ಪುನೀತ್ ರಾಜ್‌ಕುಮಾರ್ ಸಮಾಧಿ ಮುಂದೆ ಜಮೀರ್ ಅಹ್ಮದ್ ಪುತ್ರನ 'ಬನಾರಸ್' ಸಿನಿಮಾ ಪೋಸ್ಟರ್ ರಿಲೀಸ್

ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ - ಸೋನಲ್‌ ಮೊಂಥೆರೋ ನಾಯಕ,‌ ನಾಯಕಿಯಾಗಿ ನಟಿಸಿರುವ 'ಬನಾರಸ್' ಸಿನಿಮಾದ ಫಸ್ಟ್‌ಲುಕ್, ಪೋಸ್ಟರ್‌ನ್ನು ಪುನೀತ್ ರಾಜ್‌ಕುಮಾರ್ ಸಮಾಧಿ ಮುಂದೆ ರಿಲೀಸ್ ಮಾಡಲಾಗಿದೆ.

ಪುನೀತ್ ರಾಜ್‌ಕುಮಾರ್ ಸಮಾಧಿ ಮುಂದೆ ಜಮೀರ್ ಅಹ್ಮದ್ ಪುತ್ರನ 'ಬನಾರಸ್' ಸಿನಿಮಾ ಪೋಸ್ಟರ್ ರಿಲೀಸ್
Linkup
ಪುತ್ರ ಝೈದ್ ಖಾನ್ - ಸೋನಲ್‌ ಮೊಂಥೆರೋ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ 'ಬನಾರಸ್'. ಈ ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್‌ನ್ನು 'ಪವರ್ ಸ್ಟಾರ್' ಪುನೀತ್ ರಾಜಕುಮಾರ್ ಸಮಾಧಿಯ ಮುಂದೆ ಬಿಡುಗಡೆ ಮಾಡಲಾಯಿತು. ಇದಕ್ಕೂ ಮುನ್ನ ಚಿತ್ರತಂಡ ಡಾ.ರಾಜಕುಮಾರ್, ಪಾರ್ವತಮ್ಮ ರಾಜ್‍ಕುಮಾರ್, ಅಂಬರೀಶ್ ಹಾಗೂ ಪುನೀತ್ ರಾಜ್‍ಕುಮಾರ್ ಸಮಾಧಿಗಳಿಗೆ ಪೂಜೆ ಸಲ್ಲಿಸಿದ್ದರು. ಫಸ್ಟ್‌ಲುಕ್‌ಗೆ ಒಳ್ಳೆಯ ಮೆಚ್ಚುಗೆ ಕಂಠೀರವ ಸ್ಟುಡಿಯೋದಿಂದ, ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಗೂ ಪೂಜೆ ಸಲ್ಲಿಸಿ, ಲಕ್ಷ್ಮೀ ಪೂಜೆ ಮಾಡಿ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು. ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಸಂಸ್ಥೆಯ ಕಡೆಯಿಂದ ಅದ್ದೂರಿಯಾಗಿ ನಿರ್ಮಾಣಗೊಂಡಿರುವ ಈ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಫಸ್ಟ್‌ಲುಕ್‌ಗೆ ಒಳ್ಳೆಯ ಮೆಚ್ಚುಗೆ ವ್ಯಕ್ತವಾಗಿದೆ. ಇಂದು 'ಪವರ್ ಸ್ಟಾರ್' ಪೋಸ್ಟರ್ ರಿಲೀಸ್ ಮಾಡಬೇಕಿತ್ತು! ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ, ಯಾರೂ ನಿರೀಕ್ಷಿಸದಂಥಾ ದುರಂತ ಘಟಿಸದಿದ್ದರೆ ಈ ದಿನ 'ಪವರ್ ಸ್ಟಾರ್' ಪುನೀತ್ ರಾಜ್‌ಕುಮಾರ್ ಅವರೇ ಖುದ್ದಾಗಿ 'ಬನಾರಸ್‌'ನ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್‌ ಬಿಡುಗಡೆಗೊಳಿಸ ಬೇಕಿತ್ತು. ದುರಾದೃಷ್ಟವಶಾತ್ ಅವರು ಮರೆಯಾಗಿದ್ದಾರೆ. ಅವರು ತೋರಿದ ಪ್ರೀತಿಯನ್ನು ಮನಸಲ್ಲಿಟ್ಟುಕೊಂಡು ಅವರ ಪುಣ್ಯಭೂಮಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ. ಅಲ್ಲಿಂದಲೇ ಅಪ್ಪು ಖುಷಿಗೊಳ್ಳುತ್ತಾರೆ, ಹರಸುತ್ತಾರೆಂಬ ತುಂಬು ನಂಬಿಕೆ ಚಿತ್ರ ತಂಡಕ್ಕಿದೆ. ಸೋನಲ್‌ ಮೊಂಥೆರೋ 'ಬನಾರಸ್' ನಾಯಕಿ ಈ ಪೂಜೆ ಮತ್ತು ಫಸ್ಟ್ ಲುಕ್ ಬಿಡುಗಡೆಯ ಸಂದರ್ಭದಲ್ಲಿ ಚಿತ್ರದ ನಿರ್ಮಾಪಕರು, ನಿರ್ದೇಶಕ ಜಯತೀರ್ಥ, ನಾಯಕ ನಾಯಕಿಯರಾದ ಝೈದ್ ಖಾನ್, ಸೋನಲ್‌ ಮೊಂಥೆರೋ, ಖ್ಯಾತ ಹಾಸ್ಯ ನಟ ಸುಜಯ್ ಮುಂತಾದವರು ಉಪಸ್ಥಿತರಿದ್ದರು. ಇಡೀ ಚಿತ್ರ ಮೂಡಿ ಬಂದಿರುವ ಅದ್ಧೂರಿತನ ಮತ್ತು ವಿಭಿನ್ನ ಕಥಾನಕದ ಸುಳಿವನ್ನು ಈ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್ ನೀಡಲಿದೆ. 84 ಘಾಟ್ ಪ್ರದೇಶಗಳಲ್ಲಿ ಚಿತ್ರೀಕರಣ ಹಲವಾರು ಅದ್ಭುತಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ಈ ಚಿತ್ರದ 90% ಭಾಗದ ಚಿತ್ರೀಕರಣವನ್ನು ಬನಾರಸ್‌ನ ಮನಮೋಹಕ ಪರಿಸರದಲ್ಲಿ ನಡೆಸಲಾಗಿದೆ. ಇಲ್ಲಿನ 84 ಘಾಟ್ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿರುವುದು ಬನಾರಸ್‌ನ ಮತ್ತೊಂದು ಪ್ರಧಾನ ಅಂಶ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ. ಏಕಕಾಲದಲ್ಲಿಯೇ ಐದು ಭಾಷೆಗಳಲ್ಲಿ ತಯಾರಾಗಿಗಿದೆ. ದೊಡ್ಡ ಮೊತ್ತಕ್ಕೆ ಆಡಿಯೋ ಹಕ್ಕು ಮಾರಾಟ ಲಹರಿ ಮ್ಯೂಸಿಕ್ ಮತ್ತು ಟಿ-ಸಿರೀಸ್‌ ಸಂಸ್ಥೆಗಳು 'ಬನಾರಸ್' ಸಿನಿಮಾದ ಆಡಿಯೋ ಹಕ್ಕುಗಳನ್ನು ಬರೋಬ್ಬರಿ 3.5 ಕೋಟಿ ರೂ. ನೀಡಿ ಖರೀದಿ ಮಾಡಿದೆ. ಸ್ಯಾಂಡಲ್‌ವುಡ್‌ಮಟ್ಟಿಗೆ ಇದು ದೊಡ್ಡ ದಾಖಲೆ. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಸಿನಿಮಾದಲ್ಲಿ ಐದು ಹಾಡುಗಳಿವೆ. ಭಾರತ ಚಿತ್ರರಂಗದಲ್ಲೇ ಮೊದಲ ಬಾರಿಗೆ ಹೊಸಬರ ಚಿತ್ರಕ್ಕೆ ಇಷ್ಟು ದೊಡ್ಡ ಮಟ್ಟದ ಆಡಿಯೋ ಹಕ್ಕು ದೊರಕಿದೆ ಎಂದು ಚಿತ್ರತಂಡ ಅಭಿಪ್ರಾಯ ಪಟ್ಟಿದೆ.