ಪಾದಚಾರಿ ಮಾರ್ಗಗಳಲ್ಲಿನ ಟ್ರಾನ್ಸ್‌ಫಾರ್ಮರ್‌ಗಳ ತೆರವಿಗೆ BBMP, ಬೆಸ್ಕಾಂಗೆ 3 ತಿಂಗಳ ಗಡುವು

ಬೆಂಗಳೂರು ನಗರದಲ್ಲಿರುವ ಒಟ್ಟು ಟ್ರಾನ್ಸ್‌ ಫಾರ್ಮರ್‌ಗಳು, ಅದರಲ್ಲಿ ಸ್ಥಳಾಂತರಿಸಲಾಗದ, ಸ್ಥಳಾಂತರಿಸಬಹುದಾದ ಮತ್ತು ಸ್ಪನ್‌ ಪೋಲ್‌ಗೆ ಪರಿವರ್ತಿಸಬಹುದಾದ ಟ್ರಾನ್ಸ್‌ ಫಾರ್ಮರ್‌ಗಳ ಅಂಕಿ- ಅಂಶದ ವಿವರಗಳನ್ನು ಹೈಕೋರ್ಟ್‌ಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ. ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲಿರುವ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿ ಮತ್ತು ಬೆಸ್ಕಾಂಗೆ ಹೈಕೋರ್ಟ್‌ ಮೂರು ತಿಂಗಳ ಗಡುವು ನೀಡಿದೆ.

ಪಾದಚಾರಿ ಮಾರ್ಗಗಳಲ್ಲಿನ ಟ್ರಾನ್ಸ್‌ಫಾರ್ಮರ್‌ಗಳ ತೆರವಿಗೆ BBMP, ಬೆಸ್ಕಾಂಗೆ 3 ತಿಂಗಳ ಗಡುವು
Linkup
ಬೆಂಗಳೂರು: ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲಿರುವ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿ ಮತ್ತು ಬೆಸ್ಕಾಂಗೆ ಹೈಕೋರ್ಟ್‌ ಮೂರು ತಿಂಗಳ ಗಡುವು ನೀಡಿದೆ. ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್‌ ಫಾರ್ಮರ್‌ಗಳ ತೆರವು ಕೋರಿ ನಿವೃತ್ತ ವಿಂಗ್‌ ಕಮಾಂಡರ್‌ ವಿ.ಜಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಂಗಾಮಿ ಸಿಜೆ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಬೆಸ್ಕಾಂ ಸಲ್ಲಿಸಿದ ಪ್ರಮಾಣಪತ್ರ ದಾಖಲಿಸಿಕೊಂಡ ನ್ಯಾಯಪೀಠ, ಟ್ರಾನ್ಸ್‌ ಫಾರ್ಮರ್‌ಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು. ಅಲ್ಲದೆ, ಈ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಬಿಬಿಎಂಪಿ ಸಹ ಪ್ರಮಾಣಪತ್ರ ಸಲ್ಲಿಸಿ, ವಿಶೇಷ ಆಯುಕ್ತ ಮನೋಜ್‌ ಜೈನ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡಾವಳಿಯ ಮಾಹಿತಿ ನೀಡಿದೆ. ಬೆಸ್ಕಾಂ ಪರ ವಾದಿಸಿದ ವಕೀಲ ಎಸ್‌.ಶ್ರೀರಂಗ, ನಗರದಲ್ಲಿ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್‌ ಫಾರ್ಮರ್‌ಗಳ ತೆರವು ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಪ್ರಮಾಣಪತ್ರ ಸಲ್ಲಿಸಿದರು. ಅಲ್ಲದೆ, ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್‌ಫಾರ್ಮರ್‌ಗಳ ತೆರವು ಸಂಬಂಧ ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ಮನೋಜ್‌ ಜೈನ್‌ ನೇತೃತ್ವದ ಬೆಸ್ಕಾಂ ಹಾಗೂ ಪಾಲಿಕೆಯ ಅಧಿಕಾರಿಗಳ ಉನ್ನತ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಸಮಿತಿಯು ಸೆ.6ರಂದು ಸಭೆ ನಡೆಸಿದ್ದು, ಬಿಬಿಎಂಪಿ ಮತ್ತು ಬೆಸ್ಕಾಂನ ಎಲ್ಲಾ ಮುಖ್ಯ ಎಂಜಿನಿಯರ್‌ಗಳಿಂದ ತರಿಸಿಕೊಂಡ ವರದಿಗಳನ್ನು ಪರಿಶೀಲಿಸಿ ಅಗತ್ಯ ನಿರ್ದೇಶನಗಳನ್ನು ನೀಡಿದೆ ಎಂದು ತಿಳಿಸಿದರು. ಈಗಾಗಲೇ ನಗರದ ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಮೇಲಿರುವ ಟ್ರಾನ್ಸ್‌ ಫಾರ್ಮರ್‌ಗಳನ್ನು ಸರ್ವೆ ನಡೆಸಿದೆ. ಹಾಗೆಯೇ, ಸ್ಥಳಾಂತರಿಸಬಹುದಾದ ಟ್ರಾನ್ಸ್‌ ಫಾರ್ಮರ್‌ಗಳನ್ನು ಗುರುತಿಸಲಾಗಿದೆ. ಸ್ಥಳಾಂತರಿಸಲು ಸಾಧ್ಯವಾಗದ ಟ್ರಾನ್ಸ್‌ಫಾರ್ಮರ್‌ಗಳನ್ನು ಹೊಸ ವಿನ್ಯಾಸಕ್ಕೆ (ಸ್ಪನ್‌ ಪೋಲ್‌ ಬಳಸಿ ಅಳವಡಿಸುವುದು) ಪರಿವರ್ತಿಸಲು ನಿರ್ಧರಿಸಲಾಗಿದೆ. ಈಗಾಗಲೇ ಸ್ಥಳಾಂತರ ಕಾರ್ಯವೂ ಆರಂಭಿಸಲಾಗಿದ್ದು, ಅದನ್ನು ಪೂರ್ಣಗೊಳಿಸಲು ಸಮಯಾವಕಾಶ ನೀಡಬೇಕೆಂದು ಕೋರಿದರು. ನಗರದಲ್ಲಿರುವ ಒಟ್ಟು ಟ್ರಾನ್ಸ್‌ ಫಾರ್ಮರ್‌ಗಳು, ಅದರಲ್ಲಿ ಸ್ಥಳಾಂತರಿಸಲಾಗದ, ಸ್ಥಳಾಂತರಿಸಬಹುದಾದ ಮತ್ತು ಸ್ಪನ್‌ ಪೋಲ್‌ಗೆ ಪರಿವರ್ತಿಸಬಹುದಾದ ಟ್ರಾನ್ಸ್‌ ಫಾರ್ಮರ್‌ಗಳ ಅಂಕಿ- ಅಂಶದ ವಿವರಗಳನ್ನು ಹೈಕೋರ್ಟ್‌ಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.