ಬೆಂಗಳೂರು: ಮಾಗಡಿ ರಸ್ತೆಯ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ; ಇಬ್ಬರ ಸಜೀವ ದಹನ, ಮೂವರು ಗಂಭೀರ

ಬೆಂಗಳೂರಿನಲ್ಲಿ ಬಾಯ್ಲರ್‌ ಸ್ಫೋಟಗೊಂಡು ಇಬ್ಬರು ಸಜೀವ ದಹನ ಆಗಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ. ಅಂಜನ್‌ ಚಿತ್ರಮಂದಿರ ಬಳಿಯಿರುವ ಎಂಎಂ ಫುಡ್‌ ಫ್ಯಾಕ್ಟರಿಯಲ್ಲಿ ಅವಘಡ ಸಂಭವಿಸಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.

ಬೆಂಗಳೂರು: ಮಾಗಡಿ ರಸ್ತೆಯ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ; ಇಬ್ಬರ ಸಜೀವ ದಹನ, ಮೂವರು ಗಂಭೀರ
Linkup
ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್‌ ಫ್ಯಾಕ್ಟರಿಯಲ್ಲಿ ಸಂಭವಿಸಿ ಇಬ್ಬರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಅಂಜನ್‌ ಚಿತ್ರಮಂದಿರ ಬಳಿ ಮಧ್ಯಾಹ್ನ 1.45ರ ಸುಮಾರಿಗೆ ಘಟನೆ ನಡೆದಿದೆ. ಬಾಯ್ಲರ್‌ ಸ್ಫೋಟಗೊಂಡ ವೇಳೆ ಎಂಎಂ ಫುಡ್‌ ಫ್ಯಾಕ್ಟರಿಯಲ್ಲಿ 7 ಜನ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಬಿಹಾರ್‌ ಮೂಲದ ಮನೀಶ್‌ ಹಾಗೂ ಸೌರಭ್‌ ಎಂದು ಗುರುತಿಸಲಾಗಿದೆ. ಶಾಂತಿ, ಧನಲಕ್ಷ್ಮೀ ಹಾಗೂ ಸಚಿನ್‌ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಶ್ಚಿಮ ಡಿಸಿಪಿ ಸಂಜೀವ್‌ ಪಾಟೀಲ್‌ ಮಾಹಿತಿ ನೀಡಿದ್ದಾರೆ. ಇನ್ನು, ಸ್ಫೋಟದ ತೀವ್ರತೆ ಫ್ಯಾಕ್ಟರಿ ಪಕ್ಕದಲ್ಲಿದ್ದ ಮನೆಯವರಿಗೂ ತಟ್ಟಿದೆ ಎಂದು ಹೇಳಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ.