![](https://vijaykarnataka.com/photo/89970664/photo-89970664.jpg)
ಮಾಜಿ ಸಚಿವ () ಪುತ್ರ () ಅವರು ಸ್ಯಾಂಡಲ್‌ವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಅವರ ಚೊಚ್ಚಲ ಚಿತ್ರ ಮಾರ್ಚ್ 4ರಂದು ಅದ್ದೂರಿಯಾಗಿ ಲಾಂಚ್ ಆಗಲಿದೆ. ದೊಡ್ಡಮಟ್ಟದಲ್ಲಿ ಸೆಟ್ಟೇರಲಿರುವ ಈ ಸಿನಿಮಾಗೆ ರಾಧಾಕೃಷ್ಣ ರೆಡ್ಡಿ () ನಿರ್ದೇಶನ ಮಾಡಲಿದ್ದಾರೆ. ಅದಕ್ಕೂ ಮುನ್ನ 'ಪವರ್ ಸ್ಟಾರ್' () ಅವರನ್ನು ಕಿರೀಟಿ ನೆನಪು ಮಾಡಿಕೊಂಡಿದ್ದಾರೆ. 'ಪುನೀತ್ ರಾಜ್‌ಕುಮಾರ್ ಅವರ ಡ್ಯಾನ್ಸ್, ಆ್ಯಕ್ಷನ್, ಸ್ಕ್ರೀನ್ ಪ್ರೆಸೆನ್ಸ್ ನೋಡಿ ಅಚ್ಚರಿಗೊಂಡಿದ್ದೆ..' ಎಂದು ಕಿರೀಟಿ ಹೇಳಿದ್ದಾರೆ.
ಕಿರೀಟಿಗೆ ಕೊಡೆ ಹಿಡಿದಿದ್ದ ಅಪ್ಪು ಸರ್‌ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಕಿರೀಟಿ, 'ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸ 10 ವರ್ಷಗಳದ್ದು. ಆದರೂ ಆ ನೆನಪುಗಳು ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. 2010ರಲ್ಲಿ 'ಜಾಕಿ' ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ನಾನು ಅಪ್ಪು ಸರ್ ಅವರನ್ನು ಮೊದಲ ಸಲ ಭೇಟಿಯಾದೆ. ಅವರ ಡ್ಯಾನ್ಸ್, ಆ್ಯಕ್ಷನ್, ಸ್ಕ್ರೀನ್ ಪ್ರೆಸೆನ್ಸ್ ನೋಡಿ ಅಚ್ಚರಿಗೊಂಡಿದ್ದೆ. ಆದರೆ, ಅವರು ಆಫ್ ಸ್ಕ್ರೀನ್‌ನಲ್ಲಿದ್ದ ರೀತಿ ಮನಸಿಗೆ ಹತ್ತಿರವಾಯಿತು. ನಾವು ಥಿಯೇಟರ್‌ನಿಂದ ನನ್ನ ಮನೆಗೆ ಹೋಗುತ್ತಿದ್ದಾಗ, ಮಳೆ ಬೀಳುತ್ತಿತ್ತು ಮತ್ತು ಪುನೀತ್ ಸರ್ ಅವರೇ ಇಬ್ಬರಿಗೂ ಕೊಡೆ ಹಿಡಿದರು. ನೃತ್ಯದ ಬಗ್ಗೆ ಮತ್ತು ಅವರ ಆ್ಯಕ್ಷನ್ ಬಗ್ಗೆ ನನ್ನೊಂದಿಗೆ ಮಾತನಾಡುತ್ತಿದ್ದರು. ಚಿಕ್ಕ ಹುಡುಗನಿಗೆ ಕೊಡೆ ಹಿಡಿದ ಸೂಪರ್ ಸ್ಟಾರ್. ನಮ್ಮ ಕನಸಿನಲ್ಲಿಯೂ ಊಹಿಸಲಾಗದ ಸಂಗತಿ. ಅದು ಪುನೀತ್ ಸರ್ ಅವರಿಂದ ಮಾತ್ರ ಸಾಧ್ಯ. ಆ ದಿನ ನಾನು ಸರಳತೆಯ ಮೌಲ್ಯವನ್ನು ಅರಿತೆ. ಇದು ಅಪ್ಪು ಸರ್ ಅವರಿಂದ ನಾನು ಅತ್ಯಮೂಲ್ಯವಾದ ಪಾಠ' ಎಂದು ಬರೆದುಕೊಂಡಿದ್ದಾರೆ.
ನನ್ನ ಮೇಲಿನ ನಿಮ್ಮ ನಂಬಿಕೆಯೇ ರಕ್ಷಾಕವಚ'ಜಗತ್ತಿಗೆ ನನ್ನನ್ನು ಪರಿಚಯಿಸಿಕೊಳ್ಳಲು ಕೇವಲ ಒಂದು ದಿನ ಬಾಕಿ. ಇದೆಲ್ಲಾ ಶುರುವಾಗಿದ್ದು ಪುನೀತ್ ರಾಜ್‌ಕುಮಾರ್ ಸರ್ ಅವರಿಂದ. ಸ್ಫೂರ್ತಿ, ಮಾದರಿ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಜೀವನದ ಮಾರ್ಗದರ್ಶಿ ಅವರು. ನಿಮ್ಮ ಮಾತುಗಳನ್ನು ಎಂದಿಗೂ ಮರೆಯುವುದಿಲ್ಲ ಸರ್.. ನನ್ನ ಮೇಲಿನ ನಿಮ್ಮ ನಂಬಿಕೆಯೇ ರಕ್ಷಾಕವಚ. ನಾನು ಅದನ್ನು ಜವಾಬ್ದಾರಿಯಿಂದ ನಿಭಾಯಿಸುತ್ತೇನೆ. ನೀವು ಮತ್ತು ನಮ್ಮ ಜನತೆ ಯಾವಾಗಲೂ ಹೆಮ್ಮೆಪಡುವಂತೆ ಮಾಡಲು ಸದಾ ಶ್ರಮಿಸುತ್ತೇನೆ' ಎಂದು ಹೇಳಿದ್ದಾರೆ ಕಿರೀಟಿ.
ಕಿರೀಟಿ ಸಿನಿಮಾಕ್ಕೆ 'ಬಾಹುಬಲಿ' ತಂಡಕಿರೀಟಿ ಹೀರೋ ಆಗಿ ಲಾಂಚ್ ಆಗುತ್ತಿರುವ ಮೊದಲ ಸಿನಿಮಾಕ್ಕೆ ಛಾಯಾಗ್ರಾಹಕರಾಗಿ 'ಈಗ', 'ಬಾಹುಬಲಿ', 'ಆರ್‌ಆರ್‌ಆರ್' ಸಿನಿಮಾಗಳ ಖ್ಯಾತಿಯ ಛಾಯಾಗ್ರಾಹಕ ಕೆಕೆ ಸೆಂಥಿಲ್‌ಕುಮಾರ್ (Senthil Kumar) ಕೆಲಸ ಮಾಡಲಿದ್ದಾರೆ. ದಕ್ಷಿಣ ಭಾರತದ ಸೆನ್ಸೇಷನಲ್ ಮ್ಯೂಸಿಕ್ ಡೈರೆಕ್ಟರ್ ದೇವಿಶ್ರೀ ಪ್ರಸಾದ್ () ಈ ಸಿನಿಮಾದ ಹಾಡುಗಳಿಗೆ ಸಂಗೀತ ನೀಡಲಿದ್ದಾರೆ. ಸ್ಟಂಟ್ ಮಾಸ್ಟರ್ ಪೀಟರ್ ಹೇನ್ ಕೂಡ ಈ ಸಿನಿಮಾಗೆ ಕೆಲಸ ಮಾಡಲಿದ್ದಾರೆ. ರವೀಂದರ್ ಕಲಾ ನಿರ್ದೇಶನದ ಹೊಣೆ ಹೊತ್ತಿದ್ದಾರೆ.