ಬೆಂಗಳೂರು: ಪೌರಕಾರ್ಮಿಕರಿಗೆ ಸಿಹಿ ಹಂಚಿದ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ!

ಬೆಂಗಳೂರಿನ ಪೌರ ಕಾರ್ಮಿಕರಿಗೆ ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸಿಹಿ ತಿಂಡಿ ಹಂಚಿದರು. ಇದಕ್ಕೂ ಮೊದಲು ಅವರ ಜೊತೆ ಸಂವಾದ ನಡೆಸಿದ ಸಚಿವರು, ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲ ಮಾಡಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಪೌರಕಾರ್ಮಿಕರಿಗೆ ಸಿಹಿ ಹಂಚಿದ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ!
Linkup
ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರಾದ ಅವರಿಂದು ಪೌರ ಕಾರ್ಮಿಕರಿಗೆ ಸಿಹಿ ಹಂಚಿದರು. ಅರಮನೆ ನಗರ ವಾರ್ಡ್‌ನ ಲೋಲೆವೆಲ್‌ ಪಾರ್ಕ್ ಬಳಿ ನಡೆದ ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಜತೆ ಸಂವಾದ ನಡೆಸಿದ ಅವರು, ಅವರ ಸಮಸ್ಯೆಗಳನ್ನು ಆಲಿಸಿದರಲ್ಲದೆ ಎಲ್ಲರಿಗೂ ಸಿಹಿತಿಂಡಿ ತಿನಿಸು ನೀಡಿದ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಕಠಿಣ ಸಂದರ್ಭದಲ್ಲೂ ಪೌರ ಕಾರ್ಮಿಕರು ಕೆಲಸ ಮಾಡುತ್ತಾರೆ. ಮಳೆ, ಬಿಸಲು, ಯಾವುದನ್ನೂ ಲೆಕ್ಕಿಸದೆ ಸಮರ್ಪಣಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುತ್ತಾರೆ. ಕೋವಿಡ್‌ ಸಂಕಷ್ಟ ಕಾಲದಲ್ಲಿ ಇವರೆಲ್ಲರೂ ತಮ್ಮ ಜೀವ ಲೆಕ್ಕಿಸದೆ ಕೆಲಸ ಮಾಡಿದ್ದಾರೆಂದು ಹೇಳಿದರು. ಈಗಾಗಲೇ ಮಲ್ಲೇಶ್ವರ ಕ್ಷೇತ್ರದಲ್ಲಿ ಎಲ್ಲ ಪೌರ ಕಾರ್ಮಿಕರಿಗೆ ವ್ಯಾಕ್ಸಿನೇಷನ್‌ ಆಗಿದೆ. ಅವರಿಗೆ ಸಕಾಲಕ್ಕೆ ಫುಡ್‌ ಕಿಟ್‌ಗಳನ್ನು ಒದಗಿಸಲಾಗಿದೆ. ಯಾವುದೇ ಸಮಸ್ಯೆ ಇದ್ದರೂ ಆದ್ಯತೆ ಮೇರೆಗೆ ನೆರವಿನ ಹಸ್ತ ಚಾಚಲಾಗುತ್ತಿದೆ ಎಂದು ಸಚಿವರು ಹೇಳಿದರು.