ಬೆಂಗಳೂರಿನ ಅಪಾರ್ಟ್‌ಮೆಂಟ್‌ ವಾಸಿಗಳೇ ಹುಷಾರ್..! ಯಾಮಾರಿದ್ರೆ ಅಮರಿಕೊಳ್ಳುತ್ತೆ ಕೊರೊನಾ..!

ಪಾಲಿಕೆ ವ್ಯಾಪ್ತಿಯ ಕೆಲವೊಂದು ಅಪಾರ್ಟ್‌ಮೆಂಟ್‌ಗಳಲ್ಲಿ ಅಧಿಕ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಆದ ಕಾರಣ, ನಿಯಮಗಳನ್ನು ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಸೋಂಕಿತರನ್ನು ಪ್ರತ್ಯೇಕವಾಗಿರಿಸಬೇಕು.

ಬೆಂಗಳೂರಿನ ಅಪಾರ್ಟ್‌ಮೆಂಟ್‌ ವಾಸಿಗಳೇ ಹುಷಾರ್..! ಯಾಮಾರಿದ್ರೆ ಅಮರಿಕೊಳ್ಳುತ್ತೆ ಕೊರೊನಾ..!
Linkup
: ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲೂ ಸೋಂಕು ಹರಡುವ ಸಾಧ್ಯತೆಗಳಿವೆ. ಹಾಗಾಗಿ, ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ಕೋವಿಡ್‌ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ತಿಳಿಸಿದರು. ಅಪಾರ್ಟ್‌ಮೆಂಟ್‌ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ ಬುಧವಾರ ವರ್ಚುಯಲ್‌ ಸಭೆ ನಡೆಸಿದ ಅವರು, 'ಪಾಲಿಕೆ ವ್ಯಾಪ್ತಿಯ ಕೆಲವೊಂದು ಅಪಾರ್ಟ್‌ಮೆಂಟ್‌ಗಳಲ್ಲಿ ಅಧಿಕ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿವೆ. ಆದ ಕಾರಣ, ನಿಯಮಗಳನ್ನು ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಸೋಂಕಿತರನ್ನು ಪ್ರತ್ಯೇಕವಾಗಿರಿಸಬೇಕು. ಪ್ರಾಥಮಿಕ, ದ್ವಿತೀಯ ಸಂಪರ್ಕಿತರು ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಪರೀಕ್ಷೆ ಮಾಡಿಸಿ ಕ್ವಾರಂಟೈನ್‌ಗೆ ಒಳಪಡಿಸಬೇಕು' ಎಂದು ಮನವಿ ಮಾಡಿಕೊಂಡರು. ವ್ಯಾಪಾರಿಗಳ ಸಂಘದೊಂದಿಗೆ ಸಭೆ: 'ವ್ಯಾಪಾರ ವಹಿವಾಟಿಗೆ ತೊಂದರೆಯಾಗದಂತೆ ಸರಕಾರ ಅನ್‌ಲಾಕ್‌ ಮಾಡಿ, ಅನುಕೂಲ ಮಾಡಿಕೊಟ್ಟಿದೆ. ಆದರೆ, ಹಲವು ವಾಣಿಜ್ಯ ಪ್ರದೇಶಗಳಲ್ಲಿ ಕೋವಿಡ್‌ ಪಾಲನೆಯಾಗುತ್ತಿಲ್ಲ' ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಟ್ರೇಡರ್ಸ್‌ ಅಸೋಸಿಯೇಷನ್‌ನ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, 'ವರ್ತಕರು ಕಡ್ಡಾಯವಾಗಿ ನಿಯಮಗಳನ್ನು ಅನುಸರಿಸಬೇಕು. ಗ್ರಾಹಕರು ಹಾಗೂ ಸಿಬ್ಬಂದಿಗೆ ಮಾಸ್ಕ್‌ ಧರಿಸಲು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಬೇಕು. ಸ್ಯಾನಿಟೈಸರ್‌ ವ್ಯವಸ್ಥೆ ಮಾಡಬೇಕು. ನಿಯಮ ಉಲ್ಲಂಘಿಸಿದವರಿಗೆ ಮಾರ್ಷಲ್‌, ಪೊಲೀಸ್‌ ಸಿಬ್ಬಂದಿಯು ದಂಡ ವಿಧಿಸಲಿದ್ದಾರೆ' ಎಂದು ಎಚ್ಚರಿಕೆ ನೀಡಿದರು.