ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ, 9 ಪ್ರಕರಣ ದಾಖಲಿಸಿದ ಸಿಬಿಐ, ತೀವ್ರಗೊಂಡ ತನಿಖೆ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದಾಗಿ ರಾಜ್ಯದಲ್ಲಿ ನಡೆದ ಭಾರಿ ಹಿಂಸಾಚಾರದ ತನಿಖೆಯ ಹೊಣೆ ಹೊತ್ತಿರುವ ಸಿಬಿಐ ಒಟ್ಟು 9 ಪ್ರಕರಣಗಳನ್ನು ದಾಖಲಿಸಿದೆ.

ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ, 9 ಪ್ರಕರಣ ದಾಖಲಿಸಿದ ಸಿಬಿಐ, ತೀವ್ರಗೊಂಡ ತನಿಖೆ
Linkup
ಹೊಸದಿಲ್ಲಿ: ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಬಿಜೆಪಿ-ಟಿಎಂಸಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದಾಗಿ ಪಶ್ಚಿಮ ಬಂಗಾಳದಲ್ಲಿ ನಡೆದ ಭಾರಿ ಹಿಂಸಾಚಾರದ ತನಿಖೆಯ ಹೊಣೆ ಹೊತ್ತಿರುವ ಕೇಂದ್ರೀಯ ತನಿಖಾ ಸಂಸ್ಥೆಯು () ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿದೆ. ಇದಕ್ಕೆ ಪೂರಕವಾಗಿ ಸಿಬಿಐನ ನಾಲ್ಕು ವಿಶೇಷ ತಂಡಗಳು ಕೋಲ್ಕೊತಾದಿಂದ ವಿವಿಧ ದಿಕ್ಕಿನಲ್ಲಿ ಹೊರಟು, ಹಿಂಸಾಚಾರಕ್ಕೆ ಸಂಬಂಧಿತ ಸಾಕ್ಷ್ಯಗಳನ್ನು ಕಲೆಹಾಕುವುದರಲ್ಲಿ ನಿರತವಾಗಿವೆ. ಕೋಲ್ಕೊತಾ ಹೈಕೋರ್ಟ್‌ ನಿರ್ದೇಶನದಂತೆ ತನಿಖೆಯ ಹೊಣೆಯನ್ನು ಸಿಬಿಐ ವಹಿಸಿಕೊಂಡಿದೆ. ಪ್ರಮುಖವಾಗಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳನ್ನು ಕೇಂದ್ರೀಕರಿಸಲು ಸೂಚಿಸಲಾಗಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹಿಂಸಾಚಾರ ಸಂಬಂಧ ವರದಿಯನ್ನು ಸಲ್ಲಿಸಿದ ಬಳಿಕ ಗಂಭೀರ ಹಾಗೂ ಕ್ಷಿಪ್ರ ತನಿಖೆಗೆ ಹೈಕೋರ್ಟ್‌ ನಿರ್ದೇಶಿಸಿದೆ. ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದಲೂ ಹಿಂಸಾಚಾರಕ್ಕೆ ಸಂಬಂಧಿತ ಇತರ ಅಪರಾಧಗಳ ಕುರಿತು ತನಿಖೆ ನಡೆಸಲಾಗುತ್ತಿದೆ. ಆರು ವಾರಗಳಲ್ಲಿ ಸಿಬಿಐ, ಎಸ್‌ಐಟಿ ತಮ್ಮ ವರದಿಗಳನ್ನು ಸಲ್ಲಿಸಲು ಗಡುವು ನೀಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟಾರೆ ಎಂಟು ಹಂತದ ವಿಧಾನಸಭೆ ಚುನಾವಣೆ ಬಳಿಕ ಕಳೆದ ಮೇ 2ರಂದು ಫಲಿತಾಂಶ ಹೊರಬಿದ್ದಿತ್ತು. ಟಿಎಂಸಿಯ ಪ್ರಚಂಡ ಜಯಭೇರಿಯ ಬೆನ್ನಿಗೇ ರಾಜ್ಯದಲ್ಲಿ ಭಾರಿ ಹಿಂಸಾಚಾರ ನಡೆದಿತ್ತು.