ಬೆಂಗಳೂರಿನ ಕಾಲೇಜ್‌ನಲ್ಲಿ ಕೋವಿಡ್ ಸ್ಫೋಟ..! 60 ವಿದ್ಯಾರ್ಥಿನಿಯರಿಗೆ ಸೋಂಕು..!

ಆನೇಕಲ್ ಬಳಿಯ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ 60ಕ್ಕೂ ಹೆಚ್ಚು ಪಿಯು ವಿದ್ಯಾರ್ಥಿನಿಯರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಈ ಕಾಲೇಜಿನಲ್ಲಿ ಒಟ್ಟು 480 ವಿದ್ಯಾರ್ಥಿಗಳಿದ್ದಾರೆ.

ಬೆಂಗಳೂರಿನ ಕಾಲೇಜ್‌ನಲ್ಲಿ ಕೋವಿಡ್ ಸ್ಫೋಟ..! 60 ವಿದ್ಯಾರ್ಥಿನಿಯರಿಗೆ ಸೋಂಕು..!
Linkup
: ಹೋದೆಯಾ ಪಿಶಾಚಿ ಎಂದರೆ ಬಂದೆ ಗವಾಕ್ಷಿಯಲ್ಲಿ ಎಂಬಂತಾಗಿದೆ ವೈರಸ್ ಪರಿಸ್ಥಿತಿ.. ರಾಜ್ಯದಲ್ಲಿ 2ನೇ ಅಲೆ ತಗ್ಗಿತು ಎಂಬ ಕಾರಣಕ್ಕೆ ಶಾಲಾ - ಕಾಲೇಜುಗಳನ್ನು ತೆರೆಯಲಾಗುತ್ತಿದೆ. ಆದ್ರೆ, ಈ ಶಾಲಾ ಕಾಲೇಜುಗಳೇ ಇದೀಗ ಕೋವಿಡ್ ಹಾಟ್‌ಸ್ಪಾಟ್ ಆಗುವಂತೆ ಕಂಡು ಬರ್ತಿದೆ. ಕೆಲ ದಿನಗಳ ಹಿಂದೆ ಕೆಜಿಎಫ್‌ನ ನರ್ಸಿಂಗ್ ಕಾಲೇಜ್‌ನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಬಂದ ರೀತಿಯಲ್ಲೇ, ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಾಲೇಜ್‌ನಲ್ಲೂ ಪರಿಸ್ಥಿತಿ ಎದುರಾಗಿದೆ. ಆನೇಕಲ್ ಬಳಿಯ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ 60ಕ್ಕೂ ಹೆಚ್ಚು ಪಿಯು ವಿದ್ಯಾರ್ಥಿನಿಯರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಈ ಕಾಲೇಜಿನಲ್ಲಿ ಒಟ್ಟು 480 ವಿದ್ಯಾರ್ಥಿಗಳಿದ್ದಾರೆ ಹಾಗೂ 55ಕ್ಕೂ ಹೆಚ್ಚು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದಾರೆ. ಸೋಂಕು ಪತ್ತೆಯಾಗಿದ್ದು ಹೇಗೆ..?: ಭಾನುವಾರ ಈ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ವಾಂತಿ ಹಾಗೂ ಭೇದಿಯಿಂದ ಬಳಲುತ್ತಿದ್ದ. ಈ ವೇಳೆ ಆತನನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಮವಾರ ಆರ್‌ಟಿಪಿಸಿಆರ್‌ ಪರೀಕ್ಷೆಯ ಮೂಲಕವೂ ಆತನಿಗೆ ಕೊರೊನಾ ಸೋಂಕು ಇರೋದನ್ನು ದೃಢಪಡಿಸಿಕೊಳ್ಳಲಾಯ್ತು. ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯು ಸ್ಥಳೀಯ ಖಾಸಗಿ ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಆಸ್ಪತ್ರೆ ಸಿಬ್ಬಂದಿ ಕಾಲೇಜಿಗೆ ಧಾವಿಸಿ ಶಿಕ್ಷಣ ಸಂಸ್ಥೆಯಲ್ಲಿ ಇರುವ ಪ್ರತಿಯೊಬ್ಬರನ್ನೂ ಪರೀಕ್ಷೆಗೆ ಒಳಪಡಿಸಿತು. ಈ ವೇಳೆ 60 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ನಗರ ಜಿಲ್ಲಾ ಡೆಪ್ಯುಟಿ ಕಮೀಷನರ್ ಜೆ ಮಂಜುನಾಥ್ ತಿಳಿಸಿದ್ದಾರೆ. ಕಳೆದ ಭಾನುವಾರ ಹಾಗೂ ಸೋಮವಾರ ಕಾಲೇಜಿನ ಎಲ್ಲಾ ಹಾಗೂ ಬೋಧಕ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಕಾಲೇಜಿನಲ್ಲಿ ಇರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ. ಹೀಗಿದ್ದರೂ ಎಲ್ಲರ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಲಾಗಿದೆ. ಲಸಿಕೆ ಪಡೆದವರಲ್ಲೂ ಸೋಂಕು ಇದೆಯೇ ಎಂದು ಪತ್ತೆ ಮಾಡಲಾಗುತ್ತಿದೆ ಎಂದು ಮಂಜುನಾಥ್ ತಿಳಿಸಿದ್ದಾರೆ. ಇದೀಗ ಪತ್ತೆಯಾಗಿರುವ 60 ಪ್ರಕರಣಗಳಲ್ಲಿ ಇಬ್ಬರಿಗೆ ಮಾತ್ರ ಸೋಂಕಿನ ಲಕ್ಷಣಗಳಿವೆ. ಮಿಕ್ಕ 58 ಮಂದಿಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲ. ಒಟ್ಟು 60 ಸೋಂಕಿತ ವಿದ್ಯಾರ್ಥಿಗಳ ಪೈಕಿ 14 ವಿದ್ಯಾರ್ಥಿಗಳು ತಮಿಳುನಾಡು ಮೂಲದವರು. ಮಿಕ್ಕವರು ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿನಿಯರು ಎಂದು ಮಾಹಿತಿ ಲಭ್ಯವಾಗಿದೆ. ಸೋಂಕಿನ ಲಕ್ಷಣ ಇರುವ ಒಬ್ಬ ವಿದ್ಯಾರ್ಥಿನಿಯನ್ನು ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಮಿಕ್ಕ ಸೋಂಕಿತ ವಿದ್ಯಾರ್ಥಿಗಳಿಗೆ ಅವರ ಪೋಷಕರೇ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಕೊರೊನಾಗೆ ಮುನ್ನ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಪ್ರತಿ ರೂಂನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಇರಿಸಲಾಗುತ್ತಿತ್ತು. ಇದೀಗ ಕೇವಲ ಇಬ್ಬರು ವಿದ್ಯಾರ್ಥಿಗಳು ಒಂದು ರೂಂನಲ್ಲಿ ಇರುತ್ತಾರೆ. ಹೀಗಿದ್ದರೂ ಸೋಂಕು ವ್ಯಾಪಿಸಿದೆ. ಕೊರೊನಾ ಪಾಸಿಟಿವ್ ದೃಢಪಟ್ಟಿರುವ ವಿದ್ಯಾರ್ಥಿಗಳನ್ನು ಐಸೋಲೇಷನ್‌ನಲ್ಲಿ ಇರಿಸಲಾಗಿದೆ. 7ನೇ ದಿನ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.