ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!

ಸಿಲಿಕಾನ್ ಸಿಟಿಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಮುಂದಿನ ಎರಡು ದಿನ ಗರಿಷ್ಠ 29 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!
Linkup
ಬೆಂಗಳೂರು: ನಗರದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ, ಸೋಮವಾರ ಕೊಂಚ ಬಿಡುವು ನೀಡಿತ್ತು. ಆದರೆ, ಕಡಿಮೆಯಾಗಿಲ್ಲ. ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಸೋಮವಾರ ಹೊಯ್ಸಳ ನಗರದಲ್ಲಿ ತುಂತುರು ಮಳೆಯಾದ ಬಗ್ಗೆ ವರದಿಯಾಗಿದ್ದು ಬಿಟ್ಟರೆ ಬೇರೆಲ್ಲೂ ಮಳೆಯಾಗಿಲ್ಲ. ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಗರದ ರಸ್ತೆ, ಚರಂಡಿ ಕಾಮಗಾರಿಗಳು ಅರ್ಧದಲ್ಲೇ ನಿಂತಿದ್ದು, ಜನರ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಶಿವಾಜಿನಗರ ಆಸುಪಾಸಿನಲ್ಲಿ ಮೆಟ್ರೊ ಸೇರಿದಂತೆ ರಸ್ತೆ, ಚರಂಡಿ, ಕಟ್ಟಡ ಕಾಮಗಾರಿ ನಡೆಯುತ್ತಿದ್ದು ಸಣ್ಣ ಮಳೆ ಬಂದರೂ ನಡೆದಾಡುವುದಕ್ಕೆ ಸಾಧ್ಯವಿಲ್ಲ. ಇಲ್ಲಿ ಮಳೆ ನೀರು ರಸ್ತೆ ಬಿಟ್ಟು ಬೇರೆಲ್ಲೂ ಹರಿಯುವುದಕ್ಕೆ ಸ್ಥಳವೇ ಇಲ್ಲದಂತಾಗಿದೆ. ಇದೇ ರೀತಿ ನಗರದ ಹೃದಯ ಭಾಗಗಳಾದ ಕೆ.ಆರ್‌. ಮಾರುಕಟ್ಟೆ, ಗಾಂಧಿನಗರ, ರಾಜಭವನ ರಸ್ತೆಯಲ್ಲೂ ಸಾಕಷ್ಟು ಕಾಮಗಾರಿ ನಡೆಯುತ್ತಿದ್ದು, ಎಲ್ಲವೂ ಮಳೆಯಲ್ಲಿ ತೊಳೆದುಕೊಂಡು ಹೋಗಿ ಅಪಾರ ಹಾನಿ ಸಂಭವಿಸುತ್ತಿದೆ. ನಗರದಲ್ಲಿ ಮುಂದಿನ ಎರಡು ದಿನ ಗರಿಷ್ಠ 29 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ.