ಪ್ರಧಾನಿ ಮೋದಿ ಜೊತೆ ಸೆಲ್ಫೀ: ಒಳ್ಳೆಯ ಸ್ನೇಹಿತ ಎಂದು ಪೋಸ್ಟ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ

ಸಿಓಪಿ 28 ಶೃಂಗಸಭೆಗೆ ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ದುಬೈ: ಸಿಓಪಿ 28 ಶೃಂಗಸಭೆಗೆ ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಮೆಲೋನಿ ಅವರು, ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, "ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ" ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು.         View this post on Instagram                       A post shared by Giorgia Meloni (@giorgiameloni) ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ ಸಂದರ್ಭದಲ್ಲಿ ಮೋದಿಯವರು, ವಿವಿಧ ರಾಷ್ಟ್ರಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ. ಮೋದಿಯವರು ಮೆಲೋನಿ ಅವರಲ್ಲದೆ, ಪ್ರಧಾನಿ ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಪ್ರಧಾನಿ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟಿಷ್ ವಿದೇಶಾಂಗ ಸಚಿವ ಡೇವಿಡ್ ಕ್ಯಾಮರೂನ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಭೇಟಿಯಾದರು. ಇದನ್ನೂ ಓದಿ: ಭಾರತದಿಂದ ಜಾಗತಿಕ ಇಂಗಾಲದ ಹೊರಸೂಸುವಿಕೆ ಶೇ.4ಕ್ಕಿಂತ ಕಡಿಮೆ: ಗ್ರೀನ್ ಕ್ರೆಡಿಟ್ ಉಪಕ್ರಮ ಘೋಷಿಸಿದ ಪ್ರಧಾನಿ ಮೋದಿ ಇಲ್ಲಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದ ನಾಲ್ಕು ಅಧಿವೇಶನಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಸಮಾವೇಶದಲ್ಲಿ, ಪ್ರಧಾನಿ ಮೋದಿ ಮತ್ತು ಇತರ ಜಾಗತಿಕ ನಾಯಕರು ಒಟ್ಟಿಗೆ ಗ್ರೂಪ್ ಫೋಟೋ ಕೂಡ ತೆಗೆದುಕೊಂಡರು. ಸಿಓಪಿ 28 ಶೃಂಗಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರತಿಯೊಬ್ಬರೂ ಪರಿಸರದ ಬಗ್ಗೆ ಚಿಂತಿಸಬೇಕು ಎಂದರು. ನಮ್ಮ ಆರೋಗ್ಯದ ಬಗ್ಗೆ ನಾವು ಯೋಚಿಸುವಂತೆಯೇ ನಾವು ಅದರ ಬಗ್ಗೆ ಯೋಚಿಸಬೇಕು. ಇಂಗಾಲದ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿಮೆ ಮಾಡಲು ಎಲ್ಲಾ ದೇಶಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆ ಇದೆ. 2030 ರ ವೇಳೆಗೆ ಇಂಗಾಲದ ಹೊರಸೂಸುವಿಕೆಯನ್ನು ಶೇಕಡಾ 45 ರಷ್ಟು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದರು.

ಪ್ರಧಾನಿ ಮೋದಿ ಜೊತೆ ಸೆಲ್ಫೀ: ಒಳ್ಳೆಯ ಸ್ನೇಹಿತ ಎಂದು ಪೋಸ್ಟ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ
Linkup
ಸಿಓಪಿ 28 ಶೃಂಗಸಭೆಗೆ ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ದುಬೈ: ಸಿಓಪಿ 28 ಶೃಂಗಸಭೆಗೆ ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡಿರುವ ಮೆಲೋನಿ ಅವರು, ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, "ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ" ಎಂಬ ಶೀರ್ಷಿಕೆ ನೀಡಿದ್ದಾರೆ. ಈ ಪೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು.
        View this post on Instagram                       A post shared by Giorgia Meloni (@giorgiameloni)
ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ ಸಂದರ್ಭದಲ್ಲಿ ಮೋದಿಯವರು, ವಿವಿಧ ರಾಷ್ಟ್ರಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ. ಮೋದಿಯವರು ಮೆಲೋನಿ ಅವರಲ್ಲದೆ, ಪ್ರಧಾನಿ ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಪ್ರಧಾನಿ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟಿಷ್ ವಿದೇಶಾಂಗ ಸಚಿವ ಡೇವಿಡ್ ಕ್ಯಾಮರೂನ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಭೇಟಿಯಾದರು. ಇದನ್ನೂ ಓದಿ: ಭಾರತದಿಂದ ಜಾಗತಿಕ ಇಂಗಾಲದ ಹೊರಸೂಸುವಿಕೆ ಶೇ.4ಕ್ಕಿಂತ ಕಡಿಮೆ: ಗ್ರೀನ್ ಕ್ರೆಡಿಟ್ ಉಪಕ್ರಮ ಘೋಷಿಸಿದ ಪ್ರಧಾನಿ ಮೋದಿ ಇಲ್ಲಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದ ನಾಲ್ಕು ಅಧಿವೇಶನಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಸಮಾವೇಶದಲ್ಲಿ, ಪ್ರಧಾನಿ ಮೋದಿ ಮತ್ತು ಇತರ ಜಾಗತಿಕ ನಾಯಕರು ಒಟ್ಟಿಗೆ ಗ್ರೂಪ್ ಫೋಟೋ ಕೂಡ ತೆಗೆದುಕೊಂಡರು. ಸಿಓಪಿ 28 ಶೃಂಗಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಪ್ರತಿಯೊಬ್ಬರೂ ಪರಿಸರದ ಬಗ್ಗೆ ಚಿಂತಿಸಬೇಕು ಎಂದರು. ನಮ್ಮ ಆರೋಗ್ಯದ ಬಗ್ಗೆ ನಾವು ಯೋಚಿಸುವಂತೆಯೇ ನಾವು ಅದರ ಬಗ್ಗೆ ಯೋಚಿಸಬೇಕು. ಇಂಗಾಲದ ಹೊರಸೂಸುವಿಕೆಯನ್ನು ತೀವ್ರವಾಗಿ ಕಡಿಮೆ ಮಾಡಲು ಎಲ್ಲಾ ದೇಶಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಹೊರಸೂಸುವಿಕೆ ತುಂಬಾ ಕಡಿಮೆ ಇದೆ. 2030 ರ ವೇಳೆಗೆ ಇಂಗಾಲದ ಹೊರಸೂಸುವಿಕೆಯನ್ನು ಶೇಕಡಾ 45 ರಷ್ಟು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದರು. ಪ್ರಧಾನಿ ಮೋದಿ ಜೊತೆ ಸೆಲ್ಫೀ: ಒಳ್ಳೆಯ ಸ್ನೇಹಿತ ಎಂದು ಪೋಸ್ಟ್ ಮಾಡಿದ ಇಟಲಿ ಪ್ರಧಾನಿ ಮೆಲೋನಿ