ಪಂಚಭೂತಗಳಲ್ಲಿ ಲೀನರಾದ ನಟ ಶಿವರಾಮಣ್ಣ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕನ್ನಡದ ಹಿರಿಯ ನಟ ಶಿವರಾಂ ಅವರು ಶನಿವಾರ (ಡಿ.4) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ (ಡಿ.5) ನೆರವೇರಿಸಲಾಯಿತು.

ಪಂಚಭೂತಗಳಲ್ಲಿ ಲೀನರಾದ ನಟ ಶಿವರಾಮಣ್ಣ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
Linkup
ಕನ್ನಡ ಚಿತ್ರರಂಗದ ಹಿರಿಯ ನಟ ಅವರ ಅಂತ್ಯಕ್ರಿಯೆ ಭಾನುವಾರ (ಡಿ.5) ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಹಿರಿಯ ನಟ ಶಿವರಾಮಣ್ಣ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಶಿವರಾಮಣ್ಣ ಅವರ ಕುಟುಂಬಸ್ಥರು ನೆರವೇರಿಸಿದರು. ಶಿವರಾಮಣ್ಣ ಅವರ ಅಂತ್ಯಕ್ರಿಯೆಯಲ್ಲಿ ಸಚಿವ ಆರ್‌. ಅಶೋಕ್‌ ಅವರು ಹಾಜರಿದ್ದರು. ಜೊತೆಗೆ ಚಿತ್ರರಂಗದ ಅನೇಕ ಗಣ್ಯರು ಭಾಗಿಯಾಗಿ, ಹಿರಿಯ ನಟನ ಆತ್ಮಕ್ಕೆ ಶಾಂತಿ ಕೋರಿದರು. ಇನ್ನು, ಅವರು ಅಯ್ಯಪ್ಪ ಸ್ವಾಮಿಯ ಭಕ್ತರಾಗಿದ್ದರು. ಹಾಗಾಗಿ, ಅವರ ಅಂತ್ಯಕ್ರಿಯೆ ವೇಳೆ ಅಯ್ಯಪ್ಪ ಭಕ್ತಾದಿಗಳಿಂದ ಶಿವರಾಂ ಪಾರ್ಥಿವ ಶರೀರಕ್ಕೆ ವಿಶೇಷ ಪೂಜೆ ಮಾಡಲಾಯಿತು. ಅಷ್ಟಾಭಿಷೇಕದ ಮೂಲಕ ಶಿವರಾಂ ಪಾರ್ಥಿವ ಶರೀರಕ್ಕೆ ಪೂಜೆ ನೆರವೇರಿಸಲಾಯಿತು. ತುಪ್ಪ, ಪುಷ್ಪಾ, ಗಂಧ, ವಿಭೂತಿ, ಖರ್ಜೂರ, ಕೆಂಪು ಕಲ್ಲುಸಕ್ಕರೆ, ಹಾಲು, ಮೊಸರು ಅವಲಕ್ಕಿ ಒಳಗೊಂಡ ವಸ್ತುಗಳಿಂದ ನಡೆಯುವ ಅಷ್ಟಾಭಿಷೇಕ ಇದಾಗಿತ್ತು. ಅಂದಹಾಗೆ, ಶಿವರಾಂ ಅವರು ಅಯ್ಯಪ್ಪ ಸ್ವಾಮಿಯ ಪರಮ ಭಕ್ತರಾಗಿದ್ದರು. ವರ್ಷಕ್ಕೆ ಮೂರ್ನಾಲ್ಕು ಬಾರಿಯಾದರೂ ಅವರು ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಹೋಗಿಬರುತ್ತಿದ್ದರು. ಅಲ್ಲದೆ, ಅಯ್ಯಪ್ಪ ಸ್ವಾಮಿ ಪೂಜೆ ಮಾಡಲು ತಮ್ಮ ಮನೆ ಮಹಡಿ ಮೇಲೆ ಪ್ರತ್ಯೇಕ ಕೊಠಡಿ ಮಾಡಿಕೊಂಡಿದ್ದರು. ಅಲ್ಲಿಯೇ ಹೆಚ್ಚು ಸಮಯ ಕಳೆಯುತ್ತಿದ್ದ ಅವರು, ಬಾಗಿಲು ಹಾಕಿಕೊಂಡು ಅಯ್ಯಪ್ಪನ ಸ್ಮರಣೆಯಲ್ಲಿ ಮಗ್ನರಾಗುತ್ತಿದ್ದರು. ಕೆಲ ದಿನಗಳ ಹಿಂದೆ ಇದೇ ಕೊಠಡಿಯಲ್ಲಿರುವಾಗಲೇ ಅವರು ಕುಸಿದು ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಪ್ರಾಂಭಿಸಲಾಗಿತ್ತು. ಎಲ್ಲ ರೀತಿಯ ಚಿಕಿತ್ಸೆ ನೀಡಿದರೂ ಶಿವರಾಮ್ ಅವರ ಆರೋಗ್ಯ ಚೇತರಿಸಿಕೊಳ್ಳಲಿಲ್ಲ. ತಲೆಗೆ ಪೆಟ್ಟು ಬಿದ್ದಿದ್ದರಿಂದ ಮೆದುಳಿಗೆ ಬಲವಾದ ಗಾಯವಾಗಿತ್ತು. ಕೆಲ ದಿನಗಳ ನಂತರ ಮೆದುಳು ನಿಷ್ಕ್ರೀಯಗೊಂಡಿತ್ತು. ಕೋಮಾದಲ್ಲಿದ್ದ ಅವರು ಶನಿವಾರ ಕೊನೆಯುಸಿರೆಳೆದರು. ಶನಿವಾರ (ಡಿ.4) ಶಿವರಾಂ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಭಾರತ ಕ್ರಿಕೆಟ್ ತಂಡದ ಮಾಜಿ ಬೌಲರ್ ಅನಿಲ್ ಕುಂಬ್ಳೆ ಸೇರಿದಂತೆ ಸ್ಯಾಂಡಲ್‌ವುಡ್‌ನ ಸಾಕಷ್ಟು ಸೆಲೆಬ್ರಿಟಿಗಳು ಶಿವರಾಮ್ ಅವರ ಅಂತಿಮ ದರ್ಶನ ಪಡೆದಿದ್ದರು. ಭಾನುವಾರ (ಡಿ.5) ಮುಂಜಾನೆಯಿಂದಲೇ ರವೀಂದ್ರ ಕಲಾಕ್ಷೇತ್ರದಲ್ಲಿ ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.