ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನ ಬಂಧಿಸಿದ ಬೆಂಗಳೂರು ಪೊಲೀಸ್!

ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಅದನ್ನ ನೋಡಿ ಕಿಚ್ಚ ಸುದೀಪ್ ಪುತ್ರಿ ಛೀಮಾರಿ ಹಾಕಿದ್ದರು. ಇದೀಗ ಪುನೀತ್ ರಾಜ್‌ಕುಮಾರ್‌ಗೆ ಅವಮಾನಿಸಿದ್ದ ಕಿಡಿಗೇಡಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪುನೀತ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನ ಬಂಧಿಸಿದ ಬೆಂಗಳೂರು ಪೊಲೀಸ್!
Linkup
ಪವರ್ ಸ್ಟಾರ್ ವಿಧಿವಶರಾದ ನೋವಿನಲ್ಲಿ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಅಪ್ಪು ಇನ್ನಿಲ್ಲ ಎಂಬುದನ್ನ ನಂಬುವುದಕ್ಕೆ ಅಸಾಧ್ಯವಾಗುತ್ತಿದೆ. ಹೀಗಿರುವಾಗಲೇ ಕಿಡಿಗೇಡಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಅದನ್ನ ನೋಡಿ ಕಿಚ್ಚ ಸುದೀಪ್ ಪುತ್ರಿ ಛೀಮಾರಿ ಹಾಕಿದ್ದರು. ಇದೀಗ ಪುನೀತ್ ರಾಜ್‌ಕುಮಾರ್‌ಗೆ ಅವಮಾನಿಸಿದ್ದ ಕಿಡಿಗೇಡಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರು ಸಿಟಿ ಪೊಲೀಸರು ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಪೋಸ್ಟ್ ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಬೆಂಗಳೂರು ಸಿಟಿ ಪೊಲೀಸ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು ಪುನೀತ್ ರಾಜ್‌ಕುಮಾರ್ ಅವರ ಹಠಾತ್ ನಿಧನದ ಬಳಿಕ ಯಾವುದೇ ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಮದ್ಯದಂಗಡಿ, ಬಾರ್‌ಗಳನ್ನು ಬಂದ್ ಮಾಡಿಸಲಾಗಿತ್ತು. ಮದ್ಯ ಮರಾಟಕ್ಕೆ ನಿಷೇಧ ಹೇರಲಾಗಿತ್ತು. ಮದ್ಯ ಸಿಗದೆ ಬೇಸೆತ್ತ ಉತ್ತರ ಭಾರತದ ವ್ಯಕ್ತಿಯೊಬ್ಬ ಪುನೀತ್ ರಾಜ್‌ಕುಮಾರ್‌ಗೆ ಅಗೌರವ ತೋರಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ. ಬಿಯರ್ ಬಾಟಲಿಯ ಚಿತ್ರ ಹಂಚಿಕೊಂಡು ಪುನೀತ್ ರಾಜ್‌ಕುಮಾರ್ ಬಗ್ಗೆ ಅವಹೇಳನ ಮಾಡಿದ್ದ. ಇದನ್ನ ಗಮನಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ‘’ಕೇವಲ ಮದ್ಯಕ್ಕಾಗಿ ಇಂತಹ ವರ್ತನೆಯೇ? ಜನರಲ್ಲಿ ಮನುಷ್ಯತ್ವ ಅನ್ನೋದು ಉಳಿದಿಲ್ಲವೇ?’’ ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಬೇಸರ ಹೊರ ಹಾಕಿದ್ದರು. ಇದನ್ನ ಕಂಡ ಸೈಬರ್ ಕ್ರೈಂ ಮತ್ತು ಬೆಂಗಳೂರು ಸಿಟಿ ಪೊಲೀಸರು ಈಗ ಆ ಕಿಡಿಗೇಡಿಯನ್ನ ಬಂಧಿಸಿದ್ದಾರೆ. ಇಂದು ಐದನೇ ದಿನ ಅಕ್ಟೋಬರ್ 29 ರಂದು ತೀವ್ರ ಹೃದಯಾಘಾತ ಮತ್ತು ಹೃದಯಸ್ತಂಭನದಿಂದ ಪುನೀತ್ ರಾಜ್‌ಕುಮಾರ್ ಕೊನೆಯುಸಿರೆಳೆದರು. ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದು ಐದನೇ ದಿನ. ಇವತ್ತು (ಮಂಗಳವಾರ) ಅಪ್ಪು ಅವರ ಪುಣ್ಯಭೂಮಿಗೆ ಕುಟುಂಬಸ್ಥರು ಹಾಲು ತುಪ್ಪ ಕಾರ್ಯ ನೆರವೇರಿಸಲಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಪುಣ್ಯಭೂಮಿಯ ದರ್ಶನ ಮಾಡಲು ಅಭಿಮಾನಿಗಳಿಗೆ ಇನ್ನೂ ಅವಕಾಶ ನೀಡಲಾಗಿಲ್ಲ. ಕಂಠೀರವ ಸ್ಟುಡಿಯೋದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಅಪ್ಪು ಅವರ ಪುಣ್ಯಭೂಮಿಗೆ ನಮನ ಸಲ್ಲಿಸಲು ದೂರದೂರುಗಳಿಂದ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸುತ್ತಿದ್ದಾರೆ. ಹಾಲು ತುಪ್ಪ ಕಾರ್ಯ ನೆರವೇರಿದ ನಂತರ ಅಪ್ಪು ಅವರ ಪುಣ್ಯಭೂಮಿಯ ದರ್ಶನ ಪಡೆಯಲು ಅಭಿಮಾನಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಇಂದೂ ಕೂಡ ಕಟ್ಟೆಚ್ಚರ ಇಂದು ಅಪ್ಪು ಅವರ ಪುಣ್ಯಭೂಮಿಗೆ ತೆರಳಿ ಕುಟುಂಬಸ್ಥರು ಹಾಲು ತುಪ್ಪ ಕಾರ್ಯ ನೆರವೇರಿಸಲಿದ್ದಾರೆ. ಇದಕ್ಕಾಗಿ ಕಂಠೀರವ ಸ್ಟುಡಿಯೋದಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. ಇವತ್ತು ಕೂಡ ಅಹಿತರಕ ಘಟನೆಗಳು ಜರುಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕಂಠೀರವ ಸ್ಟುಡಿಯೋ ಸುತ್ತ-ಮುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.