹಸನ್ ತಿಳಿಸಿದ್ದಾರೆ.
ಇದೇ 8 ರಂದು ಪಾಕಿಸ್ತಾನ ಲೋಕಸಭೆಗೆ ಚುನಾವಣೆ ನಡೆಯಲಿದ್ದು, ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂಸಾಚಾರದ ಘಟನೆಗಳು ಹೆಚ್ಚುತ್ತಿವೆ.