ಬೆಂಗಳೂರು ಮೆಟ್ರೋ: 2A, 2B ಹಂತದ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ!

ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಯ 2ಎ ಮತ್ತು 2ಬಿ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ನಡೆದ ಕೆಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗೆ 14,788 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ

ಬೆಂಗಳೂರು ಮೆಟ್ರೋ: 2A, 2B ಹಂತದ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ!
Linkup
ಬೆಂಗಳೂರು: ನಗರದಲ್ಲಿ ಕೊರೊನಾ ಹೆಮ್ಮಾರಿ ಹಬ್ಬುತ್ತಿರುವ ನಡುವೆಯೇ ಬೆಂಗಳೂರಿಗರಿಗೆ ಸಿಹಿ ಸುದ್ದಿ ಇದೆ. ಬೆಂಗಳೂರಿನ ನಮ್ಮ ಮೆಟ್ರೋ ಯೋಜನೆಯ 2ಎ ಮತ್ತು 2ಬಿ ಹಂತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ನಡೆದ ಕೆಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಈ ಕುರಿತು ಟ್ವೀಟ್ ಮಾಡಿದ್ದು, ರೈಲು 2ಎ ಮತ್ತು 2ಬಿ ಹಂತಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಒಟ್ಟು 58.19 ಕಿಲೋಮೀಟರ್ ಉದ್ದದ ಈ ಯೋಜನೆಗೆ 14,788 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೆಟ್ರೋ 2ಎ ಹಂತದಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂವರೆಗೆ ಮತ್ತು 2ಬಿ ಹಂತದಲ್ಲಿ ಕೆ.ಆರ್‌ ಪುರಂನಿಂದ ಹೆಬ್ಬಾಳ ಜಂಕ್ಷನ್ ಮಾರ್ಗವಾಗಿ ವಿಮಾನ ನಿಲ್ದಾಣದವರೆಗೂ ಮೆಟ್ರೋ ರೈಲು ಯೋಜನೆಯನ್ನು ರೂಪಿಸಲಾಗುತ್ತಿದೆ. ರಾಜ್ಯ ಸರ್ಕಾರದಿಂದಲೂ ಒಪ್ಪಿಗೆ ಈ ಎರಡೂ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ. ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನದಲ್ಲಿ ಸ್ವಲ್ಪ ಮೊತ್ತವನ್ನೂ ಬಿಡುಗಡೆ ಮಾಡಿದೆ. ಈ ಅನುದಾನ ಬಳಸಿ ಬಿಎಂಆರ್‌ಸಿಎಲ್‌ ಭೂಸ್ವಾಧೀನ ಹಾಗೂ ಅಗತ್ಯ ಮೂಲಸೌಕರ್ಯಗಳ ಸ್ಥಳಾಂತರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. 2ಎ ಹಂತವನ್ನು ಎರಡು ಪ್ಯಾಕೇಜ್‌ಗಳಲ್ಲಿ ಅನುಷ್ಠಾನಗೊಳಿಸಲು ಬಿಎಂಆರ್‌ಸಿಎಲ್‌ ಸಿದ್ಧತೆ ನಡೆಸಿದೆ. ಪ್ಯಾಕೇಜ್‌–1ರಡಿ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ನಿಲ್ದಾಣದಿಂದ ಕಾಡುಬೀಸನಹಳ್ಳಿವರೆಗಿನ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಪ್ಯಾಕೇಜ್‌–2ರಡಿ ಕಾಡುಬೀಸನಹಳ್ಳಿಯಿಂದ ಕೆ.ಆರ್‌.ಪುರದವರೆಗಿನ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. 2ಎ ಹಂತದ ಈ ಎರಡು ಪ್ಯಾಕೇಜ್‌ಗಳ ಟೆಂಡರ್‌ ಪ್ರಕ್ರಿಯೆಯೂ ಮುಕ್ತಾಯದ ಹಂತದಲ್ಲಿದೆ. 2ಬಿ ಹಂತವನ್ನು ನಾಲ್ಕು ಪ್ಯಾಕೇಜ್‌ಗಳ ಮೂಲಕ ಅನುಷ್ಠಾನಗೊಳಿಸಲು ಬಿಎಂಆರ್‌ಸಿಎಲ್‌ ಮುಂದಾಗಿದೆ.
  • ಪ್ಯಾಕೇಜ್‌1: ಕೆ.ಆರ್‌.ಪುರದಿಂದ ಕೆಂಪಾಪುರದವರೆಗಗೆ
  • ಪ್ಯಾಕೇಜ್‌–2: ಕೆಂಪಾಪುರದಿಂದ ಬಾಗಲೂರು ಕ್ರಾಸ್‌ವರೆಗೆ
  • ಪ್ಯಾಕೇಜ್‌–3: ಬೆಟ್ಟಹಲಸೂರು ಹಾಗೂ ದೊಡ್ಡಜಾಲ ವರೆಗೆ
  • ಪ್ಯಾಕೇಜ್‌–4: ವಿಮಾನನಿಲ್ದಾಣದಲ್ಲಿ ನಿರ್ಮಾಣವಾಗುವ ಎರಡು ಮೆಟ್ರೊ ನಿಲ್ದಾಣಗಳು ಹಾಗೂ ಡಿಪೊ